ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ವಿದ್ಯಾರ್ಥಿಗಳ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ ಶಿಕ್ಷಕ: ಭಯಾನಕ ವಿಡಿಯೋ ವೈರಲ್‌

Viral News: ಅಸ್ಸಾಂನ ಚರೈಡಿಯೋ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕನೊಬ್ಬ ತರಗತಿಯೊಳಗೆ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿರುವ ದೃಶ್ಯ ಸೆರೆಯಾಗಿದೆ. ಈ ದೌರ್ಜನ್ಯದ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಶಿಕ್ಷಕನ‌ ನಡವಳಿಕೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ವಿದ್ಯಾರ್ಥಿಗಳನ್ನು ಕ್ರೂರವಾಗಿ ಥಳಿಸಿದ ಅಸ್ಸಾಂನ ಶಿಕ್ಷಕ!

ವಿದ್ಯಾರ್ಥಿಗಳನ್ನು ಕ್ರೂರವಾಗಿ ಥಳಿಸಿದ ಅಸ್ಸಾಂನ ಶಿಕ್ಷಕ -

Profile
Pushpa Kumari May 15, 2026 3:43 PM

ಅಸ್ಸಾಂ, ಮೇ 15: ಇತ್ತೀಚೆಗೆ ಸರಕಾರಿ ಶಾಲೆಗಳಲ್ಲಿ ಮಕ್ಕಳ ಮೇಲೆ ಶಿಕ್ಷಕರು ಹಲ್ಲೆ ನಡೆಸಿರುವ ಅನೇಕ ಪ್ರಕರಣಗಳು ನಡೆದಿವೆ. ಇದಕ್ಕೆ ಸಾಕ್ಷಿ ಎಂಬಂತೆ ಅಸ್ಸಾಂನ ಚರೈಡಿಯೋ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕನೊಬ್ಬ ತರಗತಿಯೊಳಗೆ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿರುವ ದೃಶ್ಯ ಸೆರೆಯಾಗಿದೆ. ಈ ದೌರ್ಜನ್ಯದ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದ್ದು (Viral News) ಶಿಕ್ಷಕನ‌ ನಡವಳಿಕೆ ವಿರುದ್ಧ ಆಕ್ರೋಶ ವ್ಯಕ್ತ ವಾಗಿದೆ.

ಆರೋಪಿಯನ್ನು ಮಥುರಾಪುರ ಟಿನಿಯಾಲಿಯ ನಿವಾಸಿ 51 ವರ್ಷದ ಮೊಹಮ್ಮದ್ ಅರಿಫುಲ್ ಇಸ್ಲಾಂ ಎಂದು ಗುರುತಿಸ ಲಾಗಿದೆ. ಈ ದೃಶ್ಯವು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರು ಕಿಡಿಕಾರಿದ್ದು ವಿದ್ಯಾರ್ಥಿ ಗಳ ಸುರಕ್ಷತೆಯ ಬಗ್ಗೆ ಕಳವಳವನ್ನು ವ್ಯಕ್ತ ಪಡಿಸಿದ್ದಾರೆ..

ವಿಡಿಯೋ ನೋಡಿ



ಮೂಲಗಳ ಪ್ರಕಾರ, ಶಿಕ್ಷಕನು ಹಲವಾರು ವಿದ್ಯಾರ್ಥಿಗಳನ್ನು ಹೊಡೆದು ದೈಹಿಕವಾಗಿ ಹಲ್ಲೆಗೆ ಒಳಪಡಿಸುತ್ತಿರುವುದು ಕಂಡು ಬಂದಿದೆ. ಒಂದು ಮಗುವನ್ನು ತರಗತಿಯ ಕಿಟಕಿಯ ಕಡೆಗೆ ತಳ್ಳಲು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ. ಶಾಲೆಯ ಮುಖ್ಯೋಪಾಧ್ಯಾಯರು ತರಗತಿಯ ಸಿಸಿಟಿವಿ ಪರಿಶೀಲನೆ ಮಾಡಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.

Viral News: ಪ್ಲಂಬರ್ ಕೆಲಸ ಮಾಡುವ ವ್ಯಕ್ತಿಯ ವಾರ್ಷಿಕ ಆದಾಯ ಗೊತ್ತಾ? ಐಟಿ ಉದ್ಯೋಗಕ್ಕಿಂತ ಇದೆ ಬೆಸ್ಟ್‌ ಎಂದ ನೆಟ್ಟಿಗರು

ಯಾವುದೇ ಕಾರಣ ಇಲ್ಲದೆಯೇ ವಿದ್ಯಾರ್ಥಿಗಳನ್ನು ಮನಬಂದಂತೆ ಥಳಿಸುತ್ತಿರುವುದು ಕಂಡು ಬಂದಿದೆ. ವಿದ್ಯಾರ್ಥಿ ಗಳಿಂದ ಆತ ಮಸಾಜ್ ಕೂಡ ಮಾಡಿಸಿಕೊಳ್ಳುತ್ತಿದ್ದ ಎಂಬ ಆರೋಪವು ಇದೆ. ದೃಶ್ಯಗಳು ಹೊರಬಂದ ನಂತರ, ಕೋಪಗೊಂಡ ಪೋಷಕರು ಶಾಲಾ ಆವರಣದ ಬಳಿ ಜಮಾಯಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಆರೋಪಿಯನ್ನು ತಕ್ಷಣ ಅಮಾನತುಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ದೃಢಪಡಿಸಿದರು. ಆತನನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದ್ದು ಮಕ್ಕಳ ರಕ್ಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿ ನಿಬಂಧನೆಗಳ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.