Virat Kohli: ದುಬೈನಲ್ಲಿ ಮಸ್ತ್ ಸ್ಟೆಪ್ ಹಾಕಿದ ವಿರಾಟ್- ಅನುಷ್ಕಾ; ಇಲ್ಲಿದೆ ವಿಡಿಯೊ
ಕ್ರಿಕೆಟ್ ಪ್ರಿಯರ ನೆಚ್ಚಿನ ಆಟಗಾರ ವಿರಾಟ್ ಕೊಹ್ಲಿಗೆ ಸಾಕಷ್ಟು ಅಭಿಮಾನಿಗಳಿದ್ದಾರೆ. ಇನ್ನು ಅವರ ಪತ್ನಿ, ನಟಿ ಅನುಷ್ಕಾ ಶರ್ಮಾ ಕೂಡ ಸಾಕಷ್ಟು ಫ್ಯಾನ್ಸ್ ಫಾಲೋವರ್ಸ್ ಹೊಂದಿದ್ದಾರೆ. ಇದೀಗ ಈ ಜೋಡಿಯ ವಿಡಿಯೊವೊಂದು ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ. ವಿರಾಟ್ ಮತ್ತು ಅನುಷ್ಕಾ ಮುದ್ದಾದ ಜೋಡಿ ಚಲನಚಿತ್ರ ಸೆಟ್ ಒಂದರಲ್ಲಿ ಒಟ್ಟಿಗೆ ನೃತ್ಯ ಮಾಡಿ ಸಂಭ್ರಮಿಸಿದ್ದಾರೆ.

Virat Kohli's Dance

ನವದೆಹಲಿ: ಭಾರತೀಯ ಕ್ರಿಕೆಟ್ ಕಿಂಗ್ ವಿರಾಟ್ ಕೊಹ್ಲಿ (Virat Kohli) ಮತ್ತು ನಟಿ ಅನುಷ್ಕಾ ಶರ್ಮಾ (Anushka Sharma) ದಂಪತಿ ಸದಾ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಲ್ಲಿರುತ್ತಾರೆ. ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ನಟಿ ಅನುಷ್ಕಾ ಶರ್ಮಾ ಸಾಕಷ್ಟು ಫ್ಯಾನ್ಸ್ ಫಾಲೋವರ್ಸ್ ಹೊಂದಿದ್ದಾರೆ. ಇನ್ನೂ ಕ್ರಿಕೆಟ್ ಪ್ರಿಯರ ನೆಚ್ಚಿನ ಆಟಗಾರ ವಿರಾಟ್ ಕೊಹ್ಲಿಗೂ ಹೆಚ್ಚು ಅಭಿಮಾನಿಗಳಿದ್ದಾರೆ.ಇದೀಗ ಈ ಜೋಡಿಯ ವಿಡಿಯೊವೊಂದು ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ (Viral Video) ಆಗಿದೆ. ವಿರಾಟ್ ಮತ್ತು ಅನುಷ್ಕಾ ಮುದ್ದಾದ ಜೋಡಿ ಚಲನಚಿತ್ರ ಸೆಟ್ ಒಂದರಲ್ಲಿ ಒಟ್ಟಿಗೆ ನೃತ್ಯ ಮಾಡಿ ಸಂಭ್ರಮಿಸಿದ್ದಾರೆ. ಈ ಹಳೆಯ ವಿಡಿಯೊ ಇದೀಗ ಸಿಕ್ಕಾಪಟ್ಟೆ ಟ್ರೆಂಡ್‌ನಲ್ಲಿದ್ದು ಎಲ್ಲರ ಗಮನ ಸೆಳೆದಿದೆ.
ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಬ್ಯುಸಿ ಶೆಡ್ಯುಲ್ ನಡುವೆಯೂ ದುಬೈಗೆ ತೆರಳಿದ್ದಾರೆ. ಅಲ್ಲಿ ಚಲನಚಿತ್ರ ಸೆಟ್‌ವೊಂದರಲ್ಲಿ ಸ್ನೇಹಿತರ ಜತೆ ಭರ್ಜರಿಯಾಗಿಯೇ ಸ್ಟೆಪ್ ಹಾಕಿದ್ದಾರೆ. ಅನುಷ್ಕಾ ಬಿಳಿ ಬಣ್ಣದ ನಾರ್ಮಲ್ ಟಾಪ್ ಮತ್ತು ಮಲ್ಟಿ ಕಲರ್ ಶೇಡ್ ಹೊಂದಿದ್ದ ಪ್ಯಾಂಟ್‌ನಲ್ಲಿ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ವಿರಾಟ್ ಸ್ಟೈಲಿಶ್ ಪ್ಯಾಂಟ್ ಮತ್ತು ಕ್ರೀಂ ಕಲರ್ ವಿನ್ಯಾಸದ ಶರ್ಟ್‌ನಲ್ಲಿ ಸ್ಟನ್ ಲುಕ್‌ನಿಂದ ಅಭಿಮಾನಿಗಳ ಗಮನ ಸೆಳೆದಿದ್ದಾರೆ.
ಈ ವರ್ಷ ಭಾರತದ ತಂಡ ಚಾಂಪಿಯನ್ಸ್ ಟ್ರೋಫಿ 2025 ಗೆದ್ದು ಬೀಗಿದೆ. ಈ ವೇಳೆ ವಿರಾಟ್ ಹಾಗೂ ಅನುಷ್ಕಾ ದಂಪತಿ ಭರ್ಜರಿ ಸ್ಟೆಪ್ ಹಾಕುವ ಮೂಲಕ ಎಂಜಾಯ್ ಮಾಡಿದ್ದಾರೆ. ವಿಡಿಯೊದಲ್ಲಿ ಸ್ನೇಹಿತರ ಜತೆಗೆ ವಿರಾಟ್ ದಂಪತಿ ಸೇರಿಕೊಂಡು ನೃತ್ಯ ಮಾಡಿರುವುದು ಕಂಡು ಬಂದಿದೆ. ಈ ವಿಡಿಯೊವನ್ನು ಅವರ ಅಭಿಮಾನಿಗಳು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದರು.
2025ರ ಮಾರ್ಚ್‌ನಲ್ಲಿ ಭಾರತೀಯ ಕ್ರಿಕೆಟ್ ತಂಡವು 12 ವರ್ಷಗಳ ನಂತರ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದಿದ್ದು ವಿರಾಟ್ ಅವರನ್ನು ಅನುಷ್ಕಾ ಶರ್ಮಾ ಅಪ್ಪಿಕೊಳ್ಳಲು ಸ್ಟ್ಯಾಂಡ್‌ಗೆ ಆಗಮಿಸಿದ ವಿಡಿಯೊ ಸಹ ವೈರಲ್ ಆಗಿತ್ತು. ಈಗ ದುಬೈನಲ್ಲಿ ಈ ಮುದ್ದು ಜೋಡಿ ಭರ್ಜರಿ ಸ್ಟೆಪ್ ಹಾಕಿ ಎಂಜಾಯ್ ಮಾಡಿದ್ದ ವಿಡಿಯೊ ಕೂಡ ಸಖತ್ ವೈರಲ್ ಆಗುತ್ತಿದೆ. ಈ ಕ್ಯೂಟ್ ಜೋಡಿ ಬಗ್ಗೆ ನೆಟ್ಟಿಗರು ನಾನಾ ಬಗೆಯ ಪ್ರತಿಕ್ರಿಯೆ ನೀಡಿದ್ದು ಈ ಜೋಡಿಗೆ ಯಾವ ಕೆಟ್ಟ ದೃಷ್ಟಿ ಬೀಳದಿರಲಿ ಎಂದು ಅವರ ಅಭಿಮಾನಿಯೊಬ್ಬರು ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇದನ್ನು ಓದಿ: Virat-Anushka : ಪ್ರೇಮಾನಂದ್ ಮಹಾರಾಜರ ಆಶ್ರಮಕ್ಕೆ ತೆರಳಿದ ವಿರುಷ್ಕಾ ದಂಪತಿ!
ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಅವರು 2017ರ ಡಿಸೆಂಬರ್‌ನಲ್ಲಿ ಇಟಲಿಯ ಟಸ್ಕನಿಯಲ್ಲಿ ವಿವಾಹವಾದರು. ಮಗಳು ವಾಮಿಕಾ ಮತ್ತು ಮಗ ಅಕಾಯ್ ಜತೆಗೆ ಆಗಾಗ ಈ ದಂಪತಿ ಸೋಶಿಯಲ್ ಮಿಡಿಯಾದಲ್ಲಿ ಫೋಟೊ ಹಂಚಿಕೊಳ್ಳುತ್ತಿರುತ್ತಾರೆ. ಸದ್ಯ ಅನುಷ್ಕಾ ಶರ್ಮಾ ಸಿನಿಮಾದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳದೆ ಫ್ಯಾಮಿಲಿ ಜತೆ ಬ್ಯುಸಿ ಇರುತ್ತಾರೆ. ಇತ್ತೀಚೆಗಷ್ಟೇ ನೆಟ್‌ಫ್ಲಿಕ್ಸ್‌ನ ʼಕ್ವಾಲಾʼ ಎಂಬ ವೆಬ್ ಸೀರಿಸ್‌ನಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.