ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಹಾಸ್ಟೆಲ್‌ನಲ್ಲಿ ಕಳಪೆ ಆಹಾರ: ಚಿಕನ್ ಕರಿಯಲ್ಲಿ ಸತ್ತ ಹಲ್ಲಿ ಕಂಡು ಬೆಚ್ಚಿಬಿದ್ದ ವಿದ್ಯಾರ್ಥಿಗಳು

Viral Video: ಹೋಟೆಲ್ ಅಥವಾ ರೆಸ್ಟೋರೆಂಟ್‌ನಲ್ಲಿ ನೈರ್ಮಲ್ಯ ಕಾಪಾಡದೇ ಇರುವುದು, ಸುರಕ್ಷತೆ ನಿಯಮಗಳನ್ನು ಉಲ್ಲಂಘನೆ ಮಾಡುವುದು ಹೀಗೆ ದಿನಕ್ಕೊಂದು ಪ್ರಕರಣಗಳು ಕೇಳಿ ಬರುತ್ತಲೇ ಇವೆ. ಇದೀಗ ಹಾಸ್ಟೆಲ್ ಒಂದರಲ್ಲಿ ತಯಾರಿಸಿದ ಕರಿಯಲ್ಲಿ ಸತ್ತ ಹಲ್ಲಿ ಪತ್ತೆಯಾದ ಘಟನೆ ನಡೆದಿದೆ. ಉತ್ತರ ಪ್ರದೇಶದ ಬನಾರಸ್ ಹಿಂದೂ ವಿಶ್ವವಿದ್ಯಾಲಯದ ದಾಲ್ಮಿಯಾ ಹಾಸ್ಟೆಲ್‌ನಲ್ಲಿ ಈ ದೃಶ್ಯ ಕಂಡು ಬಂದಿದೆ.

ಚಿಕನ್ ಕರಿಯಲ್ಲಿ ಹಲ್ಲಿ ಪತ್ತೆಯಾಗಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಯಿತು

ಲಖನೌ, ಮೇ 28: ಇತ್ತೀಚೆಗೆ ಆಹಾರದ ಗುಣಮಟ್ಟ ಕಳಪೆಯಾಗುತ್ತಿರುವ ಅನೇಕ ಘಟನೆಗಳು ನಡೆಯುತ್ತಿವೆ. ಹೋಟೆಲ್ ಅಥವಾ ರೆಸ್ಟೋರೆಂಟ್‌ನಲ್ಲಿ ನೈರ್ಮಲ್ಯ ಕಾಪಾಡದೇ ಇರುವುದು, ಸುರಕ್ಷತೆ ನಿಯಮಗಳನ್ನು ಉಲ್ಲಂಘನೆ ಮಾಡುವುದು ಹೀಗೆ ದಿನಕ್ಕೊಂದು ಪ್ರಕರಣ ಕೇಳಿ ಬರುತ್ತಲೇ ಇವೆ. ಇದೀಗ ಹಾಸ್ಟೆಲ್ ಒಂದರಲ್ಲಿ ತಯಾರಿಸಿದ ಪದಾರ್ಥದಲ್ಲಿ ಸತ್ತ ಹಲ್ಲಿ ಪತ್ತೆಯಾದ ಘಟನೆ ನಡೆದಿದೆ. ಉತ್ತರ ಪ್ರದೇಶದ ಬನಾರಸ್ ಹಿಂದೂ ವಿಶ್ವವಿದ್ಯಾಲಯದ ದಾಲ್ಮಿಯಾ ಹಾಸ್ಟೆಲ್‌ನಲ್ಲಿ ಈ ದೃಶ್ಯ (Viral News) ಕಂಡು ಬಂದಿದೆ. ಸದ್ಯ ಈ ದೃಶ್ಯ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಆಕ್ರೋಶ ಹೊರ ಹಾಕಿದ್ದಾರೆ.

ಈ ಘಟನೆ ನೈರ್ಮಲ್ಯ ಮತ್ತು ಆಹಾರ ಸುರಕ್ಷತೆಯ ಬಗ್ಗೆ ಕಳವಳವನ್ನು ಉಂಟು ಮಾಡಿದೆ. ವಿದ್ಯಾರ್ಥಿಗಳ ಪ್ರಕಾರ, ಹಲ್ಲಿ ಪತ್ತೆಯಾಗುವ ಮೊದಲೇ ಸುಮಾರು 30ರಿಂದ 40 ವಿದ್ಯಾರ್ಥಿಗಳು ಊಟ ಸೇವಿಸಿದ್ದರು. ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆ ವಿದ್ಯಾರ್ಥಿಗಳು ಹಾಸ್ಟೆಲ್ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಿದರು.

ವಿಡಿಯೊ ನೋಡಿ:



ಹಾಸ್ಟೆಲ್ ಮೆಸ್‌ನಲ್ಲಿ ರಾತ್ರಿ ಬಡಿಸಲಾಗಿದ್ದ ಚಿಕನ್ ಕರಿಯಲ್ಲಿ ಹಲ್ಲಿ ಪತ್ತೆಯಾಗಿದೆ‌. ಈ ಆಹಾರ ಸೇವಿಸಿದ್ದ ವಿದ್ಯಾರ್ಥಿಗಳಲ್ಲಿ ವಾಂತಿ ಕಾಣಿಸಿಕೊಂಡಿದ್ದು, ತೀವ್ರ ಅಸ್ವಸ್ಥರಾಗಿದ್ದಾರೆ. ಹಾಸ್ಟೆಲ್‌ನಾದ್ಯಂತ ವಿದ್ಯಾರ್ಥಿಗಳು ಒಟ್ಟಾಗಿ ಮೆಸ್ ಪ್ರದೇಶದ ಹೊರಗೆ ಜಮಾಯಿಸಿ ವಾರ್ಡನ್ ಅನ್ನು ಸುತ್ತುವರಿದರು.

ವಧುವಿನ ಲೆಹೆಂಗಾ ಹಿಡಿದುಕೊಂಡು ಸಪ್ತಪದಿ ತುಳಿಯಲು ಮುಂದಾದ ಸ್ನೇಹಿತೆಯರು

ಮೆಸ್ ಗುತ್ತಿಗೆದಾರ ಮತ್ತು ಹಾಸ್ಟೆಲ್ ಆಡಳಿತದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಹಲವರು ಒತ್ತಾಯಿಸಿದರು. ಕಳಪೆ ಆಹಾರದ ಗುಣಮಟ್ಟ ಬಗ್ಗೆ ನೆಟ್ಟಿಗರು ಕಿಡಿಕಾರಿದ್ದು ಹಾಸ್ಟೆಲ್‌ನ ವಿಡಿಯೊಗಳು ಮತ್ತು ಫೋಟೊಗಳು ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿವೆ. ವಿದ್ಯಾರ್ಥಿಗಳು ಈ ವಿಷಯದ ಬಗ್ಗೆ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸುತ್ತಿರುವುದು ಕಂಡು ಬಂದಿದೆ. ಸರಿಯಾದ ಕುಡಿಯುವ ನೀರಿನ ಸೌಲಭ್ಯಗಳ ಕೊರತೆ ಮತ್ತು ಹಾಸ್ಟೆಲ್ ಆವರಣದೊಳಗೆ ಕಳಪೆ ನಿರ್ವಹಣೆ ಸೇರಿ ಹಲವುಸಮಸ್ಯೆಗಳ ಬಗ್ಗೆಯೂ ದೂರು ಕೇಳಿ ಬಂದಿದೆ.

ಈ ವಿಡಿಯೊ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಕಮೆಂಟ್ ಮಾಡಿದ್ದಾರೆ. ನೆಟ್ಟಿಗರೊಬ್ಬರು, ʼʼವಿದ್ಯಾರ್ಥಿಗಳ ಆರೋಗ್ಯದ ಜತೆ ಚೆಲ್ಲಾಟವಾಡುತ್ತಿರುವ ಹಾಸ್ಟೆಲ್ ವಿರುದ್ಧ ಕ್ರಮ ಕೈಗೊಳ್ಳಬೇಕುʼʼ ಎಂದು ಆಗ್ರಹಿಸಿದ್ದಾರೆ. ಮತ್ತೊಬ್ಬರು, ʼʼಹಾಸ್ಟೆಲ್‌ ಕರಿಯಲ್ಲಿ ಕಂಡು ಬರುವ ಪ್ರೋಟೀನ್ʼʼ ಎಂದು ತಮಾಷೆ ಮಾಡಿದ್ದಾರೆ.