ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಆತ್ಮಹತ್ಯೆಗೆ ಯತ್ನಿಸಿದ ಕಾರ್ಮಿಕನನ್ನು ಸಿನಿಮೀಯ ಶೈಲಿಯಲ್ಲಿ ರಕ್ಷಣೆ ಮಾಡಿದ ಕಾನ್‌ಸ್ಟೆಬಲ್!

Viral News: ಸೂರತ್ ನಲ್ಲಿ 7ನೇ ಮಹಡಿಯ ಫ್ಲ್ಯಾಟ್‌ನಲ್ಲಿ ವಜ್ರದ ಕಟಿಂಗ್ ಮತ್ತು ಪಾಲಿಶಿಂಗ್ ವಲಯದಲ್ಲಿ ಕೆಲಸ ಮಾಡುವ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ವೊಬ್ಬರು ತನ್ನ ಪ್ರಾಣವನ್ನು ಲೆಕ್ಕಿಸದೆ ಕಾರ್ಮಿಕನ ಪ್ರಾಣ ಉಳಿಸಲು ಹರಸಾಹಸ ಪಟ್ಟಿದ್ದಾರೆ. ಸದ್ಯ ಇದರ ಆಘಾತಕಾರಿ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ.

ಕಾರ್ಮಿಕನ ಪ್ರಾಣ ಉಳಿಸಿದ ಕಾನ್‌ಸ್ಟೆಬಲ್

ಸೂರತ್,ಜೂ. 12: ಇತ್ತೀಚೆಗೆ ಸಣ್ಣ ಪುಟ್ಟ ವಿಚಾರಗಳಿಗೆ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಇದಕ್ಕೆ ಸಾಕ್ಷಿ ಎಂಬಂತೆ ಸೂರತ್ ನಲ್ಲಿ 7ನೇ ಮಹಡಿಯ ಫ್ಲ್ಯಾಟ್‌ನಲ್ಲಿ ವಜ್ರದ ಕಟಿಂಗ್ ಮತ್ತು ಪಾಲಿಶಿಂಗ್ ವಲಯದಲ್ಲಿ ಕೆಲಸ ಮಾಡುವ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ವೊಬ್ಬರು ತನ್ನ ಪ್ರಾಣವನ್ನು ಲೆಕ್ಕಿಸದೆ ಕಾರ್ಮಿಕನ ಪ್ರಾಣ ಉಳಿಸಲು ಹರಸಾಹಸ ಪಟ್ಟಿದ್ದಾರೆ. ಸದ್ಯ ಇದರ ಆಘಾತಕಾರಿ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ (Viral News) ಆಗುತ್ತಿದೆ.

ವಸತಿ ಕಟ್ಟಡದ ಏಳನೇ ಮಹಡಿಯಲ್ಲಿ ಬೀಗ ಹಾಕಿದ ಅಪಾರ್ಟ್‌ಮೆಂಟ್‌ನೊಳಗೆ ಕಾರ್ಮಿಕ ನೊಬ್ಬ ಆತ್ಮಹತ್ಯೆಗೆ ಮುಂದಾಗಿದ್ದಾನೆ‌. ಜೂನ್ 8 ರಂದು ಸೂರತ್‌ನ ಲಸ್ಕಾನಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು ಪೊಲೀಸ್ ಅಧಿಕಾರಿ ಯೊಬ್ಬರ ಪ್ರಯತ್ನದ ಮೇರೆಗೆ ಕಾರ್ಮಿಕನ ಪ್ರಾಣ ಉಳಿದಿದೆ.

ವಿಡಿಯೋ ನೋಡಿ:



ಲಸ್ಕಾನಾ ಪ್ರದೇಶದ 7ನೇ ಮಹಡಿಯ ಫ್ಲ್ಯಾಟ್‌ನಲ್ಲಿ ವಜ್ರದ ಕಟಿಂಗ್ ಮತ್ತು ಪಾಲಿಶಿಂಗ್ ವಲಯದಲ್ಲಿ ಕೆಲಸ ಮಾಡುವ ಕಾರ್ಮಿಕರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಈ ವೇಳೆ ಅವರ ಪತ್ನಿ ತಕ್ಷಣ ಕಂಟ್ರೋಲ್ ರೂಂಗೆ ಕರೆ ಮಾಡಿ ಪತಿಯ ಪ್ರಾಣ ಉಳಿಸುವಂತೆ ಬೇಡಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಸೂರತ್ ನಗರ ಪೊಲೀಸ್ ನಿಯಂತ್ರಣ ಕೊಠಡಿಯು ಲಸ್ಕಾನಾ ಪೊಲೀಸ್ ಠಾಣೆಯಿಂದ ತಂಡವನ್ನು ಸಜ್ಜುಗೊಳಿಸಿತು. ತಕ್ಷಣಕ್ಕೆ ಆಂಬ್ಯುಲೆನ್ಸ್ ಜೊತೆಗೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿಯನ್ನು ಸ್ಥಳಕ್ಕೆ ಕಳುಹಿಸಲಾಯಿತು. ಆದರೆ ಪೊಲೀಸರು ಸ್ಥಳಕ್ಕೆ ತಲುಪಿದಾಗ ಫ್ಲ್ಯಾಟ್‌ನ ಮುಖ್ಯ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು

Viral News: ಜಸ್ಟ್‌ 20 ನಿಮಿಷಕ್ಕೆ ಮುರಿದು ಬಿತ್ತು ಮದುವೆ! ಗಂಡನ ಮನೆ ಸೇರುತ್ತಿದ್ದಂತೆ ದಾಂಪತ್ಯ ಜೀವನ ನಿರಾಕರಿಸಿದ್ದೇಕೆ ನವ ವಧು?

ಕಾನ್‌ಸ್ಟೆಬಲ್ ಹಿಂದೆ- ಮುಂದೆ ನೋಡದೆ ಈ ವ್ಯಕ್ತಿಯನ್ನು ಸಿನಿಮೀಯ ಶೈಲಿಯಲ್ಲಿ ರಕ್ಷಿಸಲು ಮುಂದಾಗಿದ್ದಾರೆ. ಪೊಲೀಸ್ ಕಾನ್ಸ್ಟೇಬಲ್ ಶೈಲೇಶ್ ಚುಡಾಸಮಾ ಮತ್ತು ಚಾಲಕ ಕೃಪಾಲ್ಸಿನ್ಹ್ ಗೋಹಿಲ್ ಪಕ್ಕದ ಮನೆಯವರ ಸಹಾಯ ಕೋರಿ ಆತನನ್ನು ರಕ್ಷಣೆ ಮಾಡಿದ್ದಾರೆ ​ಧೈರ್ಯ ಪ್ರದರ್ಶಿಸಿದ ಕಾನ್‌ಸ್ಟೆಬಲ್ ಶೈಲೇಶ್ ಚುಡಾಸಮಾ, 7ನೇ ಮಹಡಿಯ ಕಟ್ಟಡದ ಹೊರಭಾಗದ ಸುರಕ್ಷತಾ ಗ್ರಿಲ್ ಹಿಡಿದು ಅಪಾಯಕಾರಿ ರೀತಿಯಲ್ಲಿ ಸಾಗಿ ಫ್ಲ್ಯಾಟ್‌ನೊಳಗೆ ಪ್ರವೇಶಿಸಿದ್ದಾರೆ‌.

ಬಾಗಿಲು ಮುರಿದು ಒಳಹೋದಾಗ ಆತ ಈಗಾಗಲೇ ವಿಷ ಸೇವಿಸಿದ್ದ. ತಕ್ಷಣವೇನಿಯಂತ್ರಿಸಿ, ಆತನ ಬಳಿಯಿದ್ದ ಇನ್ನುಳಿದ ವಿಷದ ಬಾಟಲಿಯನ್ನು ಕಾನ್ಸ್ಟೇಬಲ್ ವಶಕ್ಕೆ ಪಡೆದಿದ್ದಾರೆ. ಆ ವೇಳೆಗಾಗಲೇ ಆತ ವಾಂತಿ ಮಾಡಿಕೊಳ್ಳಲು ಆರಂಭಿಸಿದ್ದ. ತಕ್ಷಣ ಅವರನ್ನು ತುರ್ತು ಚಿಕಿತ್ಸೆಗಾಗಿ ಸ್ಥಳಾಂತರಿಸ ಲಾಯಿತು. ಸಕಾಲದಲ್ಲಿ ಚಿಕಿತ್ಸೆ ಸಿಕ್ಕ ಕಾರಣ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.ತುರ್ತು ಸಂದರ್ಭಗಳಲ್ಲಿ ಜೀವ ರಕ್ಷಿಸಲು ಪೊಲೀಸ್ ಸಿಬ್ಬಂದಿ ಜೀವದ ಹಂಗು ತೊರೆದು ರಕ್ಷಣೆ ಮಾಡಿರುವ ಬಗ್ಗೆ ನೆಟ್ಟಿಗರು ಶ್ಲಾಘನೆ ವ್ಯಕ್ತ ಪಡಿಸಿದ್ದಾರೆ. ಪೊಲೀಸರ ಕರ್ತವ್ಯ ಪ್ರಜ್ಞೆ ಹಾಗೂ ಧೈರ್ಯಕ್ಕೆ ಬಳಕೆದಾರರು ಮೆಚ್ಚುಗೆ ನೀಡಿದ್ದಾರೆ.