ಗಾಂಧಿನಗರ, ಮಾ. 9: ಟಿ20 ವಿಶ್ವಕಪ್ 2026ರ (T20 World Cup 2026) ಫೈನಲ್ ಪಂದ್ಯದಲ್ಲಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ ಜಯ ದಾಖಲಿಸಿ 3ನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಸಂಭ್ರಮಾಚರಣೆ ನಡುವೆ ಕ್ರೀಡಾ ಪತ್ರಕರ್ತೆಯೊಬ್ಬರಿಗೆ ಕಿಡಿಗೇಡಿಯೊಬ್ಬ ಕಿರುಕುಳ ನೀಡಿದ ಘಟನೆ ವರದಿಯಾಗಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದ ಹೊರಗೆ ವರದಿ ಮಾಡುತ್ತಿದ್ದಾಗ ಒಬ್ಬ ವ್ಯಕ್ತಿ ತನ್ನನ್ನು ಅನುಚಿತವಾಗಿ ಸ್ಪರ್ಶಿಸಿದ್ದಾನೆ ಎಂದು ಕ್ರೀಡಾ ಪತ್ರಕರ್ತೆ ಆರೋಪಿಸಿದ್ದಾರೆ.
ಭಾನುವಾರ (ಮಾರ್ಚ್ 8) ರಾತ್ರಿ ಟಿ20 ವಿಶ್ವಕಪ್ 2026ರ ಫೈನಲ್ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದಿತ್ತು. ಇದೇ ಸಂಭ್ರಮದಲ್ಲಿ ಕ್ರೀಡಾ ಪತ್ರಕರ್ತೆ ಗಾರ್ಗಿ ರಾವತ್ ಅವರಿಗೆ ವ್ಯಕ್ತಿಯೊಬ್ಬ ಕಿರುಕುಳ ನೀಡಿದ್ದಾನೆ.
ವಿಡಿಯೊ ನೋಡಿ:
ಕ್ರೀಡಾಂಗಣದಲ್ಲಿ ಅಭಿಮಾನಿಗಳು ಹೊರಬರುತ್ತಿದ್ದ ಸಂದರ್ಭದಲ್ಲಿ, ಅವರ ಹಿಂದೆ ಹಾದು ಹೋದ ವ್ಯಕ್ತಿ ಅವರನ್ನು ಅನುಚಿತವಾಗಿ ಸ್ಪರ್ಶಿಸಿದ್ದಾನೆ ಎಂದು ಕ್ರೀಡಾ ಪತ್ರಕರ್ತೆ ಗಾರ್ಗಿ ರಾವತ್ ಆರೋಪಿಸಿದ್ದಾರೆ. ಈ ಘಟನೆಯ ವಿಡಿಯೊವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.
ಹಿಂದೂ ದೇವಾಲಯದಲ್ಲಿ ಮುಸ್ಲಿಂ ಯುವಕನ ರೀಲ್ಸ್; ಕಲ್ಯಾಣಿಗೆ ನೀರು ಉಗಿದ ಯೂಟ್ಯೂಬರ್!
ವಿಡಿಯೊದಲ್ಲಿ ಒಬ್ಬ ವ್ಯಕ್ತಿ ಪತ್ರಕರ್ತೆಯ ಹಿಂದೆ ಹಾದು ಹೋಗುತ್ತಿರುವುದು ಮತ್ತು ಅವರನ್ನು ಅನುಚಿತವಾಗಿ ಸ್ಪರ್ಶಿಸುತ್ತಿರುವುದನ್ನು ಕಾಣಬಹುದು. ತಕ್ಷಣ ಗಾರ್ಗಿ ಗಾಬರಿಗೊಂಡು ನೀಡುತ್ತಿದ್ದ ವರದಿಯನ್ನು ಅರ್ಧಕ್ಕೆ ನಿಲ್ಲಿಸುತ್ತಿರುವುದು ಕಂಡು ಬಂದಿದೆ. ವಿಡಿಯೊವನ್ನು ಹಂಚಿಕೊಂಡ ರಾವುತ್, "ನೀವು ನನ್ನ ಮೇಲೆ ಅನುಚಿತವಾಗಿ ವರ್ತನೆ ಮಾಡಿದರೆ ನಿಮ್ಮ ಮುಖವನ್ನು ನಾನು ಇಂಟರ್‌ನೆಟ್‌ನಲ್ಲಿ ಬಹಿರಂಗಪಡಿಸುತ್ತೇನೆ" ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಅಹಮದಾಬಾದ್ ಪೊಲೀಸರನ್ನು ಸಹ ಟ್ಯಾಗ್ ಮಾಡಿದ್ದಾರೆ.
ಈ ಘಟನೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಹಲವರು ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಣುವ ವ್ಯಕ್ತಿಯನ್ನು ಗುರುತಿಸುವ ವೀಡಿಯೊದ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿದ್ದಾರೆ. ಆದರೆ ಕೆಲವರು ಇದು ಆಕಸ್ಮಿಕವಾಗಿ ನಡೆದ ಘಟನೆ ಎಂದಿದ್ದಾರೆ. ಇದನ್ನು ಗಾರ್ಗಿ ನಿರಾಕರಿಸಿದ್ದು, ಉದ್ದೇಶ ಪೂರ್ವಕವಾಗಿ ನಡೆದದ್ದು ಎಂದಿದ್ದಾರೆ.