ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Viral Video: ಬ್ಯಾಂಕ್ ಮ್ಯಾನೇಜರ್ ಮೇಲೆ ಮುಸುಕುಧಾರಿಗಳಿಂದ ಹಲ್ಲೆ

ಬ್ಯಾಂಕ್ ಮ್ಯಾನೇಜರ್ ಮೇಲೆ ಮೂವರು ಮುಸುಕುಧಾರಿಗಳು ಹಲ್ಲೆ ನಡೆಸಿರುವ ಘಟನೆ ಪಂಜಾಬ್‌ನ ಮೋಗಾದಲ್ಲಿ ನಡೆದಿದೆ. ಬ್ಯಾಂಕ್ ಮ್ಯಾನೇಜರ್ ಅನ್ನು ಮನೆಯಿಂದ ಹೊರಗೆ ಎಳೆದು ಕೋಲುಗಳಿಂದ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಇದರ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಚಂಡೀಗಢ: ಮೂವರು ಮುಸುಕುಧಾರಿಗಳು ಬಿಳಿ ಕಾರಿನಲ್ಲಿ ಬಂದು ಬ್ಯಾಂಕ್ ಮ್ಯಾನೇಜರ್ ಮೇಲೆ ಹಲ್ಲೆ ನಡೆಸಿರುವ ಘಟನೆ ಪಂಜಾಬ್‌ನ ಮೋಗಾದಲ್ಲಿ ನಡೆದಿದೆ. ಒಬ್ಬ ವ್ಯಕ್ತಿ ಬಂದು ಬ್ಯಾಂಕ್ ಮ್ಯಾನೇಜರ್ ಮನೆಯ ಬಾಗಿಲು ಬಡಿದಿದ್ದು, ಅವರು ಬಾಗಿಲು ತೆರೆಯುತ್ತಿದ್ದಂತೆ ಅವರನ್ನು ಹೊರಗೆ ಎಳೆದು ದೊಣ್ಣೆಯಿಂದ ಹಲ್ಲೆ ಮಾಡಲು ಮುಂದಾಗಿದ್ದಾರೆ. ಇದರ ದೃಶ್ಯವಾಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ (Viral Video). ಬಲವಂತವಾಗಿ ಮನೆಯೊಳಗೆ ಪ್ರವೇಶಿಸಲು ಪ್ರಯತ್ನಿಸಿದಾಗ ಬ್ಯಾಂಕ್ ಮ್ಯಾನೇಜರ್ ಬಾಗಿಲು ಮುಚ್ಚುವಲ್ಲಿ ಯಶಸ್ವಿಯಾದರು. ಇದರಿಂದ ಅವರು ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.

ಸಿಸಿಟಿವಿ ದೃಶ್ಯವಾಳಿಯ ಪ್ರಕಾರ, ಮೂವರು ಮುಸುಕುಧಾರಿಗಳು ಬಿಳಿ ಕಾರಿನಲ್ಲಿ ಬಂದಿದ್ದು, ಅವರಲ್ಲಿ ಒಬ್ಬ ಮ್ಯಾನೇಜರ್ ಮನೆಯ ಬಾಗಿಲು ಬಡಿಯುತ್ತಾನೆ. ಮ್ಯಾನೇಜರ್ ಬಾಗಿಲು ತೆರೆಯುತ್ತಿದ್ದಂತೆ ಇತರರಿಗೆ ಸಿದ್ಧರಾಗಿರುವಂತೆ ಸೂಚನೆ ನೀಡಿದನು. ಆತನ ಸಿಗ್ನಲ್ ಅನ್ನು ಅನುಸರಿಸಿ ಇತರ ಇಬ್ಬರು ಪುರುಷರು ಕಾರಿನ ಹಿಂದಿನ ಸೀಟಿನಿಂದ ಕೋಲುಗಳನ್ನು ಹೊರತೆಗೆದರು.



ಬ್ಯಾಂಕ್ ಮ್ಯಾನೇಜರ್ ಬಾಗಿಲು ತೆರೆಯುತ್ತಿದ್ದಂತೆ ಮುಸುಕುಧಾರಿ ವ್ಯಕ್ತಿಗಳಲ್ಲಿ ಒಬ್ಬ ಮ್ಯಾನೇಜರ್ ಅನ್ನು ಹೊರಗೆ ಎಳೆದೊಯ್ದು ಕೋಲುಗಳಿಂದ ಹಲ್ಲೆ ಮಾಡಲು ಪ್ರಾರಂಭಿಸಿದನು. ಈ ನಡುವೆ ಮ್ಯಾನೇಜರ್ ಮನೆಯೊಳಗೆ ಹೋಗಿ ಬಾಗಿಲು ಹಾಕಿದ್ದರಿಂದ ಹೆಚ್ಚಿನ ಅಪಾಯದಿಂದ ಪಾರಾಗಿದ್ದಾರೆ. ಆಕ್ರಮಣಕಾರರು ಬಾಗಿಲನ್ನು ಬಲವಂತವಾಗಿ ತೆರೆಯಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಕೊನೆಗೆ ಅವರು ಕಾರಿನತ್ತ ಓಡಿ ಹೋಗಿ ತಪ್ಪಿಸಿಕೊಂಡರು.

ಇದನ್ನೂ ಓದಿ: Viral News: ಪ್ರೇಯಸಿಯ ಫೋನ್ ಬ್ಯುಸಿ ಬಂದಿದ್ದಕ್ಕೆ ಗ್ರಾಮದ ವಿದ್ಯುತ್ ಸಂಪರ್ಕವನ್ನೇ ಕಡಿತಗೊಳಿಸಿದ ಪಾಗಲ್‌ ಪ್ರೇಮಿ!

ಈ ಕುರಿತು ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ತನಿಖೆ ಪ್ರಾರಂಭಿಸಲಾಗಿದೆ. ದಾಳಿಕೋರರನ್ನು ಶೀಘ್ರದಲ್ಲೇ ಗುರುತಿಸಿ ಬಂಧಿಸಲಾಗುವುದು ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿದ್ಯಾ ಇರ್ವತ್ತೂರು

View all posts by this author