ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಐಷಾರಾಮಿ ಹೋಟೆಲ್‌ನಲ್ಲಿ ಪಾರ್ಟಿ ಆಯೋಜಿಸಿದ ಕಾಕ್ರೋಚ್ ಜನತಾ ಪಾರ್ಟಿ!
Viral Video: NEET ಪರೀಕ್ಷೆಯ ಪತ್ರಿಕೆ ಸೋರಿಕೆ ವಿವಾದ ಬೆನ್ನಲ್ಲೇ ದೇಶದೆಲ್ಲೆಡೆ ಪ್ರತಿಭಟನೆ ಕಿಚ್ಚು ಹರಡಿತ್ತು. ಕಳೆದ ಒಂದು ತಿಂಗಳಿನಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆದಿದ್ದು ಪ್ರತಿಭಟನಾಕಾರರ ಮುಖ್ಯ ಬೇಡಿಕೆಯೇ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯಾಗಿತ್ತು. ಇದೀಗ ಪ್ರಮುಖ ಬೇಡಿಕೆಯಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಯನ್ನು ಸಲ್ಲಿಕೆ ಮಾಡಿದ್ದಾರೆ. ಇದರ ಬೆನ್ನಲ್ಲೇ, ಹೋಟೆಲ್ ಒಂದರಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ನಾಯಕರು ವಿಜಯೋತ್ಸವ ಆಚರಿಸುತ್ತಿರುವ ವೀಡಿಯೊಗಳು ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿವೆ..
ದುಬಾರಿ ಹೋಟೆಲ್ ನಲ್ಲಿ ಪಾರ್ಟಿ ಆಯೋಜಿಸಿದ ಕಾಕ್ರೋಚ್ ಜನತಾ ಪಾರ್ಟಿ -
ದೆಹಲಿ,ಜು.27: ನೀಟ್ ಅಕ್ರಮ ವಿರೋಧಿಸಿ ಪ್ರತಿಭಟನೆ ತೀವ್ರಗೊಂಡಂತೆ ಶಿಕ್ಷಣ ಸಚಿವರಾಗಿದ್ದ ಧರ್ಮೇಂದ್ರ ಪ್ರಧಾನ್ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು. ಈ ನಡುವೆ ಕಾಕ್ರೋಚ್ ಜನತಾ ಪಾರ್ಟಿಯ ನಾಯಕರು ದುಬಾರಿ ಹೋಟೆಲ್‌ನಲ್ಲಿ ಪಾರ್ಟಿ ಆಯೋಜಿಸಿರುವ ವೀಡಿಯೊ (Viral News) ಹೊಸ ರಾಜಕೀಯ ವಿವಾದವನ್ನು ಹುಟ್ಟುಹಾಕಿವೆ. ದೇಶಾದ್ಯಂತ ವಿದ್ಯಾರ್ಥಿಗಳು ಪರೀಕ್ಷಾ ವಿವಾದವನ್ನು ಎದುರಿಸುತ್ತಿರುವ ಸಮಯದಲ್ಲಿ ಇಂತಹ ಆಚರಣೆಗಳು ಸೂಕ್ತವೇ ಎಂದು ಅನೇಕ ಬಳಕೆದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
NEET ಪರೀಕ್ಷೆಯ ಪತ್ರಿಕೆ ಸೋರಿಕೆ ವಿವಾದ ಬೆನ್ನಲ್ಲೇ ದೇಶದೆಲ್ಲೆಡೆ ಪ್ರತಿಭಟನೆ ಕಿಚ್ಚು ಹರಡಿತ್ತು. ಕಳೆದ ಒಂದು ತಿಂಗಳಿನಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆದಿದ್ದು ಪ್ರತಿಭಟನಾಕಾರರ ಮುಖ್ಯ ಬೇಡಿಕೆಯೇ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯಾಗಿತ್ತು. ಇದೀಗ ಪ್ರಮುಖ ಬೇಡಿಕೆಯಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಕೆ ಮಾಡಿದ್ದಾರೆ.
