ಢಾಕಾ, ಜ.16: ಆಂತರಿಕ ಸಂಘರ್ಷದಲ್ಲಿ ನಲುಗಿರುವ ಬಾಂಗ್ಲಾದೇಶ(Bangladesh)ದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ(Bangladesh Unrest) ಮುಂದುವರೆದಿದೆ. ಹಿಂದೂ ಶಿಕ್ಷಕರೊಬ್ಬರ ಮನೆಯನ್ನು ಗುರಿಯಾಗಿಸಿಕೊಂಡು ಬೆಂಕಿ ಹಚ್ಚಲಾಗಿದೆ. ದಾಳಿಕೋರರು ರಾತ್ರಿ ವೇಳೆ ಮನೆಗೆ ಬೆಂಕಿ ಹಚ್ಚಿದ ಘಟನೆ ಸಂಭವಿಸಿದೆ. ಅದೃಷ್ಟವಶಾತ್, ಘಟನೆಯ ಸಮಯದಲ್ಲಿ ಉಟುಂಬ ಸದಸ್ಯರು ಸುರಕ್ಷಿತವಾಗಿ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಶಿಕ್ಷಕ ಬೀರೇಂದ್ರ ಕುಮಾರ್ ಎಂದು ಗುರುತಿಸಿಕೊಳ್ಳಲಾಗಿದೆ. ಘಟನೆಯ ವಿಡಿಯೊ ವೈರಲ್ ಆಗಿದೆ.
ಈಗಾಗಲೇ ಬಾಂಗ್ಲಾದಲ್ಲಿ ಹಲವು ಹಿಂದೂಗಳನ್ನು ಬೆಂಕಿ ಹಚ್ಚಿ ಹತ್ಯೆಗೈದ ಘಟನೆಗಳು ಬೆಳಕಿಗೆ ಬಂದಿದೆ. ಇತ್ತೀಚೆಗೆ ಹಿಂದೂ ಪತ್ರಕರ್ತನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಮತ್ತು ಹಿಂದೂ ವಿಧವಾ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾ*ರವೆಸಗಿದ ಹೀನ ಘಟನೆಗಳು ನಡೆದಿತ್ತು.
ಫೆ.12ರಂದು ಬಾಂಗ್ಲಾದಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಈ ಹಿಂದೆ ಶೇಖ್ ಹಸೀನಾ ಸ್ಪರ್ಧಿಸಿದ್ದ ಗೋಪಲ್‌ಗಂಜ್-2 ಕ್ಷೇತ್ರದಿಂದ ಸ್ಪರ್ಧಿಸಲು ಜತಿಯಾ ಹಿಂದೂ ಮಹಾಜೋತ್ ಎನ್ನುವ ಹಿಂದೂ ಸಂಘಟನೆ ಪ್ರಧಾನ ಕಾರ್ಯದರ್ಶಿ ಗೋವಿಂದ್ ಚಂದ್ರ ಪ್ರಾಮಾಣಿಕ್ ಎನ್ನುವವರು ನಾಮಪತ್ರ ಸಲ್ಲಿಸಿದ್ದರು. ಆದರೆ ಚುನಾವಣಾ ಆಯೋಗ ಕೊನೆ ಕ್ಷಣದಲ್ಲಿ ಪ್ರಮಾಣಿಕ್ ಅವರು ನಾಮಪತ್ರದಲ್ಲಿ ಸಲ್ಲಿಸಿರುವ ಮತದಾರರ ಸಹಿ ಅಮಾನ್ಯವೆಂದು ಉಮೇದುವಾರಿಕೆ ರದ್ದುಗೊಳಿಸಿದೆ.
