ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Viral Video: ಉದಯನಿಧಿ ಸ್ಟಾಲಿನ್ ಹುಟ್ಟುಹಬ್ಬದ ಪಾರ್ಟಿಯಲ್ಲಿ ಹುಡುಗಿಯರಿಂದ ತುಂಡುಡುಗೆ ನೃತ್ಯ; ಚಪ್ಪಾಳೆ ತಟ್ಟಿ ವಿವಾದಕ್ಕೀಡಾದ ಸಚಿವ

Udhayanidhi Stalin: ತಮಿಳುನಾಡಿನ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರ ಹುಟ್ಟುಹಬ್ಬದ ಪಾರ್ಟಿಯಲ್ಲಿ ಅಶ್ಲೀಲ ನೃತ್ಯಕ್ಕೆ ಚಪ್ಪಾಳೆ ತಟ್ಟಿ ಸಚಿವರೊಬ್ಬರು ವಿವಾದಕ್ಕೀಡಾಗಿದ್ದಾರೆ. ಅಶ್ಲೀಲ ನೃತ್ಯ ಪ್ರದರ್ಶಿಸುತ್ತಿದ್ದ ಯುವ ಮಹಿಳಾ ಕಲಾವಿದರು ಹತ್ತಿರ ಬಂದಾಗ ತಮಿಳುನಾಡು ಸಚಿವ ಎಸ್. ಪೆರಿಯಕರುಪ್ಪನ್ ಅವರು ಚಪ್ಪಾಳೆ ತಟ್ಟುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಭಾರೀ ಟೀಕೆಗೆ ಗುರಿಯಾಗಿದೆ.

ಸಚಿವ ಎಸ್. ಪೆರಿಯಕರುಪ್ಪನ್ (ಸಂಗ್ರಹ ಚಿತ್ರ)

ಚೆನ್ನೈ: ಅಶ್ಲೀಲವಾಗಿ ನೃತ್ಯ ಮಾಡುತ್ತಿದ್ದ ಮಹಿಳಾ ಕಲಾವಿದರಿಗೆ ಚಪ್ಪಾಳೆ ತಟ್ಟಿದ ತಮಿಳುನಾಡು ಸಚಿವ (Tamil Nadu Minister) ಈಗ ಟೀಕೆಗೆ ಗುರಿಯಾಗಿದ್ದಾರೆ. ತಮಿಳುನಾಡಿನ ಉಪಮುಖ್ಯಮಂತ್ರಿ (Deputy Chief Minister) ಉದಯನಿಧಿ ಸ್ಟಾಲಿನ್ (Uhdayanidhi Stalin) ಅವರ ಹುಟ್ಟುಹಬ್ಬದ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತಮಿಳುನಾಡು ಸಚಿವ ಎಸ್. ಪೆರಿಯಕರುಪ್ಪನ್ (MP Periyakaruppan) ಅವರು ಅಶ್ಲೀಲವಾಗಿ ನೃತ್ಯ ಮಾಡುತ್ತಿದ್ದ ಯುವ ಮಹಿಳಾ ಕಲಾವಿದರಿಗೆ ಚಪ್ಪಾಳೆ ತಟ್ಟಿದ್ದು, ಇದರ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ (Viral Video) ಆಗಿದೆ. ಇದಕ್ಕೆ ನೆಟ್ಟಿಗರಿಂದ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಅನೇಕರು ಸಚಿವರನ್ನು ಟೀಕಿಸಿ ಕಾಮೆಂಟ್ ಮಾಡಿದ್ದಾರೆ.

ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ತಮಿಳುನಾಡು ಸಚಿವ ಎಸ್. ಪೆರಿಯಕರುಪ್ಪನ್ ಅವರು ಅಶ್ಲೀಲವಾಗಿ ನೃತ್ಯ ಮಾಡುತ್ತಿದ್ದ ಯುವ ಮಹಿಳಾ ಕಲಾವಿದರನ್ನು ಹತ್ತಿರದಿಂದ ನೃತ್ಯ ಮಾಡಲು ಆಹ್ವಾನಿಸಿದ್ದಾರೆ. ಅಲ್ಲದೇ ಅವರು ನೃತ್ಯ ಮಾಡುತ್ತಿದ್ದಾಗ ಚಪ್ಪಾಳೆ ತಟ್ಟುತ್ತಿರುವುದನ್ನು ವೈರಲ್ ಆಗಿರುವ ವಿಡಿಯೊದಲ್ಲಿ ಕಾಣಬಹುದಾಗಿದೆ. ಇದರಿಂದ ಸಚಿವ ಎಸ್. ಪೆರಿಯಕರುಪ್ಪನ್ ಅವರು ಈಗ ವಿವಾದಕ್ಕೆ ಗುರಿಯಾಗಿದ್ದಾರೆ.