ವಿಡಿಯೋ ನೋಡಿ:
Resignation की ख़ुशी 🥹 pic.twitter.com/QT4Y5j4cy6
— Cockroach Janta Party (@CJP_for_India) July 26, 2026
ಇದರ ಬೆನ್ನಲ್ಲೇ, ಹೋಟೆಲ್ ಒಂದರಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ನಾಯಕರು ವಿಜಯೋತ್ಸವ ಆಚರಿಸುತ್ತಿರುವ ವೀಡಿಯೊಗಳು ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿವೆ. ಸಿಜೆಪಿಯ ಅಧಿಕೃತ ಎಕ್ಸ್ ಖಾತೆಯಲ್ಲಿ "ರಾಜೀನಾಮೆ ಕಿ ಖುಷಿ " ಎಂಬ ಶೀರ್ಷಿಕೆ ಯೊಂದಿಗೆ ಹಂಚಿಕೊಳ್ಳಲಾದ ಕ್ಲಿಪ್ ನಲ್ಲಿ ಪಕ್ಷದ ವಕ್ತಾರರಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಸೇರಿದಂತೆ ಇತರ ನಾಯಕರು ಬಾಲಿವುಡ್ ಹಾಡುಗಳಿಗೆ ನೃತ್ಯ ಮಾಡುತ್ತಿರುವುದು ಕಂಡು ಬಂದಿದೆ. ನೀಟ್ ಪೇಪರ್ ಲೀಕ್ ಹಗರಣದ ವಿರುದ್ಧ ನಡೆಸಿದ ಪ್ರತಿಭಟನೆಗೆ ಸಂದ ಜಯ ಎಂದು ಬರೆದಿದ್ದಾರೆ.
ದೇಶಾದ್ಯಂತ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿರುವ ಸಮಯದಲ್ಲಿ ಆಚರಣೆಗಳು ಸೂಕ್ತವೇ ಎಂದು ಅನೇಕ ಬಳಕೆದಾರರು ಪ್ರಶ್ನಿಸಿದ್ದಾರೆ. ವೈರಲ್ ಕ್ಲಿಪ್ ಬಗ್ಗೆ ಹಿರಿಯ ಸುಪ್ರೀಂ ಕೋರ್ಟ್ ವಕೀಲ ಮಹೇಶ್ ಜೇಠ್ಮಲಾನಿ ಪ್ರಶ್ನಿಸಿದ್ದು "ನಾನು ಮೊದಲು ಫೈವ್ ಸ್ಟಾರ್ ಹೋಟೆಲ್‌ಗೆ ಹೋಗಿದ್ದೇ ಕ್ಯಾಂಪಸ್ ಸೆಲೆಕ್ಷನ್ ಆದಾಗ ಕಂಪನಿಯವರು ಕರೆದುಕೊಂಡು ಹೋದಾಗ ಆದರೆ, ವಿದ್ಯಾರ್ಥಿಗಳಿಗಾಗಿ ಹೋರಾಡುತ್ತಿದ್ದೇವೆ ಎನ್ನುವ ಇವರಿಗೆ ಐಷಾರಾಮಿ ಹೋಟೆಲ್‌ನಲ್ಲಿ ಪಾರ್ಟಿ ಮಾಡಲು ಹಣ ಎಲ್ಲಿಂದ? ಇಡೀ ಪ್ರತಿಭಟನೆಯ ಹಿಂದಿರುವವರು ಯಾರು ಎಂದು ಕಿಡಿಕಾರಿದ್ದಾರೆ.
ದೆಹಲಿಯು ಕೆಲವು ದಿನಗಳ ಕಾಲ ಹಿಂಸಾಚಾರವನ್ನು ಕಂಡ ನಂತರ, ಈ ಯುವ ಕಾರ್ಯಕರ್ತರು ಹೋಟೆಲ್‌ನಲ್ಲಿ ಪಾರ್ಟಿ ಮಾಡುತ್ತಾ ಡ್ಯಾನ್ಸ್ ಮಾಡುತ್ತಿದ್ದಾರೆ. ಈ ಇಡೀ ಪ್ರತಿಭಟನೆ ಅವಧಿಯಲ್ಲಿ ಇವರ ಆಹಾರ, ವಸತಿ ಮತ್ತು ಇತರೆ ವ್ಯವಸ್ಥೆಗಳಿಗೆ ಹಣ ಕೊಟ್ಟವರು ಯಾರು? ದೆಹಲಿಯನ್ನು ಹೊತ್ತಿ ಉರಿಯುವಂತೆ ಮಾಡಿದ ಇವರ ಹಿಂದೆ ಯಾರಿರಬಹುದು? ಎಂದು ಪ್ರಶ್ನಿಸಿದ್ದಾರೆ. ಈ ವಿಡಿಯೊ ವೈರಲ್ ಆಗುತ್ತಿದ್ದಂತೆ ಇಲ್ಲಿಯವರೆಗೆ ಈ ಪ್ರಶ್ನೆಗಳಿಗೆ CJP ಸಾರ್ವಜನಿಕವಾಗಿ ಪ್ರತಿಕ್ರಿಯೆ ನೀಡಿಲ್ಲ.