ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Viral Video: ಇದು ವಾಹನವೋ, ಕಪ್ಪೆಯೋ! ಕುಡಿದ ಮತ್ತಿನಲ್ಲಿ ಕಾಂಪೌಂಡ್ ಮೇಲೆ ಕಾರು ಹತ್ತಿಸಿದ ಚಾಲಕ- ಇಲ್ಲಿದೆ ವಿಡಿಯೊ

Car on top of a wall: ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಮನೆಯೊಂದರ ಕಾಂಪೌಂಡ್ ಮೇಲೆ ಕಾರು ಡಿಕ್ಕಿ ಹೊಡೆಸಿದ ಘಟನೆ ತೆಲಂಗಾಣದ ಮೆಡ್ಚಲ್-ಮಲ್ಕಜ್‌ಗಿರಿ ಜಿಲ್ಲೆಯಲ್ಲಿ ನಡೆದಿದೆ. ಕಾರು ಮನೆಯ ಕಾಂಪೌಂಡ್‌ಗೆ ಡಿಕ್ಕಿ ಹೊಡೆದು ಅದರ ಮೇಲೆ ನಿಂತಿದೆ. ಇದರ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಹೈದರಾಬಾದ್: ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಮನೆಯೊಂದರ ಕಾಂಪೌಂಡ್ ಮೇಲೆ ಕಾರು ಡಿಕ್ಕಿ ಹೊಡೆಸಿದ ಘಟನೆ ತೆಲಂಗಾಣದ ಮೆಡ್ಚಲ್-ಮಲ್ಕಜ್‌ಗಿರಿ ಜಿಲ್ಲೆಯಲ್ಲಿ ನಡೆದಿದೆ. ಜುಲೈ 24ರ ಗುರುವಾರ ಈ ಘಟನೆ ನಡೆದಿದೆ. ಮಾಹಿತಿ ಪಡೆದ ಮೆಡ್ಚಲ್-ದುಂಡಿಗಲ್ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ತಲುಪಿದರು. ಅಲ್ಲಿ ಈ ಟಾಟಾ ಆಲ್ಟ್ರೋಜ್ ಕಾರು ಮನೆಯ ಕಾಂಪೌಂಡ್‌ಗೆ ಡಿಕ್ಕಿ ಹೊಡೆದು ಅದರ ಮೇಲೆ ನಿಂತಿದೆ. ಕೊನೆಗೆ ಕ್ರೇನ್ ಬಳಸಿ ವಾಹನವನ್ನು ಕೆಳಗಿಳಿಸಲಾಯಿತು. ಇದರ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್(Viral Video) ಆಗಿದೆ.

ಶಂಭಿಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕುಡಿದ ಮತ್ತಿನಲ್ಲಿದ್ದ ಚಾಲಕನೊಬ್ಬ ವಾಹನದ ನಿಯಂತ್ರಣ ಕಳೆದುಕೊಂಡು ಮನೆಯ ಕಾಂಪೌಂಡ್‌ಗೆ ಡಿಕ್ಕಿ ಹೊಡೆದಿದ್ದಾನೆ ಎಂದು ವರದಿಯಾಗಿದೆ. ಕಾರು ವೇಗವಾಗಿ ಚಲಿಸಿ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಕಾಂಪೌಂಡ್ ಮೇಲೆ ಹತ್ತಿದೆ.

ಈ ಅಪಘಾತವು ಆ ಪ್ರದೇಶದಲ್ಲಿ ಸಂಪೂರ್ಣ ಅವ್ಯವಸ್ಥೆಯನ್ನು ಉಂಟುಮಾಡಿತು. ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿದರು. ಕಾರು ಕಾಂಪೌಂಡ್‌ಗೆ ಹತ್ತಿರುವುದನ್ನು ನೋಡಿದವರಿಗೆ ತಮ್ಮ ಕಣ್ಣುಗಳನ್ನೇ ನಂಬಲು ಸಾಧ್ಯವಾಗಲಿಲ್ಲ. ಘಟನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ನೋಡಿದ ಬಳಕೆದಾರರು ಕೂಡ ಇದೇ ಮಾತನ್ನು ಹೇಳಿದ್ದಾರೆ.

ವಿಡಿಯೊ ವೀಕ್ಷಿಸಿ:



ಇದು ಹೇಗೆ ಸಾಧ್ಯ ಎಂದು ಯಾರಾದರೂ ದಯವಿಟ್ಟು ವಿವರಿಸಬಹುದೇ ಎಂದು ಒಬ್ಬ ಬಳಕೆದಾರರೊಬ್ಬರು ಕೇಳಿಕೊಂಡಿದ್ದಾರೆ. ಇನ್ನೊಬ್ಬರು ಚಾಲಕನ ಬಗ್ಗೆ ಹಾಸ್ಯಾಸ್ಪದ ಹೇಳಿಕೆ ನೀಡಿದರು. ಅವನನ್ನು ರೆಡ್ ಬುಲ್ ಸಾಹಸ ಕ್ರೀಡೆಗಳಿಗೆ ಕಳುಹಿಸಬೇಕು ಎಂದು ಹಾಸ್ಯ ಚಟಾಕಿ ಹಾರಿಸಿದರು. ಚಾಲನಾ ಕೌಶಲ್ಯ: ಅಲ್ಟ್ರಾ ಪ್ರೊ ಮ್ಯಾಕ್ಸ್ ಎಂದು ಮತ್ತೊಬ್ಬರು ತಮಾಷೆಯಾಗಿ ಪ್ರತಿಕ್ರಿಯಿಸಿದರೆ, ಇದು ಕಾರೋ ಅಥವಾ ಕಪ್ಪೆಯೋ ಎಂದು ಮಗದೊಬ್ಬರು ಲೇವಡಿ ಮಾಡಿದ್ದಾರೆ.

ಈ ಸುದ್ದಿಯನ್ನೂ ಓದಿ: International Yoga Day:‌ ಸಿಕ್ಕಾಪಟ್ಟೆ ವೈರಲ್‌ ಆಯ್ತು ಶ್ವಾನದ ಈ ಯೋಗಾಸನ; ವಿಡಿಯೊ ವೈರಲ್!

ಉತ್ತರ ಪ್ರದೇಶದ ಮೈನ್‌ಪುರಿಯಲ್ಲೂ ಇದೇ ರೀತಿಯ ಘಟನೆ ನಡೆದಿತ್ತು. ಮಹೀಂದ್ರಾ ಸ್ಕಾರ್ಪಿಯೋ ಒಂದು ಇ-ರಿಕ್ಷಾಗೆ ಡಿಕ್ಕಿ ಹೊಡೆದು ನಿರ್ಮಾಣ ಹಂತದ ಮನೆಯ ಗೋಡೆಗೆ ಡಿಕ್ಕಿ ಹೊಡೆದಿದೆ. ಸ್ಕಾರ್ಪಿಯೋ ತುಂಬಾ ವೇಗವಾಗಿ ಚಲಿಸಿ ಇ-ರಿಕ್ಷಾದ ಮೇಲೆ ಹತ್ತಿ ನಂತರ ಗೋಡೆಗೆ ಡಿಕ್ಕಿ ಹೊಡೆದಿತ್ತು. ಇದರ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಅಲೆಯನ್ನೇ ಸೃಷ್ಟಿಸಿತು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಲಿಲ್ಲ.