Viral Video: ಟಾಯ್ಲೆಟ್‌ನಲ್ಲಿ ವಿದ್ಯಾರ್ಥಿನಿ ಜೊತೆ ನೀಚ ಶಿಕ್ಷಕ ಮಾಡಿದ್ದೇನು ಗೊತ್ತಾ? ವಿಡಿಯೊ ನೋಡಿ
ಉತ್ತರ ಪ್ರದೇಶದ ಮಹಾರಾಜ್‍ಗಂಜ್‍ನಲ್ಲಿ, ಖಾಸಗಿ ಕಾನ್ವೆಂಟ್ ಶಾಲೆಯ ನೃತ್ಯ ಶಿಕ್ಷಕನೊಬ್ಬ 2ನೇ ತರಗತಿಯಲ್ಲಿ ಓದುತ್ತಿರುವ ಅಪ್ರಾಪ್ತ ವಿದ್ಯಾರ್ಥಿನಿಯೊಂದಿಗೆ ಅಶ್ಲೀಲ ಕೃತ್ಯ ಎಸಗಿದ್ದಾನೆ. ಈ ವಿಚಾರ ಆಕೆಯ ಪೋಷಕರಿಗೆ ತಿಳಿದ ನಂತರ ಅವರು ಶಾಲೆಗೆ ಬಂದು ಅವನನ್ನು ಥಳಿಸಿದ್ದಾರೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video)ಆಗಿದೆ.


ಲಖನೌ: ಉತ್ತರ ಪ್ರದೇಶದ ಮಹಾರಾಜ್‍ಗಂಜ್‍ನಲ್ಲಿ, ಖಾಸಗಿ ಕಾನ್ವೆಂಟ್ ಶಾಲೆಯ ನೃತ್ಯ ಶಿಕ್ಷಕನೊಬ್ಬ ಶಾಲಾ ವಿದ್ಯಾರ್ಥಿನಿಯರನ್ನು ಬಸ್ ಪಾರ್ಕಿಂಗ್ ಅಥವಾ ಶೌಚಾಲಯಗಳಿಗೆ ಕರೆದೊಯ್ದು ಅನುಚಿತವಾಗಿ ಸ್ಪರ್ಶಿಸಿದ ಆರೋಪದ ಮೇಲೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯಡಿ ಬಂಧಿಸಲಾಗಿದೆ. 2 ನೇ ತರಗತಿಯಲ್ಲಿ ಓದುತ್ತಿರುವ ಅಪ್ರಾಪ್ತ ವಿದ್ಯಾರ್ಥಿನಿಯೊಂದಿಗೆ ಅಶ್ಲೀಲ ಕೃತ್ಯ ಎಸಗಿ ಸಿಕ್ಕಿಬಿದ್ದ ನಂತರ ಪೋಷಕರು ಅವನನ್ನು ಥಳಿಸಿದ್ದು, ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video)ಆಗಿದೆ. ಕಿಡಿಗೇಡಿಯನ್ನು ಅರ್ಜುನ್ ಜೈಸ್ವಾಲ್ ಎಂದು ಗುರುತಿಸಲಾಗಿದೆ.
ಅರ್ಜುನ್ ಜೈಸ್ವಾಲ್ ಈತ ಎಸಗಿದ ನೀಚ ಕೃತ್ಯದಿಂದ ಸಂತ್ರಸ್ತ ವಿದ್ಯಾರ್ಥಿನಿಯ ಪೋಷಕರು ಮತ್ತು ಜೈಸ್ವಾಲ್ ನಡುವೆ ಜಗಳ ನಡೆದಿದೆ. ವೈರಲ್ ವಿಡಿಯೊದಲ್ಲಿ ಮಹಿಳೆಯೊಬ್ಬಳು ಜೈಸ್ವಾಲ್ ಮೇಲೆ ಕಿರುಚುವುದು ಮತ್ತು ಹೊಡೆಯುವುದು ಸೆರೆಯಾಗಿದೆ. ನೃತ್ಯ ಹೇಳಿಕೊಡುವ ನೆಪದಲ್ಲಿ ಹುಡುಗಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಕ್ಕಾಗಿ ಅವಳು ಅವನ ಕಾಲರ್ ಹಿಡಿದು ಅವನಿಗೆ ಕಪಾಳಮೋಕ್ಷ ಮಾಡಿದ್ದಾಳೆ. ಸಂತ್ರಸ್ತೆಯ ಕುಟುಂಬ ಸದಸ್ಯರು ಶಾಲೆಯಲ್ಲಿ ಗಲಾಟೆ ಮಾಡಿ ಶಿಕ್ಷಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.
