Viral Video: ಮಧ್ಯಾಹ್ನದ ಬಿಸಿಯೂಟದಲ್ಲಿ ಸತ್ತ ಕಪ್ಪೆ ಪತ್ತೆ; ಶಾಲೆ ವಿರುದ್ಧ ತನಿಖೆಗೆ ಆದೇಶ
Dead Frog Found in Midday Meal: ಶಾಲೆಯಲ್ಲಿ ನೀಡಲಾಗುತ್ತಿದ್ದ ಮಧ್ಯಾಹ್ನದ ಬಿಸಿಯೂಟದಲ್ಲಿ ಸತ್ತ ಕಪ್ಪೆ ಪತ್ತೆಯಾದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನ ಗೋಕುಲಪುರ ಪ್ರದೇಶದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಈ ಸಂಬಂಧ ಜಿಲ್ಲಾಧಿಕಾರಿ ರುಚಿಕಾ ಚೌಹಾಣ್ ಘಟನೆಯ ತನಿಖೆಗೆ ಆದೇಶಿಸಿದ್ದಾರೆ.
ಬಿಸಿಯೂಟದಲ್ಲಿ ಸತ್ತ ಕಪ್ಪೆ (ಸಂಗ್ರಹ ಚಿತ್ರ) -
ಗ್ವಾಲಿಯರ್: ಮಕ್ಕಳಿಗೆ ನೀಡಲಾದ ಮಧ್ಯಾಹ್ನದ ಊಟದಲ್ಲಿ ಸತ್ತ ಕಪ್ಪೆ ಪತ್ತೆಯಾಗಿರುವ ಘಟನೆ ಮಧ್ಯಪ್ರದೇಶದ (Madhya Pradesh) ಗ್ವಾಲಿಯರ್‌ನ ಗೋಕುಲಪುರ ಪ್ರದೇಶದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. (Viral Video) ಮಂಗಳವಾರ ಮಧ್ಯಾಹ್ನದ ಊಟದ ಪಾತ್ರೆಯಲ್ಲಿ ಪುಟ್ಟ ಕಪ್ಪೆಯ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ, ಜಿಲ್ಲಾಧಿಕಾರಿ ರುಚಿಕಾ ಚೌಹಾಣ್ ಘಟನೆಯ ತನಿಖೆಗೆ ಆದೇಶಿಸಿದ್ದಾರೆ.
ತನಿಖಾ ತಂಡವು ಶಾಲೆಗೆ ಭೇಟಿ ನೀಡಿದ್ದು, ಯಾವುದೇ ನಿರ್ಲಕ್ಷ್ಯ ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್ ಸಿಇಒ ಸೋಜನ್ ಸಿಂಗ್ ರಾವತ್ ತಿಳಿಸಿದ್ದಾರೆ.
ಕಪ್ಪೆ ಸತ್ತಿರುವ ವಿಡಿಯೋ
A frog was found in the curry being served to students at a government school in Gwalior district of Madhya Pradesh. These mid-meal stories have now stopped surprising us. pic.twitter.com/7zVvXL3sfa
— Piyush Rai (@Benarasiyaa) December 2, 2025
ಉತ್ತರ ಪ್ರದೇಶದಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯಲ್ಲಿ 11 ಕೋಟಿ ರೂಪಾಯಿ ಹಗರಣ
ಉತ್ತರ ಪ್ರದೇಶದ ಬಲರಾಂಪುರ ಜಿಲ್ಲೆಯಲ್ಲಿ ಮಧ್ಯಾಹ್ನದ ಊಟ ಯೋಜನೆಯಲ್ಲಿ ಪ್ರಮುಖ ಹಗರಣವೊಂದು ಬೆಳಕಿಗೆ ಬಂದಿದೆ. ಮೂಲ ಶಿಕ್ಷಣ ಅಧಿಕಾರಿ (ಬಿಎಸ್‌ಎ) ನೀಡಿದ ದೂರಿನ ಆಧಾರದ ಮೇಲೆ, ಜಿಲ್ಲಾ ಸಂಯೋಜಕರು ಸೇರಿದಂತೆ 44 ಜನರ ವಿರುದ್ಧ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಗರಣದ ಮೌಲ್ಯ 11 ಕೋಟಿ ರೂಪಾಯಿಗಳಿಗೂ ಹೆಚ್ಚು ಎಂದು ವರದಿಯಾಗಿದೆ.
ಮಧ್ಯಾಹ್ನ ಊಟದ ಜಿಲ್ಲಾ ಸಂಯೋಜಕ ಫಿರೋಜ್ ಅಹ್ಮದ್ ಖಾನ್ ಈ ಹಗರಣದ ಪ್ರಮುಖ ಆರೋಪಿ. ಅವರು ವಂಚನೆ ಮೂಲಕ ಶಾಲಾ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸಿದ್ದಾರೆ. ಮಧ್ಯಾಹ್ನದ ಊಟದ ಬಜೆಟ್ ಬಿಡುಗಡೆ ಮಾಡಿದ್ದಾರೆ ಮತ್ತು ಕೋಟ್ಯಂತರ ರೂಪಾಯಿಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
Kalaburagi News: ಶಾಲೆಯಲ್ಲಿ ಬಿಸಿಯೂಟ ಸೇವಿಸಿ 25 ಮಕ್ಕಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು
ಮೂರು ಮದರಸಾಗಳ ಮುಖ್ಯೋಪಾಧ್ಯಾಯರು, ಐದು ಗ್ರಾಮದ ಮುಖ್ಯಸ್ಥರು ಮತ್ತು ಐದು ಕೌನ್ಸಿಲ್ ಶಾಲೆಗಳ ಮುಖ್ಯೋಪಾಧ್ಯಾಯರು ಸೇರಿದಂತೆ ಒಟ್ಟು 44 ಜನರನ್ನು ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ. ಅನೇಕ ಮದರಸಾಗಳು ಮತ್ತು ಶಾಲೆಗಳಲ್ಲಿ ವಿದ್ಯಾರ್ಥಿಗಳೇ ಇರಲಿಲ್ಲ. ಆದರೆ ಅವರ ಹೆಸರಿನಲ್ಲಿ ನಕಲಿ ಬಜೆಟ್ ನೀಡುವ ಮೂಲಕ ಹಣವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ತನಿಖೆಯಿಂದ ತಿಳಿದು ಬಂದಿದೆ.
ಬಿಎಸ್ಎ ನಡೆಸಿದ ತನಿಖೆಯಲ್ಲಿ ಅನೇಕ ಶಾಲೆಗಳು ಮತ್ತು ಮದರಸಾಗಳಲ್ಲಿ ವಿದ್ಯಾರ್ಥಿಗಳ ನಿಜವಾದ ಸಂಖ್ಯೆ ತುಂಬಾ ಕಡಿಮೆಯಿತ್ತು, ಆದರೆ ದಾಖಲೆಗಳಲ್ಲಿ ಸಂಖ್ಯೆಯನ್ನು ಹಲವು ಪಟ್ಟು ಹೆಚ್ಚು ತೋರಿಸಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿಗಳನ್ನು ಹಿಂಪಡೆಯಲಾಗುತ್ತಿತ್ತು ಎಂದು ತಿಳಿದುಬಂದಿದೆ.
ಬಿಎಸ್ಎ ಸಲ್ಲಿಸಿದ ಎಫ್‌ಐಆರ್ ನಂತರ, ಬಲರಾಂಪುರ ಪೊಲೀಸರು ಈ ವಿಷಯದ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಇದೊಂದು ಪ್ರಮುಖ ಆರ್ಥಿಕ ಹಗರಣವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಹಗರಣ ಬಹಿರಂಗಗೊಂಡಿರುವುದು ಶಿಕ್ಷಣ ಇಲಾಖೆಯಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ.