ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Viral Video: ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿ ಹೊರಗೆ ನಮಾಜ್ ಮಾಡಿದ 71 ವರ್ಷದ ಮಹಿಳೆ; ಆಮೇಲೇನಾಯ್ತು ಗೊತ್ತಾ?

ಮುನ್ನಿ ಎಂದು ಗುರುತಿಸಲ್ಪಟ್ಟ 71 ವರ್ಷದ ಮುಸ್ಲಿಂ ಮಹಿಳೆ ಹಮೀರ್ಪುರದ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿಯ ಹೊರಗೆ ನಮಾಜ್ ಮಾಡಿದ್ದಾಳೆ. ಈ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ. ಆಕೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಸರ್ಕಾರಿ ಕಚೇರಿ ಹೊರಗೆ ನಮಾಜ್‌; ವೃದ್ಧೆ ಮೇಲೆ ಕೇಸ್‌

Profile pavithra Apr 4, 2025 11:41 AM

ಲಖನೌ: ಯಾವುದೇ ವಿಶೇಷ ಸಂದರ್ಭಗಳಿದ್ದರೂ ಕೂಡ ಮುಸ್ಲಿಂ ಸಮುದಾಯದವರಿಗೆ ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್‍ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಡುವಂತಿಲ್ಲ ಎಂಬ ನಿಯಮ ವಿಧಿಸಲಾಗಿತ್ತು. ಆದರೆ ದೇಶವು ಈದ್ ಆಚರಿಸುತ್ತಿರುವ ಈ ಸಂದರ್ಭದಲ್ಲಿ 71 ವರ್ಷದ ಮಹಿಳೆಯೊಬ್ಬಳು ಇತ್ತೀಚೆಗೆ ಸಾರ್ವಜನಿಕ ಸ್ಥಳದಲ್ಲಿ 'ನಮಾಜ್' ಮಾಡಿದ್ದಾಳೆ. ಮುನ್ನಿ ಎಂದು ಗುರುತಿಸಲ್ಪಟ್ಟ ಮುಸ್ಲಿಂ ಮಹಿಳೆ ಹಮೀರ್ಪುರದ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿಯ ಹೊರಗೆ ನಮಾಜ್ ಮಾಡಿದ್ದಾಳೆ. ಈ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ. ಆಕೆಯ ಕೃತ್ಯಕ್ಕಾಗಿ ಆಕೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಮತ್ತು ಆವರಣದಲ್ಲಿನ ಹೋಮ್ ಗಾರ್ಡ್ ಅನ್ನು ಅಮಾನತುಗೊಳಿಸಲಾಗಿದೆ.

ವೈರಲ್ ಆದ ವಿಡಿಯೊದಲ್ಲಿ ಮಹಿಳೆ ನೆಲದ ಮೇಲೆ ಕುಳಿತು ನಮಾಜ್ ಮಾಡಿದ್ದಾಳೆ. ಡಿಎಂ ಕಚೇರಿಯಿಂದ ಈ ದೃಶ್ಯಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದ್ದು, ಮುನ್ನಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಮತ್ತು ಕರ್ತವ್ಯದಲ್ಲಿದ್ದ ಹೋಮ್ ಗಾರ್ಡ್ ಅನ್ನು ಅಮಾನತುಗೊಳಿಸಲಾಗಿದೆಯಂತೆ.

ಮಹಿಳೆ ಕಚೇರಿಯ ಎದುರು ನಮಾಜ್‌ ಮಾಡಿದ ವಿಡಿಯೊ ಇಲ್ಲಿದೆ ನೋಡಿ...



ವಿಡಿಯೊ ವೈರಲ್ ಆದ ನಂತರ ಪೊಲೀಸ್ ಕ್ರಮ ಕೈಗೊಳ್ಳಲಾಗಿದೆ ಎಂದು ಹಮೀರ್ಪುರ ಪೊಲೀಸ್ ವರಿಷ್ಠಾಧಿಕಾರಿ ದೀಕ್ಷಾ ಶರ್ಮಾ ಮಾಹಿತಿ ನೀಡಿದ್ದಾರೆ. ಆದರೆ ಮಹಿಳೆ ಮೇಲೆ ಪ್ರಕರಣ ದಾಖಲಿಸಲಾಗಿದ್ದರೂ ಆಕೆ ಮಾನಸಿಕ ಅಸ್ವಸ್ಥಳು ಎಂದು ಆಕೆಯ ಕುಟುಂಬ ಸದಸ್ಯರು ಹೇಳಿಕೆಗಳನ್ನು ನೀಡಿದ ಕಾರಣ ಆಕೆಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಯಿತು. ಈದ್ ದಿನದಂದು, ಉತ್ತರಪ್ರದೇಶದ ಸರ್ಕಾರವು ಸಾರ್ವಜನಿಕವಾಗಿ ನಮಾಜ್ ಮಾಡಲು ನಿರ್ಬಂಧಗಳನ್ನು ಘೋಷಿಸಿತ್ತು. ಮುಸ್ಲಿಂರು ಬೀದಿಗಳಲ್ಲಿ ನಮಾಜ್ ಮಾಡುವುದರಿಂದ ಸಂಚಾರಕ್ಕೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ ಈ ನಿಯಮವನ್ನು ಜಾರಿಗೆ ತಂದಿತ್ತು.

ಈ ಸುದ್ದಿಯನ್ನೂ ಓದಿ: Viral Video: ಸುಪ್ರೀಂಕೋರ್ಟ್‌ನ ಗಾರ್ಡನ್‍ನಿಂದ ಗುಲಾಬಿ ಹೂ ಕಿತ್ತ ಮಹಿಳೆ; ಪ್ರಶ್ನಿಸಿದ್ದಕ್ಕೆ ಹೇಳಿದ್ದೇನು? ವಿಡಿಯೊ ವೈರಲ್

ಆಸ್ಪತ್ರೆಯೊಳಗೆ ನಮಾಜ್‌ ಮಾಡಿದ ವ್ಯಕ್ತಿ!

ಈ ನಿಯಮ ಜಾರಿಗೆ ತಂದ ಮೇಲೂ ಉತ್ತರಪ್ರದೇಶದಲ್ಲಿ ಮುಸ್ಲಿಂ ಸಮುದಾಯದವರು ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡುವುದನ್ನು ಮಾತ್ರ ಬಿಡಲಿಲ್ಲ. ಇದೇ ರೀತಿಯ ಘಟನೆ ಈ ಹಿಂದೆ ಕೂಡ ಉತ್ತರಪ್ರದೇಶದಲ್ಲಿ ವರದಿಯಾಗಿತ್ತು. ಉತ್ತರ ಪ್ರದೇಶದ ಫಿರೋಜಾಬಾದ್‍ನ ಆಸ್ಪತ್ರೆಯೊಂದರಲ್ಲಿ ವ್ಯಕ್ತಿಯೊಬ್ಬರು ನಮಾಜ್ ಮಾಡಿದ್ದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಫಿರೋಜಾಬಾದ್‍ನ ಆಸ್ಪತ್ರೆಯೊಂದರಲ್ಲಿ ಇತ್ತೀಚೆಗೆ ವ್ಯಕ್ತಿಯೊಬ್ಬ ಆಸ್ಪತ್ರೆಯ ಒಳಗೆ ಸ್ಟ್ರೆಚರ್ ಬಳಿ ನಮಾಜ್ ಮಾಡಿದ್ದನು. ಈ ದೃಶ್ಯವನ್ನು ನೋಡುಗರೊಬ್ಬರು ರೆಕಾರ್ಡ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದರು. ಆದರೆ ನಮಾಜ್ ಮಾಡಿದ ವ್ಯಕ್ತಿಯ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ.