Fact Check: ಬಲೂಚಿಸ್ತಾನ್ ಲಿಬರೇಶನ್ ಆರ್ಮಿಗೆ ಬೆಂಬಲ ಸೂಚಿಸಿದ್ರಾ ರಕ್ಷಣಾ ಸಚಿವ ರಾಜನಾಥ್ ಸಿಂಗ್? ವೈರಲ್ ನ್ಯೂಸ್‌ನ ಅಸಲಿಯತ್ತೇನು?
ಪಾಕಿಸ್ತಾನ ಸರ್ಕಾರದ ವಿರುದ್ಧ ಬಂಡಾಯ ಎದ್ದಿರುವ ಬಲೂಚಿಸ್ತಾನ್ ಲಿಬರೇಶನ್ ಆರ್ಮಿಗೆ ಭಾರತ ಬೆಂಬಲ ನೀಡುತ್ತಿದೆ. ಇದನ್ನು ಸ್ವತಃ ಭಾರತದ ರಕ್ಷಣಾ ಸಚಿವರೇ ಹೇಳಿದ್ದಾರೆ ಎನ್ನುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಆದರೆ ಇದು ನಕಲಿ ವಿಡಿಯೋ ಎಂದು ಪತ್ರಿಕಾ ಮಾಹಿತಿ ಬ್ಯೂರೋ ಫ್ಯಾಕ್ಟ್ ಚೆಕ್ ವಿಭಾಗವು ಸೋಮವಾರ ಸ್ಪಷ್ಟಪಡಿಸಿದೆ.
ಸಂಗ್ರಹ ಚಿತ್ರ -
ನವದೆಹಲಿ: ಪಾಕಿಸ್ತಾನದ ನೈರುತ್ಯ ಭಾಗದಲ್ಲಿರುವ ಬಲೂಚಿಸ್ತಾನ್ ( Balochistan) ಪ್ರಾಂತ್ಯಕ್ಕೆ ಸ್ವಾತಂತ್ರ್ಯ ಮತ್ತು ಸ್ವಯಂ ನಿರ್ಣಯದ ಹಕ್ಕು ನೀಡುವಂತೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ಪ್ರತ್ಯೇಕತಾವಾದಿ ಬಂಡಾಯ ಸಂಘಟನೆಯಾದ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (Balochistan Liberation Army) ಗೆ ಭಾರತ ಬೆಂಬಲ ನೀಡುತ್ತಿದೆ ಎಂದು ಪಾಕಿಸ್ತಾನ ಆರೋಪಿಸಿದೆ. ಇದಕ್ಕೆ ಸಂಬಂಧಿಸಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Defense Minister Rajnath Singh) ಅವರ ಹೇಳಿಕೆಯನ್ನು ಒಳಗೊಂಡ ವಿಡಿಯೋವನ್ನು (Viral Video) ಕೂಡ ಸಾಮಾಜಿಕ ಮಾಧ್ಯಮಗಳಲ್ಲಿ ಬಿಡುಗಡೆ ಮಾಡಿದೆ. ಆದರೆ ಇದು ಸುಳ್ಳು ಸುದ್ದಿ ಎಂದು ಪತ್ರಿಕಾ ಮಾಹಿತಿ ಬ್ಯೂರೋ (Press Information Bureau) ಸೋಮವಾರ ಸ್ಪಷ್ಟಪಡಿಸಿದೆ.
ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ವಿಡಿಯೋ ನಕಲಿ ಎಂದು ಸೋಮವಾರ ಸ್ಪಷ್ಟಪಡಿಸಿರುವ ಪತ್ರಿಕಾ ಮಾಹಿತಿ ಬ್ಯೂರೋದ ಫ್ಯಾಕ್ಟ್ ಚೆಕ್ ವಿಭಾಗವು ಇದನ್ನು ನಂಬದಂತೆ ಎಚ್ಚರಿಕೆಯನ್ನು ನೀಡಿದೆ.
Balochistan Liberation Army: ಬಲೂಚಿಸ್ತಾನ್ ಲಿಬರೇಶನ್ ಆರ್ಮಿಯನ್ನು ಭಯೋತ್ಪಾದಕ ಗುಂಪೆಂದು ಘೋಷಿಸಿದ ಅಮೆರಿಕ
ಪಾಕಿಸ್ತಾನಿ ಪ್ರಚಾರ ಖಾತೆಯೊಂದು ಬಲೂಚಿಸ್ತಾನ್ ಲಿಬರೇಶನ್ ಆರ್ಮಿಗೆ ಭಾರತ ಬೆಂಬಲ ನೀಡುವ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿಕೆ ನೀಡಿದ್ದಾರೆ ಎಂಬ ವಿಡಿಯೋವಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದೆ ಎಂದು ಪಿಐಬಿ ಫ್ಯಾಕ್ಟ್ ಚೆಕ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಅಂತಹ ಯಾವುದೇ ಹೇಳಿಕೆ ನೀಡಿಲ್ಲ. ಭಾರತ ಸರ್ಕಾರದ ಸುಳ್ಳು ಮಾಹಿತಿ ಹರಡಲು ಪಾಕಿಸ್ತಾನ ಪ್ರಚಾರ ಖಾತೆಯೊಂದು ಸುಳ್ಳು ಸುದ್ದಿಯನ್ನು ಹರಡಿದೆ. ಇಂತಹ ಖಾತೆಗಳ ಬಗ್ಗೆ ನಾಗರಿಕರು ಎಚ್ಚರದಿಂದ ಇರಬೇಕು ಎಂದು ಪಿಐಬಿ ತಿಳಿಸಿದೆ. ಸರ್ಕಾರದ ಬಗ್ಗೆ ಸುಳ್ಳು ಮಾಹಿತಿ ಹರಡುವ ಅನುಮಾನಾಸ್ಪದ ವಿಷಯಗಳು ಕಂಡು ಬಂದರೆ ತಕ್ಷಣ ವಾಟ್ಸಾಪ್ ಸಂಖ್ಯೆ +91 8799711259 ಅಥವಾ ಇ-ಮೇಲ್ ವಿಳಾಸ [email protected] ನೊಂದಿಗೆ ಹಂಚಿಕೊಳ್ಳುವಂತೆ ಪಿಐಬಿ ಫ್ಯಾಕ್ಟ್ ಚೆಕ್ ತಿಳಿಸಿದೆ.
ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿರುವ ನಕಲಿ ಪೋಸ್ಟ್‌ನಲ್ಲಿ ಬಲೂಚಿಸ್ತಾನ್ ಲಿಬರೇಶನ್ ಆರ್ಮಿಗೆ ಭಾರತದಿಂದ ಹಣಕಾಸಿನ ನೆರವು ಮತ್ತು ಶಸ್ತ್ರಾಸ್ತ್ರಗಳನ್ನು ಪೂರೈಸುವುದನ್ನು ಮುಂದುವರಿಸುವುದಾಗಿ ರಾಜನಾಥ್ ಸಿಂಗ್ ಹೇಳಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಆದರೆ ಇದು ಸುಳ್ಳು ಎಂಬುದನ್ನು ಸ್ವತಃ ರಕ್ಷಣಾ ಸಚಿವರೇ ಸ್ಪಷ್ಟಪಡಿಸಿದ್ದಾರೆ. ತಾವು ಅಂತಹ ಯಾವುದೇ ಹೇಳಿಕೆಯನ್ನು ನೀಡಿಲ್ಲ ಎಂಬುದಾಗಿ ಹೇಳಿದ್ದಾರೆ.
ಪಾಕಿಸ್ತಾನದ ಪ್ರಚಾರದ ಖಾತೆಯೊಂದು, ಭಾರತವು ಬಲೂಚಿಸ್ತಾನ್ ಲಿಬರೇಶನ್ ಆರ್ಮಿ ಗೆ ಬೆಂಬಲ ನೀಡುತ್ತಿರುವ ಕುರಿತು ರಕ್ಷಣಾ ಸಚಿವರಾದ ಶ್ರೀ @rajnathsingh ಅವರು ಹೇಳಿಕೆ ನೀಡಿದ್ದಾರೆ ಎಂಬ ಸುಳ್ಳು ಸುದ್ದಿಯನ್ನು ಹರಡುತ್ತಿದೆ.#PIBFactCheck
— PIB in Karnataka (@PIBBengaluru) May 25, 2026
ಈ ಮಾಹಿತಿ ತಪ್ಪು. ರಕ್ಷಣಾ ಸಚಿವರು ಅಂತಹ ಯಾವುದೇ ಹೇಳಿಕೆ ನೀಡಿಲ್ಲ.… https://t.co/r5KtYnD9gS pic.twitter.com/4KBOB3eU80
ಮಹಾರಾಷ್ಟ್ರದ ಶಿರಡಿಯಲ್ಲಿ ಶನಿವಾರ ನಡೆದ ಕಾರ್ಯಕ್ರಮವೊಂದರ ವಿಡಿಯೋ ಯೂಟ್ಯೂಬ್ ನಲ್ಲಿ ಪ್ರಸಾರವಾಗಿದ್ದು, ಇದರಲ್ಲಿ ಸಚಿವ ರಾಜನಾಥ್ ಸಿಂಗ್ ಅವರು ಖಾಸಗಿ ವಲಯದ ರಕ್ಷಣಾ ಉತ್ಪಾದನಾ ಸಂಕೀರ್ಣವನ್ನು ಉದ್ಘಾಟಿಸಿ ಮಾತನಾಡಿದ್ದರು. ಇದರ ವಿಡಿಯೋ ತುಣುಕನ್ನು ಬಳಸಿ ಈ ವಿಡಿಯೋವನ್ನು ತಯಾರಿಸಲಾಗಿದೆ ಎಂದು ಪಿಬಿಐ ತಿಳಿಸಿದೆ.
ಈ ಕಾರ್ಯಕ್ರಮದಲ್ಲಿ, ರಕ್ಷಣಾ ಸಚಿವರು ಭಾರತದ ಮೊದಲ 300 ಕಿಮೀ ಸಾರ್ವತ್ರಿಕ ರಾಕೆಟ್ ಉಡಾವಣಾ ವ್ಯವಸ್ಥೆ 'ಸೂರ್ಯಸ್ತ್ರ'ವನ್ನು ಉದ್ಘಾಟಿಸಿದರು ಮತ್ತು ಸ್ಥಳೀಯ ರಕ್ಷಣಾ ಉತ್ಪಾದನೆಯ ಮಹತ್ವದ ಬಗ್ಗೆ ತಿಳಿಸಿದ್ದರು.
ಕಾರ್‌ನಿಂದ ಕಸ ಎಸೆದ ಪ್ರವಾಸಿಗರು; ರಸ್ತೆ ಮಧ್ಯದಲ್ಲೇ ತಡೆದು ಕಸ ವಾಪಸ್ ಕೊಟ್ಟ ಸಾಮಾಜಿಕ ಕಾರ್ಯಕರ್ತ!
ಭವಿಷ್ಯದ ಯುದ್ಧವು ಕೇವಲ ಸಶಸ್ತ್ರ ಪಡೆಗಳ ಗಾತ್ರಕ್ಕಿಂತ ಹೆಚ್ಚಾಗಿ ಸುಧಾರಿತ ಯುದ್ಧಸಾಮಗ್ರಿಗಳು, ಯಾಂತ್ರೀಕೃತಗೊಂಡ ಮತ್ತು ಸ್ಥಳೀಯ ತಾಂತ್ರಿಕ ಸಾಮರ್ಥ್ಯಗಳ ಮೇಲೆ ಅವಲಂಬಿತವಾಗಿರುತ್ತದೆ ಎಂದು ಹೇಳಿರುವ ಅವರು, ರಕ್ಷಣಾ ಉತ್ಪಾದನೆಯಲ್ಲಿ ಸ್ವಾವಲಂಬನೆ ಅಗತ್ಯ ಎಂದು ತಿಳಿಸಿದ್ದರು ಎಂಬುದಾಗಿ ಪಿಐಬಿ ಫ್ಯಾಕ್ಟ್ ಚೆಕ್ ಸ್ಪಷ್ಟಪಡಿಸಿದೆ.