Viral Video: ಬಾಲಕಿಯರ ಹಾಸ್ಟೆಲ್‍ನಲ್ಲಿ ಬೆಂಕಿ; ಸಿಕ್ಕಿಬಿದ್ದ ವಿದ್ಯಾರ್ಥಿನಿಯರನ್ನು ಸ್ಥಳೀಯರು ಕಾಪಾಡಿದ್ದು ಹೇಗೆ? ವಿಡಿಯೊ ನೋಡಿ
Fire Accident: ಗ್ರೇಟರ್ ನೋಯ್ಡಾದ ಜ್ಞಾನ ಪಾರ್ಕ್‌ನಲ್ಲಿರುವ ಅನ್ನಪೂರ್ಣ ಬಾಲಕಿಯರ ಹಾಸ್ಟೆಲ್‍ನಲ್ಲಿ ಇತ್ತೀಚೆಗೆ ಬೆಂಕಿ ಕಾಣಿಸಿಕೊಂಡಿದ್ದು,ಇದರಲ್ಲಿ ಸಿಕ್ಕಿಹಾಕಿಕೊಂಡಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಸ್ಥಳೀಯರು ಏಣಿ ಬಳಸಿ ಅವರನ್ನು ಕೆಳಗಿಳಿಸಿದ್ದಾರೆ. ಈ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.


ಲಖನೌ: ಗ್ರೇಟರ್ ನೋಯ್ಡಾದ ಜ್ಞಾನ ಪಾರ್ಕ್‌ನಲ್ಲಿರುವ ಅನ್ನಪೂರ್ಣ ಬಾಲಕಿಯರ ಹಾಸ್ಟೆಲ್‍ನಲ್ಲಿ ಇತ್ತೀಚೆಗೆ ಬೆಂಕಿ ಕಾಣಿಸಿಕೊಂಡಿದ್ದು, ಇದು ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿಸಿತ್ತು. ನಂತರ ಇಬ್ಬರು ವಿದ್ಯಾರ್ಥಿನಿಯರು ಸ್ಥಳೀಯರ ಸಹಾಯದಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ. ಘಟನೆಯ ವಿಡಿಯೊದಲ್ಲಿ ವಿದ್ಯಾರ್ಥಿನಿಯರಿಬ್ಬರು ಬೆಂಕಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಬಾಲ್ಕನಿಯಿಂದ ಜಿಗಿದಿದ್ದಾರೆ. ಅಗ್ನಿಶಾಮಕ ದಳದವರು ಸ್ಥಳಕ್ಕೆ ಬಂದು ಬೆಂಕಿಯನ್ನು ನಂದಿಸಿರುವುದು ಕಂಡು ಬಂದಿದೆ.
ವೈರಲ್ ವಿಡಿಯೊದಲ್ಲಿ ಇಬ್ಬರು ವಿದ್ಯಾರ್ಥಿಗಳು ಎರಡನೇ ಮಹಡಿಯಲ್ಲಿರುವ ತಮ್ಮ ಹಾಸ್ಟೆಲ್‍ನ ಬಾಲ್ಕನಿಯಲ್ಲಿ ನಿಂತಿದ್ದು, ಪಕ್ಕದ ಕಿಟಕಿಯಿಂದ ಬೆಂಕಿಯ ಜ್ವಾಲೆ ಹೊರಬರುವುದು ಸೆರೆಯಾಗಿದೆ. ಹಾಸ್ಟೆಲ್‍ನಲ್ಲಿ ಅಳವಡಿಸಿದ್ದ ಎಸಿ ಸ್ಫೋಟಗೊಂಡ ನಂತರ ಹಾಸ್ಟೆಲ್‍ನ ವಿದ್ಯಾರ್ಥಿನಿಯರು ಮೆಟ್ಟಿಲುಗಳಿಂದ ಇಳಿದು ಹಾಸ್ಟೆಲ್‍ನಿಂದ ಹೊರಗೆ ಬಂದಿದ್ದಾರೆ. ಆದರೆ ಇಬ್ಬರು ವಿದ್ಯಾರ್ಥಿನಿಯರು ಹಾಸ್ಟೆಲ್‍ನ ಒಳಗೆ ಸಿಕ್ಕಿಹಾಕಿಕೊಂಡಿದ್ದಾರೆ. ಕೊನೆಗೆ ಅವರನ್ನು ಸ್ಥಳೀಯರು ಬಾಲ್ಕನಿ ಬಳಿ ಏಣಿಯನ್ನು ಇರಿಸಿ ಕೆಳಗೆ ಇಳಿಸಿದ್ದಾರೆ.
ವಿದ್ಯಾರ್ಥಿಗಳನ್ನು ಸ್ಥಳೀಯರು ಕಾಪಾಡುತ್ತಿರುವ ದೃಶ್ಯ ಇಲ್ಲಿದೆ ನೋಡಿ...
