ಅಹಮದಾಬಾದ್: ಆಘಾತಕಾರಿ ಹಿಟ್ ಅಂಡ್ ರನ್ ಪ್ರಕರಣವೊಂದರಲ್ಲಿ, ಕುಡಿದ ಮತ್ತಿನಲ್ಲಿದ್ದ ಶಿಕ್ಷಕನೊಬ್ಬ ಚಲಾಯಿಸುತ್ತಿದ್ದ ಕಾರು ಬೈಕ್‌ಗೆ ಡಿಕ್ಕಿ ಹೊಡೆದು ಒಂದು ಕಿಲೋಮೀಟರ್‌ಗೂ ಹೆಚ್ಚು ದೂರ ಎಳೆದೊಯ್ದ ಘಟನೆ ಗುಜರಾತ್‍ನಲ್ಲಿ ನಡೆದಿದೆ. ಅಪಘಾತದಲ್ಲಿ (accident) ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಹಿಂದಿನಿಂದ ಬರುತ್ತಿದ್ದ ಇನ್ನೊಂದು ಕಾರಿನಲ್ಲಿದ್ದವರು ಘಟನೆಯ ದೃಶ್ಯವನ್ನು ಸೆರೆಹಿಡಿದಿದ್ದಾರೆ. ಆಘಾತಕಾರಿ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (Viral Video) ಆಗಿದೆ.
ರಾಷ್ಟ್ರೀಯ ಹೆದ್ದಾರಿ 48ರ ಮೋಡಸ ಲುನಾವಾಡ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಕಾರು ಮತ್ತು ದ್ವಿಚಕ್ರ ವಾಹನವು ಮಹಿಸಾಗರ್ ಜಿಲ್ಲೆಯ ಮೂಲಕ ಹಾದುಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದ ಸಮಯದಲ್ಲಿ ಕಾರು ಚಲಾಯಿಸುತ್ತಿದ್ದ ಮದ್ಯದ ಅಮಲಿನಲ್ಲಿದ್ದ ಶಿಕ್ಷಕ ಮತ್ತು ಅವರ ಸಹೋದರನನ್ನು ಬಂಧಿಸಲಾಗಿದೆ. ಕಾರು ಮತ್ತು ಕಾರಿನೊಳಗೆ ಪತ್ತೆಯಾದ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: Viral Video: ಗಡದ್ದಾಗಿ ತಿಂದು ಹೋಟೆಲ್ ಬಿಲ್ ಪಾವತಿಸದೆ ಪರಾರಿಯಾದ ಪ್ರವಾಸಿಗರು; ಬೆನ್ನಟ್ಟಿದ ಸಿಬ್ಬಂದಿ
ವೈರಲ್ ಆಗಿರುವ 33 ಸೆಕೆಂಡುಗಳ ವಿಡಿಯೊದಲ್ಲಿ ಕಾರಿನ ಮುಂದೆ ಸಿಲುಕಿಕೊಂಡಿದ್ದ ಬೈಕ್ ಅನ್ನು ಎಳೆದುಕೊಂಡು ಹೋಗುವುದನ್ನು ತೋರಿಸಲಾಗಿದೆ. ಸವಾರರಲ್ಲಿ ಒಬ್ಬರು ಬಿದ್ದು ಅವರ ಕೈ ಚಕ್ರಗಳ ಕೆಳಗೆ ಬಿದ್ದಂತೆ ಕಾಣುತ್ತದೆ. ಕಾರು ಚಾಲಕನನ್ನು ಮನೀಶ್ ಪಟೇಲ್ ಎಂದು ಗುರುತಿಸಲಾಗಿದ್ದು, ಆತನ ಸಹೋದರನನ್ನು ಮೆಹುಲ್ ಪಟೇಲ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು 50 ವರ್ಷದ ದಿನೇಶ್‌ಭಾಯ್ ಮತ್ತು 21 ವರ್ಷದ ಸುನಿಲ್ ಎಂದು ಗುರುತಿಸಲಾಗಿದೆ.
ವಿಡಿಯೊ ವೀಕ್ಷಿಸಿ:
ಈ ಸಂಬಂಧ ಇಬ್ಬರು ಆರೋಪಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯ ತಂಡವನ್ನೂ ಕರೆಸಿದ್ದು, ತನಿಖೆ ನಡೆಯುತ್ತಿದೆ ಎಂದು ಮಹಿಸಾಗರ್ ಉಪ ಪೊಲೀಸ್ ವರಿಷ್ಠಾಧಿಕಾರಿ ಕಮಲೇಶ್ ವಾಸವ ಹೇಳಿದ್ದಾರೆ. ಶಿಕ್ಷಕನ ಚಾಲನಾ ಪರವಾನಗಿಯನ್ನು ರದ್ದುಗೊಳಿಸುವ ಪ್ರಯತ್ನಗಳು ಸಹ ನಡೆಯುತ್ತಿವೆ ಎಂದು ಅವರು ಹೇಳಿದರು. ಗಾಯಾಳುಗಳು ಲುನಾವಾಡಾ ಸಿವಿಲ್ ಆಸ್ಪತ್ರೆ ಮತ್ತು ಗೋಧ್ರಾ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೀನ್ಯಾದಲ್ಲಿ ವಿಮಾನ ಅಪಘಾತ; 11 ಮಂದಿ ಬಲಿ
ಅಕ್ಟೋಬರ್ 28ರ ಬೆಳಗ್ಗೆ ಕೀನ್ಯಾದ ಕರಾವಳಿ ಪ್ರದೇಶ ಕ್ವಾಲೆಯಲ್ಲಿ ಮಾಸಾಯಿ ಮಾರಾ ರಾಷ್ಟ್ರೀಯ ಅಭಯಾರಣ್ಯಕ್ಕೆ ತೆರಳುತ್ತಿದ್ದ ಸಣ್ಣ ವಿಮಾನವೊಂದು ಅಪಘಾತಕ್ಕೀಡಾಗಿದ್ದು, 11 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಡಯಾನಿ ವಾಯುನೆಲೆಯಿಂದ ಸುಮಾರು 40 ಕಿಲೋ ಮೀಟರ್ ದೂರದಲ್ಲಿರುವ ಗುಡ್ಡಗಾಡು ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕ್ವಾಲೆ ಕೌಂಟಿ ಆಯುಕ್ತ ಸ್ಟೀಫನ್ ಒರಿಂಡೆ ಅಸೋಸಿಯೇಟೆಡ್ ಈ ಬಗ್ಗೆ ಮಾತನಾಡಿ, ಪ್ರಯಾಣಿಕರೆಲ್ಲರೂ ವಿದೇಶಿ ಪ್ರವಾಸಿಗರು ಎಂದು ತಿಳಿಸಿದ್ದಾರೆ.