ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ರಿಕ್ಷಾ ಚಾಲಕನಿಗೆ ರಸ್ತೆಯಲ್ಲೇ ಕಪಾಳಮೋಕ್ಷ ಮಾಡಿದ ಬಿಜೆಪಿ ಶಾಸಕ; ಕಾರಣವೇನು?

ಆಟೋರಿಕ್ಷಾ ಚಾಲಕನಿಗೆ ಬಿಜೆಪಿ ಶಾಸಕರೊಬ್ಬರು ಕಪಾಳಮೋಕ್ಷ ಮಾಡಿದ್ದು, ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮುಂಬೈನಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ ಆಟೋ ರಿಕ್ಷಾ ಚಾಲಕನಿಗೆ ಬಿಜೆಪಿ ಶಾಸಕ ಪರಾಗ್ ಶಾ ಕಪಾಳಮೋಕ್ಷ ಮಾಡಿದ್ದು ಇದರ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಮುಂಬೈ: ಸಂಚಾರ ನಿಯಮ (traffic rule) ಉಲ್ಲಂಘಿಸಿದ ಕಾರಣಕ್ಕೆ ಬಿಜೆಪಿ ಶಾಸಕರೊಬ್ಬರು (BJP MLA) ಆಟೋ ರಿಕ್ಷಾ ಚಾಲಕನ (auto driver) ಕೆನ್ನೆಗೆ ಹೊಡೆದಿದ್ದು, ಇದರ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ (Viral Video) ಆಗಿದೆ. ಮುಂಬೈನಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ ಆಟೋ ಚಾಲಕನಿಗೆ ಬಿಜೆಪಿ ಶಾಸಕ ಪರಾಗ್ ಶಾ (Parag sha) ಕಪಾಳಮೋಕ್ಷ ಮಾಡಿದ್ದು, ಇದರ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆ ಘಾಟ್ಕೋಪರ್ ಪೂರ್ವದಲ್ಲಿ ಪರಾಗ್ ಶಾ ಮತ್ತು ಸ್ಥಳೀಯ ನಿವಾಸಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾಗ ನಡೆದಿದೆ.

ಮುಂಬೈನ ಘಾಟ್ಕೋಪರ್ ಪ್ರದೇಶದಲ್ಲಿ ಬಿಜೆಪಿ ಶಾಸಕ ಪರಾಗ್ ಶಾ ಅವರು ಆಟೋ ರಿಕ್ಷಾ ಚಾಲಕನಿಗೆ ಕಪಾಳಮೋಕ್ಷ ಮಾಡುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅವರ ಪಕ್ಕದಲ್ಲೇ ನಿಂತಿದ್ದ ವ್ಯಕ್ತಿಯೊಬ್ಬ ಸಂಪೂರ್ಣ ಘಟನೆಯನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾನೆ. ಇದು ಭಾರಿ ವೈರಲ್ ಆಗಿದ್ದು, ಸಾಕಷ್ಟು ಮಂದಿ ಇದಕ್ಕೆ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

ಕುಸ್ತಿ ಪಂದ್ಯಕ್ಕೆ ಪತ್ರಕರ್ತನನ್ನು ಆಹ್ವಾನಿಸಿದ ಯೋಗ ಗುರು ಬಾಬಾ ರಾಮ್‌ದೇವ್; ಆಮೇಲಾಗಿದ್ದೇನು? ಇಲ್ಲಿದೆ ವಿಡಿಯೊ



ಸಂಚಾರ ಸಮಸ್ಯೆಗಳು ಮತ್ತು ಪ್ರದೇಶದಲ್ಲಿ ಅಕ್ರಮ ವ್ಯಾಪಾರ ಚಟುವಟಿಕೆಯನ್ನು ವಿರೋಧಿಸಿ ಘಾಟ್ಕೋಪರ್ ಪೂರ್ವದಲ್ಲಿ ಸ್ಥಳೀಯ ನಿವಾಸಿಗಳೊಂದಿಗೆ ಪರಾಗ್ ಶಾ ಅವರು ಪ್ರತಿಭಟನೆ ನಡೆಸುತ್ತಿದ್ದರು. ಇದೇ ಸಂದರ್ಭದಲ್ಲಿ ಆಟೋ ರಿಕ್ಷಾವೊಂದು ಸಂಚಾರ ನಿಯಮ ಉಲ್ಲಂಘಿಸಿ ಬರುತ್ತಿರುವುದನ್ನು ನೋಡಿದ ಪರಾಗ್ ಶಾ ಅದನ್ನು ನಿಲ್ಲಿಸಿದ್ದಾರೆ. ಇದರಿಂದ ಆಟೋ ರಿಕ್ಷಾ ಚಾಲಕ ಮತ್ತು ಪರಾಗ್ ಶಾ ನಡುವೆ ವಾಗ್ವಾದ ನಡೆದಿದ್ದು, ಈ ವೇಳೆ ಪರಾಗ್ ಶಾ ಆಟೋ ಚಾಲಕನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಇದರ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಶಾಸಕರ ವರ್ತನೆಯನ್ನು ಟೀಕಿಸಿರುವ ಕಾಂಗ್ರೆಸ್ ನಾಯಕಿ ವರ್ಷಾ ಗಾಯಕ್ವಾಡ್, ಬಿಜೆಪಿ ನಾಯಕರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಕಿಂಡು ಏರ್‌ಪೋರ್ಟ್‌ನಲ್ಲಿ ಮೂಲ ಸೌಕರ್ಯದ ಕೊರತೆ: ವಿಮಾನದಿಂದ ಜಿಗಿದ ಪ್ರಯಾಣಿಕರು

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಅವರು, ಬಿಜೆಪಿ ಶಾಸಕರು ದುರಹಂಕಾರದಿಂದ ವರ್ತಿಸುತ್ತಿದ್ದಾರೆ ಮತ್ತು ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.

ಬಿಜೆಪಿ ಶಾಸಕರು ಎಷ್ಟು ದುರಹಂಕಾರಿಗಳಾಗಿದ್ದಾರೆಂದರೆ ಅವರು ಬಡ ಆಟೋರಿಕ್ಷಾ ಚಾಲಕರನ್ನು ಸಹ ಬಿಡುವುದಿಲ್ಲ.ಇದು ಬಿಜೆಪಿಯ ನಿಜವಾದ ಮುಖ. ಬಿಜೆಪಿ ದೊಡ್ಡ ಕೈಗಾರಿಕೋದ್ಯಮಿಗಳು ಮತ್ತು ಗುತ್ತಿಗೆದಾರರಿಗೆ ಕೆಂಪು ಹಾಸನ್ನು ಹಾಸುತ್ತದೆ ಮತ್ತು ಬಡವರು ಮತ್ತು ಕಾರ್ಮಿಕ ವರ್ಗವನ್ನು ಥಳಿಸುವುದರಲ್ಲಿ ಸಂತೋಷ ಪಡುತ್ತದೆ ಎಂದು ತಿಳಿಸಿದ್ದಾರೆ.

ವಿದ್ಯಾ ಇರ್ವತ್ತೂರು

View all posts by this author