ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Viral News: ಬಹುಮಹಡಿ ಕಟ್ಟದಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿರಿಸಿಕೊಂಡ ವ್ಯಕ್ತಿ; ವಿಡಿಯೋ ವೈರಲ್‌

ಪೊವೈ ಅಪಾರ್ಟ್‌ಮೆಂಟ್‌ ಒಂದರಲ್ಲಿ ವ್ಯಕ್ತಿಯೊಬ್ಬ ಕನಿಷ್ಠ 17 ಮಕ್ಕಳನ್ನು ಒತ್ತೆಯಾಳಾಗಿರಿಸಿಕೊಂಡಿದ್ದ ಎಂಬ ಆಘಾತಕಾರಿ ಮಾಹಿತಿ ಹೊರ ಬಿದ್ದಿದೆ. ಸದ್ಯ ಮಕ್ಕಳನ್ನು ರಕ್ಷಿಸಲಾಗಿದೆ. ಘಟನೆಗೂ ಮುನ್ನ ಬಿಡುಗಡೆಯಾದ ವೀಡಿಯೊ ಸಂದೇಶದಲ್ಲಿ ರೋಹಿತ್ ಆರ್ಯ ಈ ವಿಷಯವನ್ನು ಹೇಳಿದ್ದಾನೆ. ಈ ವಿಡಿಯೋ ಪೊಲೀಸರನ್ನು ತಲುಪಿದ ತಕ್ಷಣವೇ ಇಡೀ ಕಟ್ಟಡವನ್ನು ಸುತ್ತುವರಿದು ಕಾರ್ಯಾಚರಣೆ ಪ್ರಾರಂಭಿಸಿದರು.

ಬಹುಮಹಡಿ ಕಟ್ಟದಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿರಿಸಿಕೊಂಡ ವ್ಯಕ್ತಿ

-

Vishakha Bhat Vishakha Bhat Oct 30, 2025 5:10 PM

ಮುಂಬೈ: ಪೊವೈ ಅಪಾರ್ಟ್‌ಮೆಂಟ್‌ ಒಂದರಲ್ಲಿ ವ್ಯಕ್ತಿಯೊಬ್ಬ ಕನಿಷ್ಠ 17 ಮಕ್ಕಳನ್ನು ಒತ್ತೆಯಾಳಾಗಿರಿಸಿಕೊಂಡಿದ್ದ ಎಂಬ ಆಘಾತಕಾರಿ ಮಾಹಿತಿ ಹೊರ ಬಿದ್ದಿದೆ. ಸದ್ಯ ಮಕ್ಕಳನ್ನು ರಕ್ಷಿಸಲಾಗಿದೆ. ಘಟನೆಗೂ ಮುನ್ನ ಬಿಡುಗಡೆಯಾದ ವೀಡಿಯೊ ಸಂದೇಶದಲ್ಲಿ ರೋಹಿತ್ ಆರ್ಯ ಎಂದು ಗುರುತಿಸಿಕೊಂಡಿದ್ದ ವ್ಯಕ್ತಿ, ಅಪರಿಚಿತ ಜನರೊಂದಿಗೆ ಸಂಭಾಷಣೆ ನಡೆಸಲು ಆತ್ಮಹತ್ಯೆ ಮಾಡಿಕೊಳ್ಳುವ ಬದಲು ಒತ್ತೆಯಾಳುಗಳನ್ನು ತೆಗೆದುಕೊಳ್ಳುವುದನ್ನು ಆರಿಸಿಕೊಂಡಿದ್ದೇನೆ ಎಂದು ಹೇಳಿದ್ದಾನೆ. "ನಾನು ರೋಹಿತ್ ಆರ್ಯ. ಆತ್ಮಹತ್ಯೆಯಿಂದ ಸಾಯುವ ಬದಲು, ನಾನು ಒಂದು ಯೋಜನೆಯನ್ನು ರೂಪಿಸಿದ್ದೇನೆ ಮತ್ತು ಇಲ್ಲಿ ಕೆಲವು ಮಕ್ಕಳನ್ನು ಒತ್ತೆಯಾಳುಗಳಾಗಿ ಇರಿಸಿದ್ದೇನೆ" ಎಂದು ಹೇಳಿದ್ದ.

