ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Viral News: ಟೇಕಾಫ್‌ ವೇಳೆ ಭಾರೀ ತಾಂತ್ರಿಕ ದೋಷ; 151 ಪ್ರಯಾಣಿಕರಿದ್ದ ವಿಮಾನ ಎಮರ್ಜೆನ್ಸಿ ಲ್ಯಾಂಡಿಂಗ್‌

IndiGo Pilot Aborts Take off: ದೆಹಲಿಯಿಂದ ಲಕ್ನೋಗೆ ಟೇಕಾಫ್ ಆಗಲು ಸಿದ್ಧವಾಗಿದ್ದ ಇಂಡಿಗೊ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ಕಾರಣ ಪೈಲಟ್‍ಗಳು ತುರ್ತು ಬ್ರೇಕ್ ಹಾಕಿದ್ದಾರೆ. ವಿಮಾನದಲ್ಲಿ ಸಮಾಜವಾದಿ ಪಕ್ಷದ ನಾಯಕಿ ಡಿಂಪಲ್ ಯಾದವ್ ಸೇರಿದಂತೆ 151 ಪ್ರಯಾಣಿಕರಿದ್ದರು.

ನವದೆಹಲಿ: ಲಕ್ನೋಗೆ ಹಾರಲು ನಿಗದಿಯಾಗಿದ್ದ ಇಂಡಿಗೋ (Indigo) ವಿಮಾನವು ಶನಿವಾರ ತಾಂತ್ರಿಕ ದೋಷದಿಂದಾಗಿ ಹಾರಲು ಸಾಧ್ಯವಾಗಲಿಲ್ಲ. ವಿಮಾನದಲ್ಲಿ ಸಮಾಜವಾದಿ ಪಕ್ಷದ ನಾಯಕಿ ಡಿಂಪಲ್ ಯಾದವ್ ಸೇರಿದಂತೆ 151 ಪ್ರಯಾಣಿಕರಿದ್ದರು. ರಾಷ್ಟ್ರ ರಾಜಧಾನಿ ದೆಹಲಿ (Delhi) ಯಲ್ಲಿ ಈ ಘಟನೆ ನಡೆದಿದೆ. ಲಕ್ನೋದ ಚೌಧರಿ ಚರಣ್ ಸಿಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳಿಗ್ಗೆ 10:30 ರ ಸುಮಾರಿಗೆ 6E-2111 ವಿಮಾನ ಟೇಕಾಫ್ ಆಗಲು ವಿಫಲವಾದಾಗ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ವಿಮಾನ ಸರಿಯಾಗಿ ಟೇಕಾಫ್ ಮಾಡಲು ಸಾಧ್ಯವಾಗದ ಕಾರಣ, ಪೈಲಟ್‌ಗಳು ತುರ್ತು ಬ್ರೇಕ್‌ಗಳನ್ನು ಹಾಕಿ ವಿಮಾನವನ್ನು ಸಂಪೂರ್ಣವಾಗಿ ನಿಲ್ಲಿಸಿದರು.

