Viral Video: ಆಸ್ಪತ್ರೆಯಲ್ಲಿ ಬೆಂಕಿ ಅವಘಡ; ರೋಗಿಗಳು ಪಾರಾಗಿದ್ದೇ ರೋಚಕ
ಉತ್ತರ ಪ್ರದೇಶದ ಲಖನೌದ ಲೋಕ ಬಂಧು ಆಸ್ಪತ್ರೆಯ ಎರಡನೇ ಮಹಡಿಯಲ್ಲಿ ಇತ್ತೀಚೆಗೆ ತಡರಾತ್ರಿ ಭಾರಿ ಬೆಂಕಿ ಅವಘಡ ಸಂಭವಿಸಿತ್ತು. ಅಗ್ನಿಶಾಮಕ ದಳದ ತಂಡಗಳು ತಕ್ಷಣ ಸ್ಥಳಕ್ಕೆ ಬಂದು ರೋಗಿಗಳ ರಕ್ಷಣೆಗೆ ಮುಂದಾಗಿದ್ದರಿಂದ ಯಾವುದೇ ದುರಂತ ಸಂಭವಿಸಿಲ್ಲ. ಈ ಘಟನೆಯ ದೃಶ್ಯಾವಳಿಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.


ಲಖನೌ: ಲಖನೌದ ಲೋಕ ಬಂಧು ಆಸ್ಪತ್ರೆಯ ಎರಡನೇ ಮಹಡಿಯಲ್ಲಿಇತ್ತೀಚೆಗೆ ತಡರಾತ್ರಿ ಭಾರಿ ಬೆಂಕಿ ಅವಘಡ ಸಂಭವಿಸಿತು. ಈ ಘಟನೆಯಿಂದ ರೋಗಿಗಳು ಮತ್ತು ಆಸ್ಪತ್ರೆಯ ಸಿಬ್ಬಂದಿ ಬೆಚ್ಚಿ ಬಿದ್ದಾರೆ. ರಾತ್ರಿ 10 ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಅಗ್ನಿಶಾಮಕ ದಳದ ತಂಡಗಳು ತಕ್ಷಣ ಸ್ಥಳಕ್ಕೆ ಬಂದು ರೋಗಿಗಳ ರಕ್ಷಣೆಗೆ ಮುಂದಾಗಿದ್ದರಿಂದ ಯಾವುದೇ ದುರಂತ ಸಂಭವಿಸಿಲ್ಲ. ಈ ಘಟನೆಯ ದೃಶ್ಯಾವಳಿಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.
ವರದಿಗಳ ಪ್ರಕಾರ, ಬೆಂಕಿ ಅವಘಡದ ಸಮಯದಲ್ಲಿ 35ರಿಂದ 40 ರೋಗಿಗಳನ್ನು ವಾರ್ಡ್‍ನಲ್ಲಿದ್ದರು. ಇದರಲ್ಲಿ ಎನ್ಐಸಿಯು (ನವಜಾತ ತೀವ್ರ ನಿಗಾ ಘಟಕ)ಯಲ್ಲಿರುವ ಮಕ್ಕಳ ಕೂಡ ಸೇರಿದ್ದರು. ಬೆಂಕಿ ಕಾಣಿಸಿಕೊಂಡ ಕೂಡಲೇ ಬೆದರಿದ ರೋಗಿಗಳು ಮತ್ತು ಸಿಬ್ಬಂದಿ ತಮ್ಮನ್ನು ರಕ್ಷಿಸಿಕೊಳ್ಳಲು ಆಸ್ಪತ್ರೆಯಲ್ಲಿ ದಿಕ್ಕೆಟ್ಟು ಓಡಲು ಶುರು ಮಾಡಿದ್ದಾರೆ.
ವಿಡಿಯೊ ಇಲ್ಲಿದೆ ನೋಡಿ...
BREAKING: Massive fire on the second floor of Lok Bandhu Hospital in Lucknow.
— Vani Mehrotra (@vani_mehrotra) April 14, 2025
Several patients evacuated.
