ವಿದೇಶ ಫ್ಯಾಷನ್‌ ಲೋಕ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್‌ ಹೌಸ್‌ ಸಂಪಾದಕೀಯ

Viral Video: ಅನ್ಯಕೋಮಿನ ವ್ಯಕ್ತಿಯಿಂದ ಬಾಗೇಶ್ವರ ಧಾಮದ ಪಂಡಿತ್ ಧೀರೇಂದ್ರ ಕೃಷ್ಣ ಶಾಸ್ತ್ರಿಗೆ ಅಪಮಾನ; ವಿಡಿಯೊ ಇದೆ

ಬಾಗೇಶ್ವರ ಧಾಮದ ಮುಖ್ಯಸ್ಥ ಪಂಡಿತ್ ಧೀರೇಂದ್ರ ಕೃಷ್ಣ ಶಾಸ್ತ್ರಿ ಅವರ ವಿರುದ್ಧ ಮಧ್ಯಪ್ರದೇಶದ ಪಾನಿಹಾರ್ ಗ್ರಾಮದ ಆದಿಲ್ ಹುಸೇನ್ ಎಂಬ ವ್ಯಕ್ತಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಅದನ್ನು ವಿಡಿಯೊ ಮಾಡಿ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದಾನೆ. ಇದು ವೈರಲ್(Viral Video)ಆಗಿದ್ದು, ಈ ವಿಡಿಯೊ ಬಗ್ಗೆ ಹಿಂದೂ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿವೆ.

ಪಂಡಿತ್ ಧೀರೇಂದ್ರ ಶಾಸ್ತ್ರಿ ಬಗ್ಗೆ ಮುಸ್ಲಿಂ ವ್ಯಕ್ತಿ ನಿಂದನೆ!

ಪಂಡಿತ್ ಧೀರೇಂದ್ರ ಕೃಷ್ಣ ಶಾಸ್ತ್ರಿ

Profile pavithra Feb 28, 2025 12:42 PM

ಭೋಪಾಲ್: ಬಾಗೇಶ್ವರ ಧಾಮದ ಮುಖ್ಯಸ್ಥ ಪಂಡಿತ್ ಧೀರೇಂದ್ರ ಕೃಷ್ಣ ಶಾಸ್ತ್ರಿ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ವ್ಯಕ್ತಿಯೊಬ್ಬ ಅದನ್ನು ವಿಡಿಯೊ ರೆಕಾರ್ಡ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾನೆ. ಇದು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆದ ನಂತರ ವಿವಾದ ಭುಗಿಲೆದ್ದಿದೆ. ಹಿಂದೂ ಸಂಘಟನೆಗಳು ಈ ನಿಂದನೆಯನ್ನು ತೀವ್ರವಾಗಿ ಖಂಡಿಸಿವೆ ಮತ್ತು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿವೆ.
ಆರೋಪಿಯನ್ನು ಮಧ್ಯಪ್ರದೇಶದ ಪಾನಿಹಾರ್ ಗ್ರಾಮದ ಆದಿಲ್ ಹುಸೇನ್ ಎಂದು ಗುರುತಿಸಲಾಗಿದೆ. ಬಾಗೇಶ್ವರ ಧಾಮದಲ್ಲಿ ಬುಧವಾರ (ಫೆಬ್ರವರಿ 26)ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲಾಗಿತ್ತು. ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿ ಧೀರೇಂದ್ರ ಶಾಸ್ತ್ರಿ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿ, ವಿಡಿಯೊ ರೆಕಾರ್ಡ್ ಮಾಡಿ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದಾನೆ.



ಹಿಂದೂ ಸಂಘಟನೆಗಳು ಆರೋಪಿಯ ಈ ಕೃತ್ಯವನ್ನು ಖಂಡಿಸಿದ್ದು, ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ ಮತ್ತು ಆತನ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕರೆ ನೀಡಿದ್ದಾರೆ. ಆದರೆ ಅಧಿಕಾರಿಗಳು ಇನ್ನೂ ಹಿಂದೂಪರ ಸಂಘಟನೆಗಳ ಬೇಡಿಕೆಗಳಿಗೆ ಸ್ಪಂದಿಸಿಲ್ಲವಂತೆ. ಈ ನಡುವೆ ಆರೋಪಿಯ ಫೇಸ್‌ಬುಕ್‌ ಪ್ರೊಫೈಲ್ ಕೂಡ ಭಾರಿ ಗಮನ ಸೆಳೆದಿದೆ. ಅವನ ಪ್ರೊಫೈಲ್‍ನಲ್ಲಿ ಆತ ತನ್ನ ಶಿಕ್ಷಣವನ್ನು 'ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯ' ದಿಂದ ಪಡೆದಿದ್ದಾನೆ ಮತ್ತು ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕದ ಕ್ಯಾಲಿಫೋರ್ನಿಯಾ ನಗರದಲ್ಲಿ ವಾಸವಾಗಿದ್ದಾನೆ ಎಂಬುದಾಗಿ ಬರೆದುಕೊಂಡಿದ್ದಾನೆ.

ಪಂಡಿತ್ ಧೀರೇಂದ್ರ ಶಾಸ್ತ್ರಿ ಇತ್ತೀಚೆಗೆ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗಾಗಿ ಎರಡು ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹಾಗಾಗಿ 251 ಜೋಡಿಗಳ ಸಾಮೂಹಿಕ ವಿವಾಹ ಉತ್ಸವದಲ್ಲಿ ಭಾಗವಹಿಸಲು ರಾಷ್ಟ್ರಪತಿ ಮುರ್ಮು ಬುಧವಾರ ಪಂಡಿತ್ ಧೀರೇಂದ್ರ ಶಾಸ್ತ್ರಿ ಅವರ ಧಾಮಕ್ಕೆ ಆಗಮಿಸಿದರು. ಹಾಗೇ ಮಧ್ಯಪ್ರದೇಶದ ಛತ್ತರ್ಪುರ ಜಿಲ್ಲೆಯಲ್ಲಿ ಬಾಗೇಶ್ವರ್ ಧಾಮ್ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಗೆ ಪ್ರಧಾನಿ ಮೋದಿ ಭಾನುವಾರ(ಫೆಬ್ರವರಿ 23) ಶಂಕುಸ್ಥಾಪನೆ ಕಾರ್ಯಕ್ರಮವನ್ನು ನೆರವೇರಿಸಿದ್ದಾರೆ. ಬಾಗೇಶ್ವರ ಧಾಮದ ಮುಖ್ಯಸ್ಥ ಧೀರೇಂದ್ರ ಶಾಸ್ತ್ರಿ ಅವರಿಗೆ ಈ ಹಿಂದೆ ಸೋಶಿಯಲ್ ಮೀಡಿಯಾದಲ್ಲಿ ಕೊಲೆ ಬೆದರಿಕೆಗಳು ಬಂದಿವೆ ಎಂದು ವರದಿಯಾಗಿತ್ತು.

ಈ ಸುದ್ದಿಯನ್ನೂ ಓದಿ:Bhajan Lal Sharma: ರಾಜಸ್ಥಾನ ಸಿಎಂ ಭಜನ್ ಲಾಲ್ ಶರ್ಮಾಗೆ ಜೀವ ಬೆದರಿಕೆ-ಜೈಲಿನಿಂದಲೇ ಬಂದಿತ್ತು ಕರೆ

ಇತ್ತೀಚೆಗೆ ರಾಜಸ್ಥಾನದ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾಗೆ ಜೀವ ಬೆದರಿಕೆ ಬಂದಿದೆ. ದೌಸಾದ ಸಲಸ್ವಾಲ್ ಜೈಲಿನ ಕೈದಿಯೊಬ್ಬ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 29 ವರ್ಷದ ರಿಂಕು ಜೈಪುರ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಮುಖ್ಯಮಂತ್ರಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ತಿಳಿದು ಬಂದಿದೆ.