Viral Video: ಆಟವಾಡುತ್ತಿದ್ದಾಗ ಮೊದಲ ಮಹಡಿಯಿಂದ ಬಿದ್ದ 3 ವರ್ಷದ ಮಗು- ಶಾಕಿಂಗ್‌ ವಿಡಿಯೊ ಇಲ್ಲಿದೆ

ಈ ವಿಡಿಯೊ ನೋಡಿರುವ ಅನೇಕ ವಿಮರ್ಶಕರು ಇದು ಅಶ್ಲೀಲ ಪ್ರದರ್ಶನವಾಗಿದೆ ಎಂದು ಹೇಳಿದ್ದು, ಸಾರ್ವಜನಿಕ ಪ್ರತಿನಿಧಿಯೊಬ್ಬರು ಅದನ್ನು ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸುತ್ತಿರುವುದು ಯೋಗ್ಯವಲ್ಲ ಎಂದು ಹೇಳಿದ್ದಾರೆ. ಇನ್ನು ಕೆಲವರು ಕಾಮೆಂಟ್ ನಲ್ಲಿ ಮಹಿಳಾ ಕಲಾವಿದರಿಗೆ ಹತ್ತಿರ ಬಂದು ನೃತ್ಯ ಮಾಡಲು ಸಚಿವರೇ ಅಹ್ವಾನ ನೀಡಿದ್ದಾರೆ ಎಂದು ತಿಳಿಸಿದ್ದಾರೆ.



ವೈರಲ್ ಆಗಿರುವ ವಿಡಿಯೊದಲ್ಲಿ ಸಚಿವ ಎಸ್. ಪೆರಿಯಕರುಪ್ಪನ್ ಅವರು ಡಿಎಂಕೆಯ ಜಿಲ್ಲಾ ಮಟ್ಟದ ಪಕ್ಷದ ಕಾರ್ಯಕರ್ತರೊಂದಿಗೆ ಮುಂದಿನ ಸಾಲಿನಲ್ಲಿ ಕುಳಿತಿದ್ದರು. ಈ ವೇಳೆ ನೃತ್ಯ ತಂಡವೊಂದು ವೇದಿಕೆಯಲ್ಲಿ ಪ್ರದರ್ಶನ ನೀಡುತ್ತಿದ್ದು, ಅವರನ್ನು ಕೆಳಗೆ ಬರಲು ಸಚಿವರೇ ಆಹ್ವಾನಿಸುತ್ತಿರುವುದನ್ನು ವೈರಲ್ ಆಗಿರುವ ವಿಡಿಯೊದಲ್ಲಿ ತೋರಿಸಲಾಗಿದೆ.

Viral Video: ಟಿಕೆಟ್‌ ತಗೊಂಡಿಲ್ಲಂತಾ ಹೀಗ್‌ ನಡೆಸ್ಕೊಳ್ಳೋದಾ? ರೈಲ್ವೆ TTEಯ ದರ್ಪವನ್ನೊಮ್ಮೆ ನೋಡಿ

ಇದನ್ನು ಟೀಕಿಸಿರುವ ಬಿಜೆಪಿ, ಇದು ಅವಮಾನ ಎಂದು ಹೇಳಿದ್ದು, ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದು, ಅರೆನಗ್ನ ಉಡುಗೆಯಲ್ಲಿರುವ ಮಹಿಳೆಯರನ್ನು ಹತ್ತಿರ ಕರೆಸಿ ನೃತ್ಯ ಮಾಡಿಸಿ ಚಪ್ಪಾಳೆ ತಟ್ಟುವ ನಾಯಕರ ಬಳಿ ತಮಿಳುನಾಡಿನ ಮಹಿಳೆಯರು ದೂರುಗಳನ್ನು ಕೊಡುವುದು ಹೇಗೆ ಎಂದು ತಿಳಿಸಿದೆ.

ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಕೂಡ ತೀವ್ರವಾಗಿ ಪ್ರತಿಕ್ರಿಯಿಸಿದ್ದು, ಇದು ಸಾರ್ವಜನಿಕ ಸಭ್ಯತೆಯ ಬಗ್ಗೆ ಕಳವಳಗಳನ್ನು ಹುಟ್ಟುಹಾಕಿದೆ ಎಂದು ಹೇಳಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಪ್ರತಿಕ್ರಿಯಿಸಿರುವ ಅನೇಕರು, ಇದು ಡಿಎಂಕೆಯ ಸ್ತ್ರೀವಾದವೇ, ಅವರ ಘನತೆಯೇ ಎಂದು ಕೇಳಿದ್ದಾರೆ. ಇನ್ನು ಕೆಲವರು ಅವರ ತಮಿಳು ಸಂಸ್ಕೃತಿ ಇದುವೇ ಎಂದು ಪ್ರಶ್ನಿಸಿದ್ದಾರೆ. ಈ ಬಗ್ಗೆ ಡಿಎಂಕೆ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ. ಅನೇಕರು ಡಿಎಂಕೆ ಪ್ರತಿಕ್ರಿಯೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ವಿದ್ಯಾ ಇರ್ವತ್ತೂರು

View all posts by this author