महाराजगंज: डांस टीचर ने छात्राओं के साथ की छेड़खानी
— News24 (@news24tvchannel) March 5, 2025
◆ स्कूल प्रशासन ने टीचर को सस्पेंड किया, जांच जारी#Maharajganj | #uttarpardesh | #viralvideo pic.twitter.com/cfiXEC1EW9
ವರದಿ ಪ್ರಕಾರ, ಜೈಸ್ವಾಲ್ ಮಕ್ಕಳನ್ನು ಪಾರ್ಕ್ ಮಾಡಿದ ಬಸ್ಸುಗಳು ಅಥವಾ ವಾಶ್ ರೂಂಗಳ ಬಳಿ ಕರೆದೊಯ್ದು ಅನುಚಿತವಾಗಿ ಸ್ಪರ್ಶಿಸುತ್ತಿದ್ದನು ಎನ್ನಲಾಗಿದೆ. ಇತ್ತೀಚೆಗೆ ಈ ವಿಷಯ ಬೆಳಕಿಗೆ ಬರುತ್ತಿದ್ದಂತೆ, 2 ನೇ ತರಗತಿ ವಿದ್ಯಾರ್ಥಿಯ ಕುಟುಂಬವು ಪೊಲೀಸ್ ಠಾಣೆಗೆ ತಲುಪಿ ಮಾರ್ಚ್ 3 ರಂದು ನೃತ್ಯ ಶಿಕ್ಷಕನ ವಿರುದ್ಧ ಪ್ರಕರಣ ದಾಖಲಿಸಿದೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪವನ್ನು ಆತನ ಮೇಲೆ ಹೊರಿಸಲಾಗಿದೆ. ಪೊಲೀಸರು ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದು, ಪೋಕ್ಸೊ ಕಾಯ್ದೆಯಡಿ ಆತನನ್ನು ಬಂಧಿಸಿದ್ದಾರೆ.
ಈ ರೀತಿಯ ಘಟನೆಗಳು ನಡೆದಿರುವುದು ಇದೇ ಮೊದಲಲ್ಲ. ಈ ಹಿಂದೆ ಕಳೆದ ವರ್ಷ ಡಿಸೆಂಬರ್‌ನಲ್ಲಿ 11 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪುಣೆ ನಗರದ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ ನೃತ್ಯ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದರು. ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ 39 ವರ್ಷದ ನೃತ್ಯ ಶಿಕ್ಷಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು.
ಈ ಸುದ್ದಿಯನ್ನೂ ಓದಿ:Physical Abuse: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಕಾಲೇಜು ಪ್ರಿನ್ಸಿಪಾಲ್ ಅರೆಸ್ಟ್
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಸರ್ಕಾರಿ ಕಾಲೇಜಿನ ಪ್ರಾಂಶುಪಾಲರನ್ನು ಅರೆಸ್ಟ್ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿ ನಡೆದಿದೆ. ಸಚಿನ್ ಕುಮಾರ್ ಪಾಟೀಲ್ ಬಂಧಿತ ಪ್ರಿನ್ಸಿಪಾಲ್. ಆರೋಪಿ ಪ್ರಾಂಶುಪಾಲ ವಿದ್ಯಾರ್ಥಿನಿಯರ ಮೈ-ಕೈ ಮುಟ್ಟುವುದು ಹಾಗೂ ಅಪ್ಪಿಕೊಳ್ಳುತ್ತಿದ್ದರು. ಇದಕ್ಕೆ ಪ್ರತಿರೋಧಿಸಿದರೆ ಪರೀಕ್ಷೆಯಲ್ಲಿ ಫೇಲ್ ಮಾಡುವುದಾಗಿ ಬೆದರಿಸುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.