ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Viral Video: ಬೆಂಗಳೂರು ಮೆಟ್ರೋ ನಿಲ್ದಾಣದಲ್ಲಿ ಜೋಡಿಯ ರೋಮ್ಯಾನ್ಸ್ ; ವಿಡಿಯೋ ವೈರಲ್‌

ಮೆಟ್ರೋ ನಿಲ್ದಾಣದಲ್ಲಿ ಯುವಕ ಯುವತಿಯರಿಬ್ಬರು ಸಾರ್ವಜನಿಕವಾಗಿಯೇ ಸರಸ ಸಲ್ಲಾಪದಲ್ಲಿ ತೊಡಗಿದ್ದಾರೆ. ಮೆಟ್ರೋ ಹತ್ತಲು ಸಾಲಿನಲ್ಲಿ ನಿಂತಿರುವ ಜೋಡಿ ಅಸಭ್ಯವಾಗಿ ವರ್ತಿಸಿದ್ದಾರೆ. ಇವರಿಬ್ಬರ ಈ ವರ್ತನೆಗೆ ಸಹ ಪ್ರಯಾಣಿಕರು ಕಿಡಿಕಾರಿದ್ದು, ಈ ವಿಡಿಯೋ ಇದೀಗ ವೈರಲ್ ಆಗುತ್ತಿದೆ.

ಬೆಂಗಳೂರು ಮೆಟ್ರೋ ನಿಲ್ದಾಣದಲ್ಲಿ ಜೋಡಿಯ ರೋಮ್ಯಾನ್ಸ್!

Profile Vishakha Bhat Apr 11, 2025 11:08 AM

ಬೆಂಗಳೂರು: ಮೆಟ್ರೋ ನಿಲ್ದಾಣದಲ್ಲಿ (Bengaluru Metro) ಯುವಕ ಯುವತಿಯರಿಬ್ಬರು ಸಾರ್ವಜನಿಕವಾಗಿಯೇ ಸರಸ ಸಲ್ಲಾಪದಲ್ಲಿ ತೊಡಗಿದ್ದಾರೆ. ಮೆಟ್ರೋ ಹತ್ತಲು ಸಾಲಿನಲ್ಲಿ ನಿಂತಿರುವ ಜೋಡಿ ಅಸಭ್ಯವಾಗಿ ವರ್ತಿಸಿದ್ದಾರೆ. ಇವರಿಬ್ಬರ ಈ ವರ್ತನೆಗೆ ಸಹ ಪ್ರಯಾಣಿಕರು ಕಿಡಿಕಾರಿದ್ದು, ಈ ವಿಡಿಯೋ ಇದೀಗ ವೈರಲ್ ಆಗುತ್ತಿದೆ. ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದ ಫ್ಲ್ಯಾಟ್ ಫಾರ್ಮ್ -3ಯಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತದೆ. ಮೆಟ್ರೋ ಏರಲು ಪ್ರಯಾಣಿಕರು ಸಾಲಾಗಿ ನಿಂತಿದ್ದಾರೆ. ಅದೇ ಸಾಲಿನ ಎದುರಿನಲ್ಲಿರುವ ಈ ಜೋಡಿ (Viral Video) ಸಾರ್ವಜನಿಕವಾಗಿಯೇ ಪಕ್ಕದಲ್ಲಿ ಮಹಿಳೆಯರು,ಹಿರಿಯರಿದ್ರೂ ರೋಮ್ಯಾನ್ಸ್ ಮಾಡಿದೆ.

ಸದ್ಯ ವೈರಲ್‌ ಆದ ವಿಡಿಯೋಗೆ ಎಲ್ಲಡೆ ಆಕ್ರೋಶ ವ್ಯಕ್ತವಾಗುತ್ತಿದೆ. ನಮ್ಮ ಮೆಟ್ರೋದಲ್ಲಿ ಮಕ್ಕಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿ ಎಲ್ಲ ವಯೋಮಾನದವರು ಪ್ರಯಾಣಿಸುತ್ತಾರೆ.‌ ಈ ರೀತಿಯ ನಡವಳಿಕೆಯು ಸರಿಯಲ್ಲ ಎಂದು ಕೆಲವರು ಹೇಳಿದ್ದಾರೆ. ಸದ್ಯ ವೈರಲ್‌ ಆದ ವಿಡಿಯೋ 1 ನಿಮಿಷ 30 ಸೆಕಂಡ್ ಇದ್ದು, ಸಾರ್ವಜನಿಕ ಸ್ಥಳದಲ್ಲಿ ಇಂತಹ ವರ್ತನೆಯು ಎಲ್ಲರನ್ನೂ ಮುಜುಗರಕ್ಕೀಡು ಮಾಡುತ್ತದೆ. ಸದ್ಯ ಈ ಜೋಡಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೊಲೀಸರಿಗೆ ಸಾರ್ವಜನಿಕರು ಆಗ್ರಹ ಮಾಡಿದ್ದಾರೆ.



ಮೆಟ್ರೋದಲ್ಲಿ ಈ ರೀತಿಯ ವರ್ತನೆ ಇದೇ ಮೊದಲೇನಲ್ಲ. ಈ ಹಿಂದೆ ಚಲಿಸುತ್ತಿದ್ದ ಮೆಟ್ರೋ ರೈಲಿನಲ್ಲಿ ಯುವಕ- ಯುವತಿ ಪರಸ್ಪರ ಬಿಗಿದಪ್ಪಿದ್ದ ವರ್ತನೆಗೆ ಸಹ ಪ್ರಯಾಣಿಕರು ಕಿಡಿಕಾರಿದ್ದರು. ಮೆಟ್ರೋ ರೈಲಿನಲ್ಲಿ ಯುವಕ-ಯುವತಿಯರಿಬ್ಬರು ಪರಸ್ಪರ ಆಲಂಗಿಸಿಕೊಂಡು ಮುತ್ತಿಟ್ಟುಕೊಂಡಿದ್ದರು. ಇದನ್ನು ಸಹಪ್ರಯಾಣಿಕರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದರು. ಅವರ ಈ ವರ್ತನೆಗೆ ಭಾರಿ ಆಕ್ರೋಶ ವ್ಯಕ್ತವಾಗಿತ್ತು.

ಈ ಸುದ್ದಿಯನ್ನೂ ಓದಿ: ಒಂದೆಡೆ ಐಪಿಎಲ್‌ ಮ್ಯಾಚು, ಸ್ಟ್ಯಾಂಡ್‌ನಲ್ಲಿ ಜೋಡಿಗಳ ಚುಂಬನ !

ಯುವಕನನ್ನು ಒಪ್ಪಿಕೊಂಡಿದ್ದ ಯುವತಿ ಅಕ್ಷರಶಃ ಚುಂಬಿಸುತ್ತಿದ್ದಳು ಎಂದು ಬಿಎಂಆರ್‌ಸಿಎಲ್, ನಮ್ಮ ಮೆಟ್ರೋ ಹಾಗೂ ನಗರ ಪೊಲೀಸರಿಗೆ ಟ್ಯಾಗ್ ಮಾಡಿ ದೂರು ನೀಡಲಾಗಿತ್ತು. ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಬೆನ್ನಲ್ಲೇ, ಇತ್ತ ಬೆಂಗಳೂರು ನಗರ ಪೊಲೀಸರು ಈ ಬಗ್ಗೆ ಕ್ರಮವಹಿಸಲಾಗುವುದು, ಘಟನೆ ಸಂಬಂಧ ಮಾಹಿತಿ ನೀಡಿ ಎಂದು ಕೇಳಿದ್ದರು.