'ಆಪರೇಷನ್ ಸಿಂದೂರ್' ವೇಳೆ ನಾಶವಾದ ಕಟ್ಟಡವೇ ಉಗ್ರರ ಹೆಡ್ ಆಫೀಸ್; ಸತ್ಯ ಒಪ್ಪಿಕೊಂಡ ಲಷ್ಕರ್ ಕಮಾಂಡರ್
ಮತ್ತೊಂದು ಘಟನೆಯಲ್ಲಿ ಕುರಿಗ್ರಾಮ್ - ಇ ಕ್ಷೇತ್ರದಲ್ಲಿ ಜಮಾತೆ-ಇ-ಇಸ್ಲಾಮಿ ಅಭ್ಯರ್ಥಿಯ ನಾಮಪತ್ರವನ್ನು ದ್ವಿಪೌರತ್ವ ಕಾರಣದಿಂದ ತಿರಸ್ಕರಿಸಿದ್ದಕ್ಕೆ ಹಿಂದೂ ಮಹಿಳಾ ಜಿಲ್ಲಾಧಿಕಾರಿ ಅನ್ನಪೂರ್ಣಾ ದೇಬ್ನಾಥ್ ಅವರಿಗೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಇಸ್ಲಾಮಿಕ್ ಪಕ್ಷದವರು ಡೀಸಿಗೆ ಕೋಮು ನಿಂದನೆ ಮಾಡಿ, ರಾಜೀನಾಮೆಗೆ ಆಗ್ರಹಿಸಿದ್ದಾರೆ.
ಬಾಂಗ್ಲಾ ದೌರ್ಜನ್ಯ; ಮಧ್ಯಪ್ರವೇಶಕ್ಕೆ ಪೇಜಾವರ ಶ್ರೀ ಕೇಂದ್ರಕ್ಕೆ ಒತ್ತಾಯ
ಬಾಂಗ್ಲಾ ದೇಶದಲ್ಲಿ ಅಲ್ಪಸಂಖ್ಯಾತ ಹಿಂದುಗಳ ಮೇಲೆ ನಡೆಯುತ್ತಿರುವ ಭೀಕರ ಕ್ರೌರ್ಯದ ಸರಣಿ ಕಂಡು ತೀವ್ರ ಆಘಾತವಾಗುತ್ತಿದೆ, ಆದ್ದರಿಂದ ಕಿಂಚಿತ್ತೂ ತಡಮಾಡದೇ ಈ ಸಂಬಂಧ ಕಾರ್ಯಪ್ರವೃತ್ತರಾಗಿ ಈ ಭೀಭಿತ್ಸ ಕೃತ್ಯಗಳನ್ನು ನಿಲ್ಲಿಸಲು ಕ್ರಮ ವಹಿಸಬೇಕು ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಇತ್ತೀಚೆಗೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದರು.ಈ ಸಂಬಂಧ ಶ್ರೀಗಳು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಶ್ರೀಗಳು ಪತ್ರ ಬರೆದಿದ್ದಾರೆ. ಪತ್ರದಲ್ಲಿ ಜಗತ್ತಿನ ಸಮಸ್ತರ ಒಳಿತಿಗಾಗಿ ಹಿಂದು ಸಮಾಜ ನಿರಂತರ ಸ್ಪಂದಿಸಿದೆ. ತಾನೇ ತಾನಾಗಿ ಇನ್ನೊಬ್ಬರ ಮೇಲೆ ಪಾರಮ್ಯ ಸಾಧಿಸಲು ಹಿಂಸೆಯನ್ನು ಹಿಂದು ಸಮಾಜ ಯಾವತ್ತೂ ಅಸ್ತ್ರವಾಗಿ ಮಾಡಿಕೊಂಡದ್ದೇ ಇಲ್ಲ. ಶಾಂತಿ ಸಹಬಾಳ್ವೆಯ ತತ್ವಗಳನ್ನು ನಮ್ಮ ಎಲ್ಲೆ ಮೀರಿ ಅನುಷ್ಠಾನಿಸಿದ್ದೇವೆ ಆದರೆ ನಮ್ಮದೇ ನೆರೆಯ ದೇಶವೊಂದರಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ಪೈಶಾಚಿಕ ಹಾಗೂ ಅಮಾನವೀಯ ಧಾಳಿಗಳು ಹಿಂಸೆ , ಕೊಲೆ ಅತ್ಯಾಚಾರಗಳನ್ನು ಕಂಡು ಭಾರತದ ಹಿಂದುಗಳು ತೀವ್ರ ದುಃಖಿತರಾಗಿದ್ದಾರೆ ಎಂದವರು ಹೇಳಿದ್ದರು.