#Fire breaks out at a #girls' #hostel in #GreaterNoida. Students jumped to safety, but one girl slipped and injured her leg. pic.twitter.com/TKeZU50RIq
— Akashdeep Singh (@akashgill78) March 28, 2025
ಏಣಿಯಿಂದ ಇಳಿಯುವಾಗ ಒಬ್ಬಳು ವಿದ್ಯಾರ್ಥಿನಿ ಕಾಲು ಜಾರಿ ಬಿದ್ದಿದ್ದಾಳೆ. ಆಕೆ ಸುರಕ್ಷಿತವಾಗಿದ್ದು, ಯಾವುದೇ ಗಂಭೀರ ಗಾಯಗಳಾಗಿಲ್ಲ ಎಂಬುದಾಗಿ ತಿಳಿದುಬಂದಿದೆ. ಈ ಘಟನೆಯ ಬಗ್ಗೆ ಮಾಹಿತಿ ಪಡೆದ ಅಗ್ನಿಶಾಮಕದಳದವರು ತಕ್ಷಣ ಸ್ಥಳಕ್ಕೆ ಬಂದು ಬೆಂಕಿಯನ್ನು ನಿಯಂತ್ರಿಸಿದ್ದಾರೆ. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಬಗ್ಗೆ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂಬುದಾಗಿ ತಿಳಿದುಬಂದಿದೆ.
ಗ್ರೇಟರ್ ನೋಯ್ಡಾದ ಅನ್ನಪೂರ್ಣ ಬಾಲಕಿಯರ ಹಾಸ್ಟೆಲ್‍ನಲ್ಲಿ ಇತ್ತೀಚೆಗೆ ಸಂಭವಿಸಿದ ಬೆಂಕಿಯ ಬಗ್ಗೆ ಎಬಿವಿಪಿ ತೀವ್ರ ಕಳವಳ ವ್ಯಕ್ತಪಡಿಸಿದೆ. ಈ ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಅಧಿಕಾರಿಗಳನ್ನು ಒತ್ತಾಯಿಸಿದೆ. ಎಲ್ಲ ಹಾಸ್ಟೆಲ್‍ಗಳಲ್ಲಿ ಕಠಿಣ ಸುರಕ್ಷತಾ ಕ್ರಮಗಳನ್ನು ಜಾರಿಗೆ ತರುವ ಮೂಲಕ ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವಂತೆ ತಿಳಿಸಿದೆ.
ಹಾಸ್ಟೆಲ್‍ನಲ್ಲಿ ಬೆಂಕಿಯ ದುರಂತ ಸಂಭವಿಸಿದ್ದು ಇದೇ ಮೊದಲಲ್ಲ. ಗುಜರಾತ್‍ನ ಸೂರತ್‍ನಲ್ಲಿ ವಾಣಿಜ್ಯ ಸಂಕೀರ್ಣದಲ್ಲಿ ಕೆಲವು ದಿನಗಳ ಹಿಂದೆ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 22 ವಿದ್ಯಾರ್ಥಿಗಳು ಸಾವನ್ನಪ್ಪಿದ್ದರು ಮತ್ತು ಹಲವಾರು ಮಂದಿ ಗಾಯಗೊಂಡಿದ್ದರು. ಎರಡು ಅಂತಸ್ತಿನ ಖಾಸಗಿ ಬಾಲಕಿಯರ ಹಾಸ್ಟೆಲ್‍ನ ವಿದ್ಯುತ್ ಮೀಟರ್ ಫಲಕದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಇದರಿಂದ ಹಾಸ್ಟೆಲ್‍ನ ಒಳಗೆ ಸುಮಾರು 50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿಕ್ಕಿಬಿದ್ದಿದ್ದು, ಅವರನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ್ದರು.
ಫುಡ್ ಪಾಯಿಸನ್‌ನಿಂದ ಆಸ್ಪತ್ರೆಗ ದಾಖಲಾದ ಹಾಸ್ಟೆಲ್ ವಿದ್ಯಾರ್ಥಿಗಳು
ಇತ್ತೀಚೆಗೆ ಸರ್ಕಾರಿ ಬಾಲಕರ ಹಾಸ್ಟೆಲ್‌ನಲ್ಲಿ ಉಪಾಹಾರ ಸೇವಿಸಿ 20 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಶಿರಾ ತಾಲೂಕಿನ ಲಕ್ಕನಹಳ್ಳಿಯಲ್ಲಿ ನಡೆದಿತ್ತು. ಫುಡ್ ಪಾಯಿಸನ್ ಕಾರಣದಿಂದ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಕ್ಕಳು ಅಸ್ವಸ್ಥರಾಗಿರುವ ವಿಚಾರ ತಿಳಿದು ಪೋಷಕರು ಆಸ್ಪತ್ರೆಗೆ ಧಾವಿಸಿದ್ದು, ಹಾಸ್ಟೆಲ್ ವಾರ್ಡನ್, ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿದ್ದರು.