ನಂತರ ಪ್ರಯಾಣಿಕರನ್ನು ಬೇರೆ ವಿಮಾನದಲ್ಲಿ ಸ್ಥಳಾಂತರಿಸಲಾಯಿತು. ಕೆಲವು ವರದಿಗಳ ಪ್ರಕಾರ, ವಿಮಾನವು ರನ್‌ವೇಯಲ್ಲಿ ಮುಂದೆ ಚಲಿಸಲು ಸಾಧ್ಯವಾಗಲಿಲ್ಲ. ಹೀಗಾಗಿ, ತುರ್ತು ಬ್ರೇಕ್‌ ಹಾಕಲಾಯಿತು. ಪ್ರಯಾಣಿಕರಿಗೆ ಆದ ಅನಾನುಕೂಲತೆಗಾಗಿ ವಿಮಾನಯಾನ ಸಂಸ್ಥೆಯು ಕ್ಷಮೆಯಾಚಿಸಿದೆ ಎಂದು ವರದಿಯಾಗಿದೆ. ಇತ್ತೀಚೆಗೆ, ಸೆಪ್ಟೆಂಬರ್ 6 ರಂದು, ಅಬುಧಾಬಿಗೆ ತೆರಳುತ್ತಿದ್ದ ಇಂಡಿಗೋ ವಿಮಾನವು ಆಕಾಶದಲ್ಲಿ ತಾಂತ್ರಿಕ ದೋಷವನ್ನು ಎದುರಿಸಿದ ನಂತರ ಕೊಚ್ಚಿಗೆ ಹಿಂತಿರುಗಬೇಕಾಯಿತು. ಮೂಲಗಳ ಪ್ರಕಾರ, ವಿಮಾನವು ಎರಡು ಗಂಟೆಗಳಿಗೂ ಹೆಚ್ಚು ಕಾಲ ಹಾರಾಟ ನಡೆಸಿತು.

6E-1403 (COK-AUH) ವಿಮಾನವು ಸೆಪ್ಟೆಂಬರ್ 5 ರಂದು ರಾತ್ರಿ 11:10 ಕ್ಕೆ ಕೊಚ್ಚಿಯಿಂದ ಹೊರಟಿತು. ಆದರೆ ತಾಂತ್ರಿಕ ದೋಷದಿಂದಾಗಿ ಸೆಪ್ಟೆಂಬರ್ 6 ರಂದು ಬೆಳಿಗ್ಗೆ 1:44 ರ ಸುಮಾರಿಗೆ ಹಿಂತಿರುಗಬೇಕಾಯಿತು.ಇನ್ನೊಂದೆಡೆ ಗುಜರಾತ್‌ನ ಕಾಂಡ್ಲಾದಿಂದ 75 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಸ್ಪೈಸ್‌ಜೆಟ್ ವಿಮಾನವು ಶುಕ್ರವಾರ (ಸೆಪ್ಟೆಂಬರ್ 12) ಮುಂಬೈ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿತ್ತು.

ಕಾಂಡ್ಲಾ ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ಆಗುವ ಸಮಯದಲ್ಲಿ ಅದರ ಹೊರ ಚಕ್ರಗಳಲ್ಲಿ ಒಂದು ಕಳಚಿ ಬಿದ್ದಿತು. ಕಾಂಡ್ಲಾದಿಂದ ಮುಂಬೈಗೆ ಹಾರುತ್ತಿದ್ದ ಎಸ್ ಜಿ 2906 ವಿಮಾನವು ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗುವಾಗ ಈ ಘಟನೆ ನಡೆದಿದೆ. ವಿಮಾನಯಾನ ಸಂಸ್ಥೆ ನೀಡಿರುವ ಮಾಹಿತಿ ಪ್ರಕಾರ ವಿಮಾನದ ಹೊರ ಚಕ್ರಗಳಲ್ಲಿ ಒಂದಾದ ಕ್ಯೂ400 ಬೊಂಬಾರ್ಡಿಯರ್ ಟೇಕ್ ಆಫ್ ಆದ ಸ್ವಲ್ಪ ಸಮಯದ ಅನಂತರ ರನ್‌ವೇಯಲ್ಲಿ ಬಿದ್ದಿತ್ತು. ಹೀಗಾಗಿ ತಕ್ಷಣ ಸ್ಪೈಸ್ ಜೆಟ್ ವಿಮಾನವನ್ನು ತುರ್ತು ಲ್ಯಾಂಡಿಂಗ್ ಮಾಡಲಾಯಿತು.

ಇದನ್ನೂ ಓದಿ: Viral Video: ಕೆನಡಾದ ವ್ಯಕ್ತಿಯ ವಿಡಿಯೋ ವೈರಲ್ ಬಳಿಕ ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗ ಸ್ವಚ್ಛಗೊಳಿಸಿದ BBMP