Fire tenders at the spot.#Lucknow pic.twitter.com/ZNNivKOX18
ಶಾರ್ಟ್ ಸರ್ಕ್ಯೂಟ್‍ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎನ್ನಲಾಗಿದೆ. ಅಗ್ನಿಶಾಮಕ ದಳದವರು ತ್ವರಿತವಾಗಿ ಆಸ್ಪತ್ರೆಗೆ ತಲುಪಿ ಎರಡನೇ ಮಹಡಿಯಲ್ಲಿ ಸಿಲುಕಿರುವ ಎಲ್ಲ ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಿ ನಂತರ ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ಬಗ್ಗೆ ವರದಿಯಾಗಿಲ್ಲ. ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ. ಆದರೆ ಬೆಂಕಿಯ ಕಾರಣ ಮತ್ತು ಹೆಚ್ಚಿನ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಲಾಗುತ್ತಿದೆ ಎಂಬುದಾಗಿ ತಿಳಿದುಬಂದಿದೆ.
ಈ ಸುದ್ದಿಯನ್ನೂ ಓದಿ:Viral Video: ಸ್ಕ್ಯಾಮರ್‌ಗೆ ಚಳ್ಳೆಹಣ್ಣು ತಿನ್ನಿಸಿದ ಯುವತಿ; ಫುಲ್ ಫನ್ನಿ ಆಗಿದೆ ಈ ವಿಡಿಯೊ
ಈ ಹಿಂದೆ ಗುಜರಾತ್‍ನ ಅಹಮದಾಬಾದ್‍ನ ಖೋಖ್ರಾ ಪ್ರದೇಶದಲ್ಲಿರುವ ಪರಿಷ್ಕರ್ -1 ಅಪಾರ್ಟ್‌ಮೆಂಟ್‌ನ ನಾಲ್ಕನೇ ಮಹಡಿಯಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ತಕ್ಷಣ ಅಗ್ನಿಶಾಮಕ ದಳಗಳು ಆಗಮಿಸಿ ಕಟ್ಟಡದ ಒಳಗೆ ಬೆಂಕಿಯಲ್ಲಿ ಸಿಲುಕಿದ್ದ ಸುಮಾರು 18 ಜನರನ್ನು ರಕ್ಷಿಸಿದ್ದರು. ಪರಿಹಾರ ಕಾರ್ಯಾಚರಣೆಗಾಗಿ ಕನಿಷ್ಠ ಏಳು ಅಗ್ನಿಶಾಮಕ ಯಂತ್ರಗಳು ಹಾಜರಿದ್ದು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿತ್ತು.
ಬೆಂಕಿಗೆ ಆಹುತಿಯಾದ ಕಟ್ಟಡದಿಂದ ಇಬ್ಬರು ಮಕ್ಕಳನ್ನು ಮಹಿಳೆಯೊಬ್ಬಳು ಬಾಲ್ಕನಿ ಮೂಲಕ ಇಬ್ಬರು ಪುರುಷರ ಸಹಾಯದಿಂದ ಕೆಳಗಿಳಿಸಿದ್ದಳು. ಈ ದೃಶ್ಯ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿತ್ತು. ನಂತರ ಮಹಿಳೆಯನ್ನು ಕೂಡ ರಕ್ಷಿಸಲಾಗಿತ್ತು. ನೆಲಮಹಡಿಯಿಂದ ಕಟ್ಟಡದ ಮೇಲ್ಭಾಗಕ್ಕೆ ಹೋಗಿರುವ ತಂತಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು ಎನ್ನಲಾಗಿದೆ.
ಹಾಗೆಯೆ ಗ್ರೇಟರ್ ನೋಯ್ಡಾದ ಜ್ಞಾನ ಪಾರ್ಕ್‌ನಲ್ಲಿರುವ ಅನ್ನಪೂರ್ಣ ಬಾಲಕಿಯರ ಹಾಸ್ಟೆಲ್‍ನಲ್ಲಿ ಈ ಹಿಂದೆ ಬೆಂಕಿ ಕಾಣಿಸಿಕೊಂಡಿದ್ದು, ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿಸಿತ್ತು. ನಂತರ ಇಬ್ಬರು ವಿದ್ಯಾರ್ಥಿನಿಯರು ಸ್ಥಳೀಯರ ಸಹಾಯದಿಂದ ಪ್ರಾಣಾಪಾಯದಿಂದ ಪಾರಾಗಿದ್ದರು. ಈ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು.