ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ನೋಯ್ಡಾದಿಂದ ಆಗ್ರಾಕ್ಕೆ ಪ್ರಯಾಣಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಭೀಕರ ಬೆಂಕಿ: ಧಗಧಗನೆ ಹೊತ್ತಿ ಉರಿದ ಬಸ್!

Viral News: ಖಾಸಗಿ ಸ್ಲೀಪರ್ ಬಸ್ ವೊಂದರಲ್ಲಿ ಏಕಾಏಕಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು ಇಡೀ ಬಸ್ ಭಸ್ಮವಾಗಿದೆ. ನೋಯ್ಡಾದಿಂದ ಆಗ್ರಾಕ್ಕೆ ತೆರಳುತ್ತಿದ್ದ ಬಸ್ ನಲ್ಲಿ ಈ ಘಟನೆಯೂ ನಡೆದಿದೆ. ದಟ್ಟವಾದ ಹೊಗೆ ಆವರಿಸಿದ್ದ ಸಮಯದಲ್ಲೇ ಎಲ್ಲಾ ಪ್ರಯಾಣಿಕರನ್ನು ಸ್ಥಳಾಂತರಿಸಲಾಗಿದ್ದು ಯಾವುದೇ ಅಪಾಯ ಸಂಭವಿಸಿಲ್ಲ.

ಏಕಾಏಕಿ ಕಾಣಿಸಿಕೊಂಡ ಬೆಂಕಿಗೆ ಭಸ್ಮವಾದ ಬಸ್

​ಗ್ರೇಟರ್ ನೋಯ್ಡಾ,ಅ.7: ಖಾಸಗಿ ಸ್ಲೀಪರ್ ಬಸ್‌ವೊಂದರಲ್ಲಿ ಏಕಾಏಕಿ ಭಾರೀ ಬೆಂಕಿ ಕಾಣಿಸಿ ಕೊಂಡಿದ್ದು ಇಡೀ ಬಸ್ ಭಸ್ಮವಾಗಿದೆ. ನೋಯ್ಡಾದಿಂದ ಆಗ್ರಾಕ್ಕೆ ತೆರಳುತ್ತಿದ್ದ ಬಸ್ ನಲ್ಲಿ ಈ ಘಟನೆಯೂ (Viral News) ನಡೆದಿದೆ. ದಟ್ಟವಾದ ಹೊಗೆ ಆವರಿಸಿದ್ದ ಸಮಯದಲ್ಲೇ ಎಲ್ಲಾ ಪ್ರಯಾಣಿಕರನ್ನು ಸ್ಥಳಾಂತರಿಸಲಾಗಿದ್ದು ಯಾವುದೇ ಅಪಾಯ ಸಂಭವಿಸಿಲ್ಲ. ಬಳಿಕ ಅಗ್ನಿಶಾಮಕ ದಳದವರು ಸ್ಥಳಕ್ಕೆ ತಲುಪಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು.

ನೋಯ್ಡಾದಿಂದ ಆಗ್ರಾಕ್ಕೆ ಪ್ರಯಾಣಿಸುತ್ತಿದ್ದ ​ನೋಲೆಜ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬಸ್‌ನಿಂದ ದಟ್ಟವಾದ ಹೊಗೆ ಮತ್ತು ಬೆಂಕಿಯ ಜ್ವಾಲೆ ಬರುತ್ತಿದ್ದಂತೆ ಚಾಲಕ ಹಾಗೂ ಸಿಬ್ಬಂದಿ ಸಮಯ ಪ್ರಜ್ಞೆ ಮೆರೆದಿದ್ದಾರೆ. ತಕ್ಷಣವೇ ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಕೆಳಗಿಳಿಸಿದ್ದರಿಂದ ದೊಡ್ಡ ಅನಾಹುತವೊಂದು ತಪ್ಪಿದೆ.

ವಿಡಿಯೋ ನೋಡಿ:



ಸ್ವಲ್ಪ ಸಮಯದಲ್ಲೇ ಬಸ್ ಸಂಪೂರ್ಣವಾಗಿ ಬೆಂಕಿಯಿಂದ ಭಸ್ಮವಾಗಿದೆ. ಪ್ರಯಾಣಿಕರು ಮತ್ತು ಇತರ ಜನರು ಉರಿ ಯುತ್ತಿರುವ ವಾಹನದಿಂದ ದೂರ ಸರಿಯುತ್ತಿರುವುದನ್ನು ಕಾಣಬಹುದು. ಕೂಡಲೇ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದಾರೆ. ಬೆಂಕಿಗೆ ನಿಖರವಾದ ಕಾರಣ ಹಾಗೂ ಬಸ್‌ನಲ್ಲಿದ್ದ ಪ್ರಯಾಣಿಕರ ಸಂಖ್ಯೆಯ ಬಗ್ಗೆ ಹೆಚ್ಚಿನ ವಿವರಗಳನ್ನು ಕಲೆಹಾಕುತ್ತಿದ್ದಾರೆ.

Viral Video: ಇಂಗ್ಲೆಂಡ್‌ನ ದುಬಾರಿ ಶಸ್ತ್ರಚಿಕಿತ್ಸೆಯಿಂದ ಬೇಸತ್ತು ಭಾರತಕ್ಕೆ ಬಂದ ವ್ಯಕ್ತಿ; ಜನಪ್ರಿಯವಾಗುತ್ತಿದೆ ದೇಶದ ಹೆಲ್ತ್‌ ಟೂರಿಸಂ

​ಇತ್ತೀಚೆಗಷ್ಟೇ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದ ಸ್ಲೀಪರ್ ಬಸ್ ಅಗ್ನಿ ದುರಂತದಲ್ಲಿ  ಒಂಬತ್ತು ಜೀವಗಳು ಬಲಿಯಾದ ಕೆಲವು ದಿನಗಳ ನಂತರ ಈ ಘಟನೆ ಸಂಭವಿಸಿದೆ. ಎಕ್ಸ್‌ಪ್ರೆಸ್‌ ವೇಗಳಲ್ಲಿ ಕಾರ್ಯನಿರ್ವಹಿಸುವ ಬಸ್‌ಗಳಲ್ಲಿ ಪ್ರಯಾಣಿಕರ ಸುರಕ್ಷತೆ ಬಗ್ಗೆ ಕಳವಳ ವ್ಯಕ್ತವಾಗುವಂತೆ ಮಾಡಿದೆ.