ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಲೋಕ ಭವನದ ಬಳಿ ಪ್ರಜ್ಞೆ ತಪ್ಪಿದ ವ್ಯಕ್ತಿಯ ಸಹಾಯಕ್ಕೆ ಧಾವಿಸಿದ ಕೇರಳ ರಾಜ್ಯಪಾಲ ರಾಜೇಂದ್ರ ವಿಶ್ವನಾಥ ಅರ್ಲೆಕರ್‌

ಲೋಕಭವನದ ಬಳಿ ಪ್ರಜ್ಞಾಹೀನನಾಗಿ ಬಿದ್ದ ವ್ಯಕ್ತಿಯ ನೆರವಿಗೆ ಕೇರಳ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಧಾವಿಸಿದ ಘಟನೆ ಬುಧವಾರ ನಡೆದಿದೆ. ಅವರಿಗೆ ಅಗತ್ಯವಾದ ವೈದ್ಯಕೀಯ ನೆರವು ನೀಡಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಂಡ ಅವರು ಬಳಿಕ ಓಣಂ ಸಂಬಂಧಿತ ಆಚರಣೆಗಳಲ್ಲಿ ಭಾಗವಹಿಸಲು ತೆರಳಿದರು.

ಸಂಗ್ರಹ ಚಿತ್ರ

ಕೇರಳ: ಲೋಕ ಭವನದ (kerala lokabhavana) ಬಳಿ ವ್ಯಕ್ತಿಯೊಬ್ಬರು ಪ್ರಜ್ಞಾಹೀನನಾಗಿ ಬಿದ್ದರುವುದನ್ನು ನೋಡಿದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ (governor Rajendra Vishwanath Arlekar) ಅವರು ಅವರ ಸಹಾಯಕ್ಕೆ ಧಾವಿಸಿದ ಘಟನೆ ಬುಧವಾರ ನಡೆದಿದೆ. ಓಣಂ ಸಂಬಂಧಿತ ಆಚರಣೆಗಳಲ್ಲಿ ಭಾಗವಹಿಸಲು ತಮ್ಮ ಅಧಿಕೃತ ನಿವಾಸದಿಂದ ಕಾರಿನಲ್ಲಿ ಹೋಗುತ್ತಿದ್ದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಲೋಕ ಭವನದ ಬಳಿ ವ್ಯಕ್ತಿಯೊಬ್ಬರು ಪ್ರಜ್ಞಾಹೀನನಾಗಿ ಬಿದ್ದಿರುವುದನ್ನು ನೋಡಿ ತಕ್ಷಣ ಅವರ ಸಹಾಯಕ್ಕೆ ಧಾವಿಸಿದರು. ಅವರಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ನೆರವು ನೀಡಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಂಡರು.

ಘಟನೆ ಕುರಿತು ಮಾಹಿತಿ ನೀಡಿದ ಅಧಿಕಾರಿಯೊಬ್ಬರು, ಓಣಂ ಸಂಬಂಧಿತ ಆಚರಣೆಗಳಲ್ಲಿ ಭಾಗವಹಿಸಲು ರಾಜ್ಯಪಾಲರು ತಿರುವನಂತಪುರಂನಲ್ಲಿರುವ ತಮ್ಮ ಅಧಿಕೃತ ನಿವಾಸದಿಂದ ಹೊರಬರುತ್ತಿದ್ದಂತೆ ದಾರಿಹೋಕರೊಬ್ಬರು ಇದ್ದಕ್ಕಿದ್ದಂತೆ ಪ್ರಜ್ಞಾಹೀನರಾಗಿ ನೆಲಕ್ಕೆ ಬಿದ್ದಿರುವುದನ್ನು ನೋಡಿದರು. ಅವರನ್ನು ಗಿರೀಶ್ ಎಂದು ಗುರುತಿಸಲಾಗಿದೆ. ದೇಹದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾಗಿದ್ದರಿಂದ ಅವರು ಅಸ್ವಸ್ಥರಾಗಿದ್ದರು ಎಂದು ತಿಳಿಸಿದ್ದಾರೆ.



ದೆಹಲಿ ಜಲ ಮಂಡಳಿ ಟೆಂಡರ್ ಅಕ್ರಮ ಆರೋಪ; ಆಮ್‌ ಆದ್ಮಿ ನಾಯಕ ಸತ್ಯೇಂದ್ರ ಜೈನ್ ಮತ್ತೆ ಬಂಧನ

ತಕ್ಷಣವೇ ಅರ್ಲೇಕರ್ ತಮ್ಮ ವಾಹನದಿಂದ ಇಳಿದು ಗಿರೀಶ್ ಅವರ ಬಳಿಕ ಹೋಗಿ ಅವರಿಗೆ ಅಗತ್ಯ ವೈದ್ಯಕೀಯ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ರಾಜ್ಯಪಾಲರ ಸಿಬ್ಬಂದಿ ಗಿರೀಶ್ ಗೆ ನೀರು ಕೊಟ್ಟು ಉಪಚರಿಸಿದರು ಎಂದರು.

ದೀರ್ಘದೂರ ಪ್ರಯಾಣಿಕರಿಗೆ ಗುಡ್‌ನ್ಯೂಸ್: ಸಂಚಾರಕ್ಕೆ 50 ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸಿದ್ಧ; ಏನಿದರ ವೈಶಿಷ್ಟ್ಯ?

ಗಿರೀಶ್ ಅವರ ಕುಟುಂಬ ಸದಸ್ಯರಿಗೆ ಫೋನ್ ಮಾಡಿ ಮಾಹಿತಿ ನೀಡಲಾಯಿತು. ಅವರು ಹತ್ತಿರದಲ್ಲಿಲ್ಲದ ಕಾರಣ ತಕ್ಷಣ ಅಲ್ಲಿಗೆ ತಲುಪಲು ಸಾಧ್ಯವಾಗಲಿಲ್ಲ. ಹೀಗಾಗಿ ಕುಟುಂಬದವರ ಸಲಹೆ ಪಡೆದು ರಾಜ್ಯಪಾಲರು ಗಿರೀಶ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಆದೇಶಿಸಿದರು. ಬಳಿಕ ಅವರಿಗೆ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆಯೇ ಎಂಬುದನ್ನು ಅಧಿಕಾರಿಗಳಿಂದ ಖಚಿತ ಪಡಿಸಿಕೊಂಡರು. ವೆಲ್ಲಯಂಬಲಂನ ಅಲಥರ ದೇವಿ ದೇವಸ್ಥಾನದ ಬಳಿ ಗಿರೀಶ್ ವಾಸವಾಗಿದ್ದಾರೆ ಎನ್ನಲಾಗಿದೆ ಎಂದು ತಿಳಿಸಿದರು.

ಈ ಘಟನೆ ಕೆಲವೇ ನಿಮಿಷಗಳಲ್ಲಿ ನಡೆದು ಹೋದರು ಗಿರೀಶ್ ಅವರಿಗಾಗಿ ರಾಜ್ಯಪಾಲರು ತಮ್ಮ ಬೆಂಗಾವಲು ಪಡೆಯನ್ನು ನಿಲ್ಲಿಸಿ ವೈಯಕ್ತಿಕವಾಗಿ ಸಹಾಯಕ್ಕೆ ಧಾವಿಸಿದ್ದು ರಾಜ್ಯಾದ್ಯಂತ ಪ್ರಶಂಶೆಗೆ ಪಾತ್ರವಾಗಿದೆ.

ವಿದ್ಯಾ ಇರ್ವತ್ತೂರು

View all posts by this author