ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Fact Check: ಕಾಗದದ ನೋಟು ಬದಲು ಪ್ಲಾಸ್ಟಿಕ್ ನೋಟು ಚಲಾವಣೆಗೆ ತಂದ ಆರ್‌ಬಿಐ; ವೈರಲ್‌ ಸುದ್ದಿಯ ಅಸಲಿಯತ್ತೇನು?

ಭಾರತೀಯ ರಿಸರ್ವ್ ಬ್ಯಾಂಕ್ ಕಾಗದದ ನೋಟುಗಳನ್ನು ಪ್ಲಾಸ್ಟಿಕ್ ನೋಟುಗಳೊಂದಿಗೆ ಬದಲಾಯಿಸುತ್ತಿದೆ ಎನ್ನುವ ವದಂತಿಗಳು ಹರಿದಾಡುತ್ತಿದೆ. ಈ ಕುರಿತು ಪತ್ರಿಕಾ ಮಾಹಿತಿ ಬ್ಯೂರೋದ ಸತ್ಯ ಪರಿಶೀಲನಾ ಘಟಕವು ತನಿಖೆಯನ್ನು ನಡೆಸಿದ್ದು, ಇದು ಸುಳ್ಳು ಸುದ್ದಿ. ಅಂತಹ ಯಾವುದೇ ಯೋಜನೆಗಳು ಸರ್ಕಾರದ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದೆ.

ಸಂಗ್ರಹ ಚಿತ್ರ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (reserve bank of india) ಹೆಸರಿನಲ್ಲಿ ಕಳೆದ ಕೆಲವು ದಿನಗಳಿಂದ ಸುಳ್ಳು ಸುದ್ದಿಯೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (Viral news) ಆಗಿತ್ತು. ಇದರಲ್ಲಿ ಕಾಗದದ ನೋಟುಗಳ ಬದಲಾಗಿ ಪ್ಲಾಸ್ಟಿಕ್ ನೋಟುಗಳು (plastic currency) ಬರಲಿವೆ. ಈ ನಿಟ್ಟಿನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಕಾರ್ಯನಿರತವಾಗಿದೆ ಎನ್ನುವ ವದಂತಿಗಳು ಹರಿದಾಡುತ್ತಿದೆ. ಆದರೆ ಇದೊಂದು ಸುಳ್ಳು ಸುದ್ದಿ. ಅಂತಹ ಯಾವುದೇ ಯೋಜನೆಗಳು ಸರ್ಕಾರದ ಮುಂದೆ ಇಲ್ಲ ಎಂದು ಪತ್ರಿಕಾ ಮಾಹಿತಿ ಬ್ಯೂರೋದ ಸತ್ಯ ಪರಿಶೀಲನಾ ಘಟಕವು (fact check) ಸ್ಪಷ್ಟಪಡಿಸಿದೆ.

ಭಾರತೀಯ ರಿಸರ್ವ್ ಬ್ಯಾಂಕ್ ಕಾಗದದ ನೋಟುಗಳನ್ನು ಪ್ಲಾಸ್ಟಿಕ್ ಕರೆನ್ಸಿಯೊಂದಿಗೆ ಬದಲಾಯಿಸುತ್ತಿದೆಯೇ? ಎನ್ನುವ ಕುರಿತು ಪತ್ರಿಕಾ ಮಾಹಿತಿ ಬ್ಯೂರೋದ ಸತ್ಯ ಪರಿಶೀಲನಾ ಘಟಕವು ತನಿಖೆಯನ್ನು ನಡೆಸಿದ್ದು, ಇದೊಂದು ಸುಳ್ಳು ಸುದ್ದಿ ಎಂಬುದಾಗಿ ದೃಢಪಡಿಸಿದೆ. 2026ರ ಜೂನ್ 30ರೊಳಗೆ ಭಾರತೀಯ ರಿಸರ್ವ್ ಬ್ಯಾಂಕ್ ಕಾಗದದ ಕರೆನ್ಸಿ ನೋಟುಗಳನ್ನು ಹಿಂತೆಗೆದುಕೊಂಡು ಪ್ಲಾಸ್ಟಿಕ್ ಕರೆನ್ಸಿ ನೋಟುಗಳೊಂದಿಗೆ ಬಿಡುಗಡೆ ಮಾಡಲಿದೆ ಎನ್ನುವ ಸಾಮಾಜಿಕ ಮಾಧ್ಯಮಗಳ ಹೇಳಿಕೆಗಳನ್ನು ಪಿಐಬಿ ಫ್ಯಾಕ್ಟ್ ಚೆಕ್ ವಿಭಾಗವು ತಳ್ಳಿ ಹಾಕಿದೆ.

ಸೆಲ್ಫಿ ತೆಗೆಯಲು ತೆಗೆಯಲು ಹೋಗಿ ನದಿಯಲ್ಲಿ ಕೊಚ್ಚಿ ಹೋದ ಪ್ರವಾಸಿಗರು: ಕೂದಲೆಳೆ ಅಂತರದಲ್ಲಿ ಪಾರು

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಪಿಐಬಿ ಫ್ಯಾಕ್ಟ್ ಚೆಕ್ ಸತ್ಯ ಪರಿಶೀಲನಾ ಘಟಕವು, ಭಾರತೀಯ ರಿಸರ್ವ್ ಬ್ಯಾಂಕ್ 2026ರ ಜೂನ್ 30ರೊಳಗೆ ಕಾಗದದ ಕರೆನ್ಸಿ ನೋಟುಗಳನ್ನು ಹಿಂತೆಗೆದುಕೊಳ್ಳುವ ಅಥವಾ ಪ್ಲಾಸ್ಟಿಕ್ ಕರೆನ್ಸಿ ನೋಟುಗಳೊಂದಿಗೆ ಬದಲಾಯಿಸುವ ಯಾವುದೇ ಯೋಜನೆಗಳನ್ನು ಹಾಕಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದೆ.



