ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

9ನೇ ತರಗತಿ ಬಾಲಕನ ಮೇಲೆ ಹಿರಿಯ ವಿದ್ಯಾರ್ಥಿಗಳಿಂದ ಹಾಸ್ಟೆಲ್‌ ಒಳಗೆ ಭೀಕರ ಹಲ್ಲೆ: ವಿಡಿಯೊ ವೈರಲ್‌

Himachal School Assault: ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯ ರೆಕಾಂಗ್ ಪಿಯೋದಲ್ಲಿರುವ ಜವಾಹರ್ ನವೋದಯ ವಿದ್ಯಾಲಯದಲ್ಲಿ 9ನೇ ತರಗತಿ ವಿದ್ಯಾರ್ಥಿಯ ಮೇಲೆ ಹಿರಿಯ ವಿದ್ಯಾರ್ಥಿಗಳು ಭೀಕರವಾಗಿ ಹಲ್ಲೆ ನಡೆಸಿರುವ ವಿಡಿಯೊ ವೈರಲ್ ಆಗಿದೆ. ಈ ಘಟನೆಗೆ ಸಂಬಂಧಿಸಿದಂತೆ 6 ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದ್ದು, ಕರ್ತವ್ಯದಲ್ಲಿದ್ದ ಶಾಲಾ ಸಿಬ್ಬಂದಿ ಮತ್ತು ಆಡಳಿತ ಮಂಡಳಿಯ ಪಾತ್ರದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ. ಜತೆಗೆ ಶಾಲೆಯ ಪ್ರಾಂಶುಪಾಲರಿಗೆ ಜಿಲ್ಲಾಡಳಿತ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

9ನೇ ತರಗತಿ ಬಾಲಕನ ಮೇಲೆ ಸೀನಿಯರ್ಸ್ ಭೀಕರ ಹಲ್ಲೆ: ವಿಡಿಯೊ ವೈರಲ್

ಹಿಮಾಚಲ ಪ್ರದೇಶದಲ್ಲಿ 9ನೇ ತರಗತಿ ವಿದ್ಯಾರ್ಥಿಯ ಮೇಲೆ ಹಿರಿಯ ವಿದ್ಯಾರ್ಥಿಗಳಿಂದ ಹಲ್ಲೆ -

Jyoti S
Jyoti S Nov 28, 2026 9:12 PM

ಶಿಮ್ಲಾ, ನ. 28: ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯ ರೆಕಾಂಗ್ ಪಿಯೋದಲ್ಲಿರುವ ಜವಾಹರ್ ನವೋದಯ ವಿದ್ಯಾಲಯದಲ್ಲಿ (Himachal Navodaya School) 9ನೇ ತರಗತಿ ವಿದ್ಯಾರ್ಥಿಯ ಮೇಲೆ 11 ಮತ್ತು 12ನೇ ತರಗತಿಯ ಹಿರಿಯ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಒದೆಯುವ, ಗುದ್ದುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸೆಪ್ಟೆಂಬರ್‌ನಲ್ಲಿ ನಡೆದಿದೆ ಎನ್ನಲಾದ ಈ ಘಟನೆಯ ವಿಡಿಯೊ ತಡವಾಗಿ ಬೆಳಕಿಗೆ ಬಂದಿದ್ದು, ಅಧಿಕಾರಿಗಳು 6 ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದ್ದಾರೆ.

ಘಟನೆ ಕುರಿತು ತನಿಖೆಗೆ ಆದೇಶಿಸಲಾಗಿದ್ದು, ಆ ಸಮಯದಲ್ಲಿ ಕರ್ತವ್ಯದಲ್ಲಿದ್ದ ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ವಾರ್ಡನ್‌ಗಳ ನಿರ್ಲಕ್ಷ್ಯದ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಕಿನ್ನೌರ್ ಜಿಲ್ಲಾಧಿಕಾರಿ ಸೋನಾಕ್ಷಿ ತೋಮರ್ ಶಾಲೆಯ ಪ್ರಾಂಶುಪಾಲರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿರುವುದಾಗಿ ತಿಳಿಸಿದ್ದಾರೆ.

ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿರುವ ವಿಡಿಯೊ ನೋಡಿ:



ಬಾಲಕನನ್ನು ನೆಲಕ್ಕೆ ತಳ್ಳಿ ಅಮಾನುಷವಾಗಿ ಹಲ್ಲೆ

ವೈರಲ್ ಆಗಿರುವ ವಿಡಿಯೊದಲ್ಲಿ 5ರಿಂದ 6 ಹಿರಿಯ ವಿದ್ಯಾರ್ಥಿಗಳು 9ನೇ ತರಗತಿ ಬಾಲಕನನ್ನು ಹಾಸಿಗೆಯ ಮೇಲೆ ಬಲವಂತವಾಗಿ ತಳ್ಳಿ, ನಂತರ ನೆಲಕ್ಕೆ ಎಸೆದು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ ಬೆದರಿಕೆ ಹಾಕಿ ಒದೆಯುತ್ತಿರುವುದು ಸೆರೆಯಾಗಿದೆ. ಶಿಕ್ಷಣ ಇಲಾಖೆ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ತಂಡಗಳು ಶಾಲೆಗೆ ಭೇಟಿ ನೀಡಿ ಪ್ರಾಥಮಿಕ ವಿಚಾರಣೆ ನಡೆಸಿದ್ದು, ಸಂತ್ರಸ್ತ ವಿದ್ಯಾರ್ಥಿ ಹಾಗೂ ಆತನ ಪೋಷಕರಿಗೆ ಕೌನ್ಸೆಲಿಂಗ್ ನೀಡಲಾಗುತ್ತಿದೆ.

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ಪಕ್ಕ ಮಹಿಳೆಯ ಶವವನ್ನು ಪಾರ್ಸೆಲ್‌ ರೀತಿ ಮೂಟೆ ಕಟ್ಟಿ ಬಿಸಾಡಿದ ದುಷ್ಕರ್ಮಿಗಳು!

ವಿದ್ಯಾರ್ಥಿಗಳ ಕೈಗೆ ಮೊಬೈಲ್‌ ಸಿಕ್ಕಿದ್ದು ಹೇಗೆ?

ಶಾಲಾ ಆವರಣದೊಳಗೆ ವಿದ್ಯಾರ್ಥಿಗಳಿಗೆ ಮೊಬೈಲ್ ಫೋನ್ ತರಲು ಹೇಗೆ ಅವಕಾಶ ಸಿಕ್ಕಿತು ಹಾಗೂ ವಿದ್ಯಾರ್ಥಿಗಳು ಅನುಮತಿಯಿಲ್ಲದೆ ಕ್ಯಾಂಪಸ್‌ನಿಂದ ಹೊರಹೋಗುತ್ತಿದ್ದ ಇತರ ಅಕ್ರಮಗಳ ಬಗ್ಗೆಯೂ ಆಡಳಿತ ಮಂಡಳಿ ತನಿಖೆ ನಡೆಸುತ್ತಿದೆ.

ಹಲ್ಲೆಗೊಳಗಾದ ವಿದ್ಯಾರ್ಥಿ ಕೆಲವು ದಿನಗಳ ಹಿಂದೆ ಮತ್ತೊಬ್ಬ ವಿದ್ಯಾರ್ಥಿಯೊಂದಿಗೆ ಜಗಳವಾಡಿದ್ದ ಎನ್ನಲಾಗಿದ್ದು, ಹಲ್ಲೆಯ ನಿಖರ ಕಾರಣದ ಬಗ್ಗೆ ತನಿಖೆ ಮುಂದುವರಿದಿದೆ. ಆರೋಪಿಗಳು ಅಪ್ರಾಪ್ತರಾಗಿರುವುದರಿಂದ ತನಿಖಾ ಸಮಿತಿಯ ವರದಿಗಾಗಿ ಕಾಯುತ್ತಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಸುಶೀಲ್ ಶರ್ಮಾ ತಿಳಿಸಿದ್ದಾರೆ.