ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Viral Video: ಕುಡಿದ ಮತ್ತಿನಲ್ಲಿ ಯೋಧರೊಂದಿಗೆ ಮಹಿಳೆಯ ಅನುಚಿತವಾಗಿ ವರ್ತನೆ; ವಿಡಿಯೊ ವೈರಲ್‌

ಕುಡಿದ ಮತ್ತಿನಲ್ಲಿದ್ದ ಮಹಿಳೆಯೊಬ್ಬಳು ಕರ್ತವ್ಯಕ್ಕೆ ತೆರಳುತ್ತಿದ್ದ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಯೋಧರ ಬಸ್‍ಗೆ ಪದೇ ಪದೇ ಅಡ್ಡಬಂದು ಪ್ರಯಾಣಕ್ಕೆ ಅಡ್ಡಿಪಡಿಸಿದ್ದಾಳೆ. ಇದರಿಂದ ಕೋಪಗೊಂಡ ಯೋಧರು ರಸ್ತೆಯಲ್ಲಿ ಆಕೆಯ ಜೊತೆ ಜಗಳವಾಡಿದ್ದಾರೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ.

ಗುಂಡಿನ ಮತ್ತಿನಲ್ಲಿ ಯೋಧನ ಜೊತೆ ಮಹಿಳೆ ಮಾಡಿದ್ದೇನು ಗೊತ್ತಾ?

Profile pavithra Mar 6, 2025 11:27 AM

ನವದೆಹಲಿ: ಕುಡಿದ ಮತ್ತಿನಲ್ಲಿ ಜನರು ಮಾಡುವ ಅವಾಂತರಗಳು ಒಂದೆರಡಲ್ಲ. ಮತ್ತಿನಲ್ಲಿದ್ದ ಜನರಿಗೆ ತಾವು ಎಲ್ಲಿದ್ದೇವೆ? ಏನು ಮಾಡುತ್ತಿದ್ದೇವೆ? ಎಂದೇ ತಿಳಿಯುವುದಿಲ್ಲ. ಹೀಗಿರುವಾಗ ಮದ್ಯದ ಅಮಲಿನಲ್ಲಿದ್ದ ಮಹಿಳೆಯೊಬ್ಬಳು ಕರ್ತವ್ಯಕ್ಕೆ ತೆರಳುತ್ತಿದ್ದ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) ಯೋಧರೊಂದಿಗೆ ವಾಗ್ವಾದ ನಡೆಸಿದ ಘಟನೆ ನಡೆದಿದೆ. ದೆಹಲಿಯ ಹೆದ್ದಾರಿಯ ಮಧ್ಯದಲ್ಲಿ ಮಹಿಳೆ ಮತ್ತು ಐಟಿಬಿಪಿ ಯೋಧರ ನಡುವೆ ನಡೆದ ವಾಗ್ವಾದ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿ ವೈರಲ್(Viral Video) ಆಗಿದೆ.

ವರದಿಗಳ ಪ್ರಕಾರ, ಮಹಿಳೆ ತನ್ನ ಕಾರನ್ನು ಯೋಧರ ಬಸ್ ಮುಂದೆ ಪದೇ ಪದೆ ನಿಲ್ಲಿಸಿ ಅವರ ಪ್ರಯಾಣಕ್ಕೆ ಅಡ್ಡಿಪಡಿಸಿದ್ದಾಳಂತೆ. ಮಹಿಳೆ ಮದ್ಯದ ಅಮಲಿನಲ್ಲಿ ವಾಹನ ಚಲಾಯಿಸುತ್ತಿದ್ದಳು ಎಂದು ಆರೋಪಿಸಲಾಗಿದೆ. ಸದ್ಯ ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಐಟಿಬಿಪಿ ಯೋಧರೊಂದಿಗೆ ಅನುಚಿತವಾಗಿ ವರ್ತಿಸಿದ್ದಕ್ಕಾಗಿ ಆಕೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸೋಶಿಯಲ್ ಮಿಡಿಯಾದಲ್ಲಿ ನೆಟ್ಟಿಗರು ಒತ್ತಾಯಿಸಿದ್ದಾರೆ.



ವೈರಲ್ ಆದ ವಿಡಿಯೊದಲ್ಲಿ ಮಹಿಳೆ ಬಿಳಿ ಬಣ್ಣದ ಹ್ಯುಂಡೈ ಕ್ರೆಟಾವನ್ನು ಓಡಿಸುವುದು ಸೆರೆಯಾಗಿದೆ. ಟ್ರಾಫಿಕ್ ಜಾಮ್ ನಡುವೆ ಐಟಿಬಿಪಿ ಯೋಧರು ತಮ್ಮ ಬಸ್ ಅನ್ನು ರಸ್ತೆಯ ಬದಿಯಲ್ಲಿ ಆಕೆಯ ಕಾರಿನ ಹಿಂದೆ ನಿಲ್ಲಿಸಿದ್ದಾರೆ. ಮಹಿಳೆ ರಸ್ತೆಯ ಮಧ್ಯದಲ್ಲಿ ಹೈಡ್ರಾಮಾ ಶುರುಮಾಡಿದ್ದಾಳಂತೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ಪೊಲೀಸ್ ಕ್ರಮದ ಬಗ್ಗೆ ವರದಿಯಾಗಿಲ್ಲ. ಘಟನೆಯ ನಿಖರ ಸಮಯ ಮತ್ತು ಸ್ಥಳ ತಿಳಿದುಬಂದಿಲ್ಲ. ಆದರೆ ಈ ವಿಡಿಯೊವನ್ನು ಬುಧವಾರ (ಮಾರ್ಚ್ 05) ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ ಮತ್ತು ಇದು ಅನೇಕರ ಗಮನ ಸೆಳೆದು ವೈರಲ್ ಆಗಿದೆ. ಐಟಿಬಿಪಿ ಯೋಧರೊಂದಿಗೆ ಅನುಚಿತವಾಗಿ ವರ್ತಿಸಿದ್ದಕ್ಕಾಗಿ ಆಕೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸೋಶಿಯಲ್ ಮಿಡಿಯಾದಲ್ಲಿ ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ.

ಈ ಸುದ್ದಿಯನ್ನೂ ಓದಿ:‌Viral News: ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿದ ಚಾಲಕ; 8 ಬೈಕ್‍ಗಳಿಗೆ ಡಿಕ್ಕಿ, 3 ಮಂದಿಗೆ ಗಾಯ- ಶಾಕಿಂಗ್‌ ವಿಡಿಯೊ ವೈರಲ್

ತೆಲಂಗಾಣದ ಜಂಗಾವ್‍ನಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಎಂಟು ಬೈಕ್‍ಗಳಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಕುಡಿದ ಮತ್ತಿನಲ್ಲಿ ಚಾಲಕ ಕಾರು ಚಲಾಯಿಸಿದ ಕಾರಣ ತನ್ನ ಕಾರಿನ ಮೇಲೆ ನಿಯಂತ್ರಣ ಕಳೆದುಕೊಂಡು ನಿಂತಿದ್ದ ಬೈಕ್‍ಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಇದರ ಪರಿಣಾಮ ಮೂವರು ಗಾಯಗೊಂಡಿದ್ದಾರೆ. ಈ ಭಯಾನಕ ದೃಶ್ಯ ಹತ್ತಿರದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.