ಈ ಕುರಿತು ತನಿಖೆ ನಡೆಸಿರುವ ಪಿಐಬಿ ಫ್ಯಾಕ್ಟ್ ಚೆಕ್ ಸತ್ಯ ಪರಿಶೀಲನಾ ಘಟಕಕ್ಕೆ ಸಿಕ್ಕಿರುವ ವಿಡಿಯೋದಲ್ಲಿ 100, 20, 50 ಮತ್ತು 10ರ ಮುಖಬೆಲೆಯ ಕರೆನ್ಸಿ ನೋಟುಗಳನ್ನು ಬದಲಾಯಿಸಲಾಗುತ್ತದೆ ಎನ್ನುವ ಪ್ರಧಾನಿ ನರೇಂದ್ರ ಮೋದಿಯವರ ಭಾಷಣದೊಂದಿಗೆ ಹಂಚಿಕೊಳ್ಳಲಾಗಿದೆ. ಆದರೆ ಇದೊಂದು ನಕಲಿ ವಿಡಿಯೋ ಆಗಿದೆ ಎಂದು ಪಿಐಬಿ ತಿಳಿಸಿದೆ.

ಸರ್ಕಾರಕ್ಕೆ ಸಂಬಂಧಿಸಿದ ಅಧಿಕೃತ ಮಾಹಿತಿಗಾಗಿ ಸಾರ್ವಜನಿಕರು ಅಧಿಕೃತ ಆರ್‌ಬಿಐ ವೆಬ್‌ಸೈಟ್ ಅನ್ನು ಮಾತ್ರ ನೋಡುವಂತೆ ತಿಳಿಸಿರುವ ಪತ್ರಿಕಾ ಮಾಹಿತಿ ಬ್ಯುರೊ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುವ ನಕಲಿ ಸುದ್ದಿಗಳನ್ನು ನಂಬದಂತೆ ತಿಳಿಸಿದೆ. ಯಾವುದೇ ಮಾಹಿತಿಯನ್ನು ಹಂಚಿಕೊಳ್ಳುವ ಮೊದಲು ಅಧಿಕೃತ ಮಾಹಿತಿಯನ್ನು ಪರಿಶೀಲಿಸಿ ದೃಢಪಡಿಸಿಕೊಳ್ಳುವಂತೆ ತಿಳಿಸಿದೆ.

"ಓಲ್ಡ್‌ ಈಸ್‌ ಗೋಲ್ಡ್‌" ತಾತನಿಂದ ಮೊಮ್ಮಗನಿಗೆ ಸಿಕ್ತು 35 ವರ್ಷ ಹಳೆಯ ಟೈಟಾನ್ ವಾಚ್‌

ಭಾರತ ಸರ್ಕಾರಕ್ಕೆ ಸಂಬಂಧಿಸಿದ ಅನುಮಾನಾಸ್ಪದ ವಿಷಯಗಳಿದ್ದರೆ ಪಿಐಬಿ ಫ್ಯಾಕ್ಟ್ ಚೆಕ್ ಗೆ ವರದಿ ಮಾಡಲು ಸಾರ್ವಜನಿಕರಿಗೆ ವಿನಂತಿ ಮಾಡಿರುವ ದೇಶದಲ್ಲಿ ಪ್ಲಾಸ್ಟಿಕ್ ಆಧಾರಿತ ಕರೆನ್ಸಿ ನೋಟುಗಳನ್ನು ಪರಿಚಯಿಸುವ ಸಾಧ್ಯತೆಯನ್ನು ಆರ್‌ಬಿಐ ಪರಿಗಣಿಸುತ್ತಿದೆ ಎನ್ನುವ ಹಲವಾರು ವರದಿಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಈ ಕುರಿತು ತನಿಖೆ ನಡೆಸಿರುವುದಾಗಿ ತಿಳಿಸಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಎಕ್ಸ್ ಬಳಕೆದಾರರೊಬ್ಬರು, ಆರ್‌ಬಿಐ ಬಾಳಿಕೆ ಬರುವ ಪಾಲಿಮರ್ ನೋಟುಗಳನ್ನು ಪರಿಚಯಿಸಬೇಕು. ಇವು ಹೆಚ್ಚು ಕಾಲ ಬಾಳಿಕೆ ಬರುತ್ತವೆ, ನಕಲಿ ಮಾಡಲು ಕಷ್ಟವಾಗುತ್ತವೆ ಮತ್ತು ಸಾಂಪ್ರದಾಯಿಕ ಕಾಗದದ ನೋಟುಗಳಿಗಿಂತ ಉತ್ತಮವಾಗಿರುತ್ತವೆ ಎಂದು ತಿಳಿಸಿದ್ದಾರೆ.

ವಿದ್ಯಾ ಇರ್ವತ್ತೂರು

View all posts by this author