ಹೈದರಾಬಾದ್: ಕುಡಿದ ಮತ್ತಿನಲ್ಲಿ ವೇಗವಾಗಿ ಬಂದ ಸ್ಕೂಟರ್ ಸವಾರನೊಬ್ಬ ಪೊಲೀಸ್ ಪೇದೆಗೆ ಡಿಕ್ಕಿ ಹೊಡೆದು ಪರಾರಿಯಾಗಿರುವ ಆಘಾತಕಾರಿ ಘಟನೆ ತೆಲಂಗಾಣದ ಯದಾದ್ರಿ ಭುವನಗಿರಿ ಜಿಲ್ಲೆಯ ಪಂತಂಗಿ ಟೋಲ್ ಪ್ಲಾಜಾದಲ್ಲಿ ನಡೆದಿದೆ. ಟೋಲ್ ಗೇಟ್‍ನಲ್ಲಿ ಪೊಲೀಸರು (Police), ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ. ಸ್ಕೂಟರ್ ಡಿಕ್ಕಿ ಹೊಡೆದಿದ್ದರಿಂದ ಸಂಚಾರಿ ಪೊಲೀಸ್ ಪೇದೆ (Traffic Constable) ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೇದೆಯನ್ನು ಆಸೀಫ್ ಎಂದು ಗುರುತಿಸಲಾಗಿದೆ. ಈ ಘಟನೆಯ ದೃಶ್ಯ ಸಿಸಿಕ್ಯಾಮರಾದಲ್ಲಿ(Viral Video) ಸೆರೆಯಾಗಿದೆ.
ಪೊಲೀಸ್ ಪೇದೆಗೆ ಡಿಕ್ಕಿ ಹೊಡೆದು ಪರಾರಿಯಾಗಿರುವವನ್ನು ವಿಶಾಲ್ ಎಂದು ಗುರುತಿಸಲಾಗಿದೆ. ಮದ್ಯದ ಮತ್ತಿನಲ್ಲಿದ್ದ ಆರೋಪಿಯು ವೇಗವಾಗಿ ದ್ವಿಚಕ್ರ ವಾಹನ ಚಲಾಯಿಸಿದಲ್ಲದೆ, ಕರ್ತವ್ಯ ನಿರತ ಪೊಲೀಸ್ ಪೇದೆಗೆ ಡಿಕ್ಕಿ ಹೊಡಿದಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ಪೇದೆ ರಸ್ತೆ ಮಧ್ಯದಲ್ಲೇ ಬಿದ್ದಿದ್ದಾರೆ. ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಹೈದರಾಬಾದ್‌ನ ಯಶೋದಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ (Viral Video) ಆಗುತ್ತಿದೆ.
ವಿಡಿಯೊ ವೀಕ್ಷಿಸಿ:
ಈ ವಿಡಿಯೊವನ್ನು ಎಕ್ಸ್‌ನಲ್ಲಿ ಹಂಚಿಕೊಳ್ಳಲಾಗಿದೆ. “ಟೋಲ್‌ಗೇಟ್‌ನಲ್ಲಿ ವಾಹನಗಳನ್ನು ಪರಿಶೀಲಿಸುತ್ತಿದ್ದ ಟ್ರಾಫಿಕ್ ಕಾನ್‌ಸ್ಟೇಬಲ್‌ಗೆ ವಾಹನ ಚಾಲಕನೊಬ್ಬ ಸ್ಕೂಟರ್‌ನಿಂದ ಡಿಕ್ಕಿ ಹೊಡೆದಿದ್ದಾನೆ. ಯಾದದ್ರಿ ಭುವನಗಿರಿ ಜಿಲ್ಲೆಯ ಚೌಟುಪ್ಪಲ್ ಮಂಡಲದ ಪಂತಂಗಿ ಟೋಲ್‌ಗೇಟ್‌ನಲ್ಲಿ ಅಪಘಾತ ಸಂಭವಿಸಿದೆ. ಕರ್ತವ್ಯದಲ್ಲಿದ್ದ ಟ್ರಾಫಿಕ್ ಕಾನ್‌ಸ್ಟೇಬಲ್ ಆಸಿಫ್ ಗಂಭೀರ ಗಾಯಗೊಂಡಿದ್ದು, ಅವರನ್ನು ಯಶೋದಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಡಿಕ್ಕಿ ಹೊಡೆದ ವ್ಯಕ್ತಿಯನ್ನು ವಿಶಾಲ್ ಎಂದು ಗುರುತಿಸಲಾಗಿದೆ” ಎಂದು ಪೋಸ್ಟ್‌ನಲ್ಲಿ ತಿಳಿಸಲಾಗಿದೆ. ಇನ್ನು ಘಟನೆ ನಂತರ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಕರ್ತವ್ಯ ನಿರತ ಸಂಚಾರ ಪೊಲೀಸ್ ಮತ್ತು ಬೈಕ್ ಸವಾರನ ನಡುವೆ ತೀವ್ರ ವಾಗ್ವಾದ
ಕಲ್ಯಾಣ್-ಶಹಾದ್ ರಸ್ತೆಯಲ್ಲಿ ಭಾರಿ ಸಂಚಾರ ದಟ್ಟಣೆಯ ನಡುವೆ ಕರ್ತವ್ಯದಲ್ಲಿದ್ದ ಸಂಚಾರ ಪೊಲೀಸ್ ಸಚಿನ್ ಒಂಬಾಸೆ ಮತ್ತು ಮಯೂರ್ ಕೆನೆ ಎಂಬ ಬೈಕ್ ಸವಾರನ ನಡುವೆ ತೀವ್ರ ವಾಗ್ವಾದ ನಡೆದಿದೆ. ಟ್ರಾಫಿಕ್ ಜಾಮ್ ನಡುವೆ ಬೈಕ್ ಸವಾರ ತಪ್ಪು ಬದಿಯಲ್ಲಿ ಚಾಲನೆ ಮಾಡುತ್ತಿದ್ದ ಎನ್ನಲಾಗಿದೆ. ಹೀಗಾಗಿ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ, ಸವಾರ ಕೋಪದಿಂದ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ.
ಈ ಸುದ್ದಿಯನ್ನೂ ಓದಿ: ಚೆಪಾಕ್ ಕ್ರೀಡಾಂಗಣ ನವೀಕರಣದ ವಿಡಿಯೊ ಹಂಚಿಕೊಂಡ ಟಿಎನ್‌ಸಿಎ