ಅಷ್ಟೇ ಅಲ್ಲದೇ, "ನಿಮ್ಮಿಂದ ಬರುವ ಸಣ್ಣದೊಂದು ತಪ್ಪು ನಡೆಯೂ ನನ್ನನ್ನು ಪ್ರಚೋದಿಸುತ್ತದೆ" ಎಂದು ಆತ ಎಚ್ಚರಿಸಿದ್ದ. ಸ್ಥಳಕ್ಕೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದ. ನಗೆ ಸರಳ ಸಂಭಾಷಣೆಗಳು ಬೇಕು, ಅದಕ್ಕಾಗಿಯೇ ನಾನು ಈ ಮಕ್ಕಳನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದೇನೆ. ನಾನು ಅವರನ್ನು ಒಂದು ಯೋಜನೆಯ ಭಾಗವಾಗಿ ಒತ್ತೆಯಾಳಾಗಿ ಇರಿಸಿದ್ದೇನೆ. ನಾನು ಬದುಕಿದ್ದರೆ, ನಾನು ಅದನ್ನು ಮಾಡುತ್ತೇನೆ; ನಾನು ಸತ್ತರೆ, ಬೇರೆ ಯಾರಾದರೂ ಮಾಡುತ್ತಾರೆ, ಆದರೆ ಅದು ಖಂಡಿತವಾಗಿಯೂ ಸಂಭವಿಸುತ್ತದೆ ಏಕೆಂದರೆ ನಿಮ್ಮ ಸಣ್ಣದೊಂದು ತಪ್ಪು ನಡೆಯು ನನ್ನನ್ನು ಈ ಇಡೀ ಸ್ಥಳಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಾಯುವಂತೆ ಮಾಡುತ್ತದೆ" ಎಂದು ಆರ್ಯ ವೀಡಿಯೊದಲ್ಲಿ ಹೇಳಿದ್ದ.



ಈ ವಿಡಿಯೋ ಪೊಲೀಸರನ್ನು ತಲುಪಿದ ತಕ್ಷಣವೇ ಇಡೀ ಕಟ್ಟಡವನ್ನು ಸುತ್ತುವರಿದು ಕಾರ್ಯಾಚರಣೆ ಪ್ರಾರಂಭಿಸಲಾಯಿತು. ಕೂಡಲೇ ಪೊಲೀಸರು 17 ಮಕ್ಕಳನ್ನು ರಕ್ಷಿಸಿದ್ದಾರೆ. ಸದ್ಯ ಆತನನ್ನು ಬಂಧಿಸಲಾಗಿದೆ. ಆತ ಯಾವ ಉದ್ದೇಶದಿಂದ ಈ ಕೃತ್ಯವೆಸಗಿದ್ದಾನೆ ಎಂದು ತನಿಖೆ ನಡೆಯುತ್ತಿದೆ.

ಪ್ರತ್ಯೇಕ ಪ್ರಕರಣದಲ್ಲಿ ಮಧ್ಯಪ್ರದೇಶದಲ್ಲಿ 27 ವರ್ಷದ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಯ್‌ಗಢ ಜಿಲ್ಲೆಯ 27 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಅತ್ತೆಯ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ವಿಡಿಯೋ ರೆಕಾರ್ಡ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರವಿ ಕಶ್ಯಪ್ ಭಾನುವಾರ ಬಿಯೋರಾ ಪಟ್ಟಣದ ತಮ್ಮ ಮನೆಯಲ್ಲಿ ಫ್ಯಾನ್‌ ಸೀಲಿಂಗ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಕಶ್ಯಪ್ ತನ್ನ ಮೊಬೈಲ್ ಫೋನ್‌ನಲ್ಲಿ ಚಿತ್ರೀಕರಿಸಿದ ವೀಡಿಯೊದಲ್ಲಿ ಪತ್ನಿ ಮತ್ತು ಅತ್ತೆ ಮೇಲೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿರುವುದಾಗಿ ಬಿಯೋರಾ ನಗರ ಪೊಲೀಸ್ ಠಾಣೆಯ ಉಸ್ತುವಾರಿ ವೀರೇಂದ್ರ ಧಕಡ್ ಹೇಳಿದ್ದಾರೆ. ತನಿಖೆಯ ನಂತರ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.

ಈ ಸುದ್ದಿಯನ್ನೂ ಓದಿ: Self Harming: ಯುವ ವೈದ್ಯೆ ಆತ್ಮಹತ್ಯೆ, ಅಂಗೈಯ ಡೆತ್‌ನೋಟ್‌ನಲ್ಲಿತ್ತು ಆತ್ಮಹತ್ಯೆಯ ರಹಸ್ಯ

ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದ್ದು, ತನ್ನ ಹೆಂಡತಿ ಪ್ರತಿ ಹದಿನೈದು ದಿನಗಳಿಗೊಮ್ಮೆ ತವರು ಮನೆಗೆ ಹೋಗುತ್ತಾಳೆ. ಹಿಂದಿರುಗಿದ ನಂತರ ನನ್ನ ಕುಟುಂಬದೊಂದಿಗೆ ಜಗಳವಾಡುತ್ತಾಳೆ. ಅತ್ತೆ ಕೂಡಾ ತನಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ.