ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಹಾಡಹಗಲೇ ಕೋಚಿಂಗ್ ಕ್ಲಾಸ್‌ನಿಂದ ಹಿಂತಿರುಗುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಕಿರುಕುಳ

Viral News: ಮಧ್ಯ ಪ್ರದೇಶದ ಗ್ವಾಲಿಯರ್ ನಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಪ್ರಶ್ನೆ ಮಾಡುವಂತಹ ಇನ್ನೊಂದು ಘಟನೆ ವರದಿಯಾಗಿದೆ. ರಸ್ತೆಯಲ್ಲಿ ಕೋಚಿಂಗ್ ತರಗತಿಯಿಂದ ಮನೆಗೆ ವಾಪಸ್ಸು ಹೋಗುತ್ತಿದ್ದ ವಿದ್ಯಾರ್ಥಿನಿಯರನ್ನು ದುಷ್ಕರ್ಮಿಗಳು ತಡೆದು ಕಿರುಕುಳ ನೀಡಿದ್ದಾರೆ. ಈ ಘಟನೆಯ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ.

ಕೋಚಿಂಗ್‌ನಿಂದ ಬರುತ್ತಿದ್ದ ವಿದ್ಯಾರ್ಥಿಗಳ ಮೇಲೆ ಕಿರುಕುಳ ಎಸಗಿದ ಪುಂಡರು

ಕೋಚಿಂಗ್ ಕ್ಲಾಸ್ ನಿಂದ ಹಿಂತಿರುಗುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಕಿರುಕುಳ -

Profile
Pushpa Kumari Sep 22, 2026 4:10 PM

ಮಧ್ಯಪ್ರದೇಶ,ಸೆ‌. 22: ಇತ್ತೀಚೆಗೆ ಸಾರ್ವಜನಿಕ ಸ್ಥಳದಲ್ಲೂ ಮಹಿಳೆಯರಿಗೆ ಕಿರುಕುಳ ಉಂಟಾ ಗುತ್ತಿರುವ ಅನೇಕ ಘಟನೆಗಳು ವರದಿಯಾಗುತ್ತಿವೆ. ಇದಕ್ಕೆ ಸಾಕ್ಷಿ ಎನ್ನುವಂತೆ ಮಧ್ಯ ಪ್ರದೇಶದ ಗ್ವಾಲಿಯರ್‌ನಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಪ್ರಶ್ನೆ ಮಾಡುವಂತಹ ಇನ್ನೊಂದು ಘಟನೆ (Viral News) ವರದಿಯಾಗಿದೆ. ರಸ್ತೆಯಲ್ಲಿ ಕೋಚಿಂಗ್ ತರಗತಿಯಿಂದ ಮನೆಗೆ ವಾಪಸ್ಸು ಹೋಗುತ್ತಿದ್ದ ವಿದ್ಯಾರ್ಥಿನಿಯರನ್ನು ದುಷ್ಕರ್ಮಿಗಳು ತಡೆದು ಕಿರುಕುಳ ನೀಡಿದ್ದಾರೆ. ಈ ಘಟನೆಯ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ.

ಗ್ವಾಲಿಯರ್‌ನ ಭಿತರ್‌ವಾರ್‌ನಲ್ಲಿ ಕೋಚಿಂಗ್ ಕ್ಲಾಸ್ ನಿಂದ ಹಿಂತಿರುಗುತ್ತಿದ್ದ ವೇಳೆ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಬೈಕ್ ನಲ್ಲಿ ಬಂದ ಇಬ್ಬರು ಪುರುಷರು ಹಲ್ಲೆ ನಡೆಸಿದ್ದಾರೆ.‌ಕಮಲಾ ಶಾಲಾ ರಸ್ತೆಯಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಆರೋಪಿಗಳು ಹುಡುಗಿಯರನ್ನು ಹಿಂಬಾಲಿಸುತ್ತಿರುವ ದೃಶ್ಯ ಕಾಣಬಹುದು.

ವಿಡಿಯೋ ನೋಡಿ:



ಮಧ್ಯಾಹ್ನ ಸುಮಾರಿಗೆ ವಿದ್ಯಾರ್ಥಿನಿಯರು ಕೋಚಿಂಗ್ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದರು. ಆಗ ಸ್ಪೆಂಡರ್ ಬೈಕ್‌ನಲ್ಲಿ ಬಂದ ಇಬ್ಬರು ಯುವಕರು ಅವರನ್ನು ನಿಲ್ಲಿಸಿ ಚುಡಾಯಿಸಲು ಪ್ರಾರಂಭ ಮಾಡಿದ್ದಾರೆ. ಆದರೆ ವಿದ್ಯಾರ್ಥಿಗಳು ಇದನ್ನು ಪ್ರತಿಭಟಿಸಿದಾಗ, ಆರೋಪಿಗಳು ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

Viral Video: ಬಿಜೆಪಿ ಪ್ರತಿಭಟನೆ ವೇಳೆ ಮಾಜಿ ಶಾಸಕನ ದರ್ಪ; ಸ್ಕೂಟರ್ ಸವಾರನ ಹೆಲ್ಮೆಟ್ ಕಿತ್ತು ನೆಲಕ್ಕೆ ಎಸೆದ ರಾಜ್‌ಕುಮಾರ್ ಪಾಟೀಲ್

ಬಾಲಕಿಯರು ಮುಂದೆ ನಡೆದುಕೊಂಡು ಹೋಗುತ್ತಿದ್ದಂತೆ ಅವರನ್ನು ಮತ್ತೆ ಹಿಂಬಾಲಿಸಿ ಹಲ್ಲೆ ನಡೆಸಿ, ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಇಡೀ ಘಟನೆ ಹತ್ತಿರದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. ಹಾಡು ಹಗಲೇ ಮಹಿಳೆಯರಿಗೆ ಸುರಕ್ಷತೆ ಇಲ್ಲ ಅಂದರೆ ಬೇಸರದ ಸಂಗತಿ. ಇಂತಹ ಕಾಮುಕರನ್ನು ಸುಮ್ಮನೆ ಬಿಡಬಾರದು ಎಂದು ಹಲವಾರು ಮಂದಿ ಆಕ್ರೋಶ ಹೊರಹಾಕಿದ್ದಾರೆ.

ವಿದ್ಯಾರ್ಥಿಗಳ ಮೇಲಿನ ಹಲ್ಲೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಗಮನಿಸಿದ್ದಾರೆ. ಭಿತರ್ವಾರ್ ಪೊಲೀಸರು ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿಗಳನ್ನು ಗುರುತಿಸಲು ಕ್ರಮ ಕೈಗೊಂಡಿದ್ದಾರೆ. ಆದರೆ ಇಲ್ಲಿಯವರೆಗೆ ಯಾವುದೇ ವಿದ್ಯಾರ್ಥಿ ಅಥವಾ ಕುಟುಂಬ ಸದಸ್ಯರು ಔಪಚಾರಿಕ ದೂರಿನೊಂದಿಗೆ ಪೊಲೀಸರನ್ನು ಸಂಪರ್ಕಿಸಿಲ್ಲ ಎಂದು ಅವರು ಹೇಳಿದ್ದಾರೆ. ಈ ಘಟನೆಯನ್ನು ಸಾರ್ವಜನಿಕರು ತೀವ್ರವಾಗಿ ಖಂಡಿಸಿದ್ದು, ಪ್ರದೇಶದಲ್ಲಿ ಇಂತಹ ಚಟುವಟಿಕೆಗಳು ಹೆಚ್ಚುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.