ಇಂಡಿಗೋ ಸಮಸ್ಯೆ; ಕ್ಯಾಬಿನ್ ಮೇಲೇರಿ ವಿದೇಶಿ ಮಹಿಳೆಯ ರಂಪಾಟ; ವಿಡಿಯೊ ವೈರಲ್
viral video: ವಿಮಾನಗಳು ರದ್ದಾದ ಬೆನ್ನಲ್ಲೇ ಅನೇಕ ಪ್ರಯಾಣಿಕರು ಊರಿಗೆ ತೆರಳಲು ಆಗದೇ ಪರದಾಡುತ್ತಿದ್ದಾರೆ. ಅನೇಕರು ಬೇರೆ ವಿಮಾನಕ್ಕೆ ಟಿಕೆಟ್ ಬುಕ್ಕಿಂಗ್ ಆಗುವವರೆಗೆ ಹೋಟೆಲ್‌ನಲ್ಲಿ ಉಳಿದುಕೊಳ್ಳುತ್ತಿದ್ದಾರೆ. ಹೀಗಾಗಿ ಇದೇ ಅವಕಾಶ ಬಳಸಿಕೊಂಡು ಅನೇಕ ಹೋಟೆಲ್‌ಗಳು ಭಾರಿ ಪ್ರಮಾಣದಲ್ಲಿ ಬಾಡಿಗೆ ಏರಿಸಿವೆ.
-
ಮುಂಬಯಿ, ಡಿ.6: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆ ಎನಿಸಿರುವ 'ಇಂಡಿಗೊ'(viral video) ವಿಮಾನಗಳ ಹಾರಾಟದಲ್ಲಿ ತೀವ್ರ ವ್ಯತ್ಯಯವಾಗಿ ಇಂದಿಗೆ 5 ದಿನ ಕಳೆದಿದೆ. ಡಿಸೆಂಬರ್ 10ರಿಂದ 15ರ ವೇಳೆಗೆ ಸಂಚಾರ ಸಹಜ ಸ್ಥಿತಿಗೆ ಬರಲಿದೆ ಎಂದು ಸಂಸ್ಥೆ ತಿಳಿಸಿದೆ. ದೇಶದಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರು ಪರದಾಡುವಂತಾಗಿದೆ. ಮುಂಬೈ ವಿಮಾನ ನಿಲ್ದಾಣದಲ್ಲಿ ತಾಳ್ಮೆ ಕೊಂಡ ವಿದೇಶಿ ಮಹಿಳೆಯೊಬ್ಬರು ಕ್ಯಾಬಿನ್ ಮೇಲೆ ಹತ್ತಿ ಸಿಬ್ಬಂದಿಗಳ ಜತೆ ರಂಪಾಟ ನಡೆಸಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾದಲ್ಲಿ ವೈರಲ್(viral video) ಆಗಿದೆ.
NDTV ಯ ವರದಿಯ ಸಮಯದಲ್ಲಿ ನೇರಪ್ರಸಾರದಲ್ಲಿ ಸೆರೆಹಿಡಿಯಲಾದ ಈ ವಿಡಿಯೊದಲ್ಲಿ ಮಹಿಳೆ ಸಿಟ್ಟಿನಿಂದ ಇಂಡಿಗೋ ಕೌಂಟರ್‌ನ ಕಿಟಕಿಯನ್ನು ಹಿಡಿದು ಬರಿಗಾಲಿನಲ್ಲಿ ಕೌಂಟರ್‌ಗೆ ಹಾರುತ್ತಿರುವುದನ್ನು ಕಾಣಬಹುದು. ಮುಂಬೈ ವಿಮಾನ ನಿಲ್ದಾಣದಲ್ಲಿ ನಡೆದೆ ಘಟನೆ ಇದಾಗಿದೆ.
ತನ್ನ ಎಲ್ಲಾ ವಸ್ತುಗಳನ್ನು ಲಗೇಜ್‌ನಲ್ಲಿ ತುಂಬಿಸಿಕೊಂಡು ಹೋಗಿರುವುದರಿಂದ, ಧರಿಸಲು ಹೆಚ್ಚುವರಿ ಬಟ್ಟೆಗಳಿಲ್ಲ ಎಂದು ಅವರು ಇತರ ಪ್ರಯಾಣಿಕರಿಂದ ಬೆಂಬಲ ಪಡೆಯಲು ಪ್ರಯತ್ನಿಸಿ ಹೀಗೆ ಮಾಡಿದ್ದಾರೆ. ಮೂಲಭೂತ ಸೌಕರ್ಯಗಳಿಲ್ಲದೆ ಸಿಲುಕಿಕೊಂಡಿದ್ದಕ್ಕೆ ಕೋಪಗೊಂಡ ಮಹಿಳೆ ಆಹಾರಕ್ಕೂ ಬೇಡಿಕೆ ಇಟ್ಟರು. ಕೌಂಟರ್‌ನಲ್ಲಿದ್ದ ಸಿಬ್ಬಂದಿ ಕೋಪಗೊಂಡ ಮಹಿಳೆಯನ್ನು ಸಮಾಧಾನಪಡಿಸಲು ಪ್ರಯತ್ನಿಸುತ್ತಿರುವುದು ಮತ್ತು ಕೌಂಟರ್‌ನಿಂದ ಕೆಳಗಿಳಿಯುವಂತೆ ಒತ್ತಾಯಿಸುತ್ತಿರುವುದು ಕಂಡುಬಂದಿದೆ.
ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಪೀಟರ್ ಎಲ್ಬರ್ಸ್ ಅವರು ವಿಡಿಯೊ ಸಂದೇಶದ ಮೂಲಕ ಕ್ಷಮೆಯಾಚಿಸಿದ್ದಾರೆ. ಸಂಚಾರವನ್ನು ಸಹಜಸ್ಥಿತಿಗೆ ತರಲು ಇನ್ನಷ್ಟು ಕ್ರಮ ಕೈಗೊಳ್ಳಬೇಕಿದೆ ಎಂಬುದನ್ನು ಒಪ್ಪಿಕೊಂಡಿರುವ ಅವರು, ಎಲ್ಲ ವ್ಯವಸ್ಥೆಗಳು ಹಾಗೂ ವೇಳಾಪಟ್ಟಿಯನ್ನು ಮರುನಿಗದಿ ಮಾಡಲು ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ ಮುಂದುವರಿದ ಇಂಡಿಗೋ ಸಮಸ್ಯೆ: ತನಿಖೆಗೆ ಸರ್ಕಾರದಿಂದ ಸಮಿತಿ ರಚನೆ
ವಿಮಾನಗಳು ರದ್ದಾದ ಬೆನ್ನಲ್ಲೇ ಅನೇಕ ಪ್ರಯಾಣಿಕರು ಊರಿಗೆ ತೆರಳಲು ಆಗದೇ ಪರದಾಡುತ್ತಿದ್ದಾರೆ. ಅನೇಕರು ಬೇರೆ ವಿಮಾನಕ್ಕೆ ಟಿಕೆಟ್ ಬುಕ್ಕಿಂಗ್ ಆಗುವವರೆಗೆ ಹೋಟೆಲ್‌ನಲ್ಲಿ ಉಳಿದುಕೊಳ್ಳುತ್ತಿದ್ದಾರೆ. ಹೀಗಾಗಿ ಇದೇ ಅವಕಾಶ ಬಳಸಿಕೊಂಡು ಅನೇಕ ಹೋಟೆಲ್‌ಗಳು ಭಾರಿ ಪ್ರಮಾಣದಲ್ಲಿ ಬಾಡಿಗೆ ಏರಿಸಿವೆ. ಮಹತ್ವದ ಕೆಲಸಗಳಿಗೆ ಹೊರಟಿದ್ದ ಪ್ರಯಾಣಿಕರು ಏರ್‌ಪೋರ್ಟ್‌ವರೆಗೆ ಬಂದು ನಿರಾಶೆಯ ಮುಖ ಹೊತ್ತು ವಾಪಸಾಗಿದ್ದಾರೆ ಅಥವಾ ಹೆಚ್ಚು ಬೆಲೆ ತೆತ್ತು ಇನ್ನೊಂದು ಕಂಪನಿ ವಿಮಾನದ ಮೂಲಕ ಸಾಗಿದ್ದಾರೆ.
ಬೆಂಗಳೂರಲ್ಲಿ ಮಹಿಳೆಯೊಬ್ಬರು ಮಾತನಾಡಿ, ‘ನನ್ನ ತಂದೆಯ ಅಸ್ಥಿ ಹೊತ್ತು ಹರಿದ್ವಾರಕ್ಕೆ ಹೋಗಬೇಕಿದೆ. ಇದಕ್ಕಾಗಿ ನಾನು ಬೆಂಗಳೂರಿಂದ ದಿಲ್ಲಿ ಹಾಗೂ ದಿಲ್ಲಿಯಿಂದ ಡೆಹ್ರಾಡೂನ್‌ಗೆ ವಿಮಾನ ಬುಕ್ ಮಾಡಿದ್ದೇನೆ. ಆದರೆ ಯಾವುದೇ ಪೂರ್ವ ಸೂಚನೆ ಇಲ್ಲದೆ ವಿಮಾನ ರದ್ದುಪಡಿಸಲಾಗಿದೆ. ನಮ್ಮನ್ನು ಇತರ ವಿಮಾನಯಾನ ಸಂಸ್ಥೆಗಳೊಂದಿಗೆ ವಿಮಾನ ಕಾಯ್ದಿರಿಸಲು ಕೇಳುತ್ತಿದ್ದಾರೆ’ ಎಂದು ಗೋಳು ತೋಡಿಕೊಂಡರು.