Viral Video: ರೈಲ್ವೆ ನಿಲ್ದಾಣದಲ್ಲಿ ಮಹಿಳೆಯರ ಮುಂದೆಯೇ ಹಸ್ತಮೈಥುನ ಮಾಡಿಕೊಂಡ ಕಿಡಿಗೇಡಿ; ವಿಡಿಯೊ ವೈರಲ್
ಪಶ್ಚಿಮ ಬಂಗಾಳದ ಬೇಗಂಪುರ್ ರೈಲ್ವೆ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಮಹಿಳೆಯರ ಎದುರೇ ಹಸ್ತಮೈಥುನ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದ್ದು, ಈ ವಿಡಿಯೊ ಸೋಶಿಯಲ್ ಮಿಡಿಯಾದಲ್ಲಿ ವೈರಲ್(viral Video) ಆಗಿದೆ. ವಿಡಿಯೊ ನೋಡಿದ ನೆಟ್ಟಿಗರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.


ಕೋಲ್ಕತ್ತಾ: ಇತ್ತೀಚೆಗೆ ಪಶ್ಚಿಮ ಬಂಗಾಳದ ಬೇಗಂಪುರ್ ರೈಲ್ವೆ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಮಹಿಳೆಯರ ಎದುರೇ ಹಸ್ತಮೈಥುನ ಮಾಡಿಕೊಂಡಿರುವ ಆಘಾತಕಾರಿ ಘಟನೆ ವರದಿಯಾಗಿದೆ. ಅಸಹ್ಯಕರ ಕೃತ್ಯದಲ್ಲಿ ತೊಡಗಿರುವ ವ್ಯಕ್ತಿಯ ವಿಡಿಯೊ ಸೋಶಿಯಲ್ ಮಿಡಿಯಾಗಳಲ್ಲಿ ಕಾಣಿಸಿಕೊಂಡಿದ್ದು ಈ ವಿಡಿಯೊ ವೈರಲ್ ಆಗಿ ಜನರ ಆಕ್ರೋಶಕ್ಕೆ ಕಾರಣವಾಗಿದೆ. ವೈರಲ್ ವಿಡಿಯೊದಲ್ಲಿ ವ್ಯಕ್ತಿ ಇನ್ನೊಂದು ಬದಿಯ ಪ್ಲಾಟ್‍ಫಾರ್ಮ್‍ನಲ್ಲಿ ನಿಂತಿರುವ ಮಹಿಳೆಯರನ್ನು ದಿಟ್ಟಿಸಿ ನೋಡುತ್ತ ಹಸ್ತಮೈಥುನ ಮಾಡಿಕೊಂಡಿದ್ದಾನೆ. ಈ ವಿಡಿಯೊವನ್ನು ಅಲ್ಲಿದ್ದ ವ್ಯಕ್ತಿಯೊಬ್ಬ ರೆಕಾರ್ಡ್ ಮಾಡಿದ್ದಾನೆ. ನಂತರ ವಿಡಿಯೊವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾನೆ. ಇದು ಈಗ ವೈರಲ್(Viral Video) ಆಗಿದೆ.
ಈ ಘಟನೆಯು ರೈಲ್ವೆ ನಿಲ್ದಾಣದಲ್ಲಿ ಮಹಿಳೆಯರ ಸುರಕ್ಷತೆಯ ಕೊರತೆಯ ಬಗ್ಗೆ ಕಳವಳವನ್ನು ಹೆಚ್ಚಿಸಿದೆ. ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ನಂತರ ನೆಟ್ಟಿಗರು ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಭಾರತೀಯ ರೈಲ್ವೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದೆ ಎನ್ನಲಾಗಿದೆ.
ಘಟನೆ ವಿಡಿಯೊ ಇಲ್ಲಿದೆ ನೋಡಿ
West Bengal, Hooghly, Singur, Begumpur station 15.03.2025 morning. Is this Tahrush? Happens when peacefools R nearby 40%. Ur adult enough to understand what he's doing, seeing whom. Identity of both can be understood. Arrest this nonsense @RailMinIndia @RPF_INDIA @WBPolice pic.twitter.com/B7laJ1CipK
— Rajarshi Lahiri (Raj) (@rajarshilahiri) March 15, 2025
ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ಈಸ್ಟರ್ನ್ ರೈಲ್ವೆ ಕೋಲ್ಕತಾ ಈ ವಿಡಿಯೊಗೆ ಪ್ರತಿಕ್ರಿಯಿಸಿ, "ದೂರನ್ನು ಸ್ವೀಕರಿಸಲಾಗಿದೆ ಮತ್ತು ಅಗತ್ಯ ಕ್ರಮಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಕಳುಹಿಸಲಾಗಿದೆ. ದೂರು ಸಂಖ್ಯೆ. ಇಆರ್-228 @rpferhwh. ದಯವಿಟ್ಟು ಈ ವಿಷಯವನ್ನು ಪರಿಶೀಲಿಸಿ ಎಟಿಆರ್ ಸಲ್ಲಿಸಿ.” ಎಂದು ತಿಳಿಸಿದೆ.
ಈ ಸುದ್ದಿಯನ್ನೂ ಓದಿ:Obscene Video: ತರಗತಿಯಲ್ಲೇ ಕುಳಿತು ಅಶ್ಲೀಲ ವಿಡಿಯೊ ವೀಕ್ಷಿಸಿದ ಮಾನಗೆಟ್ಟ ಶಿಕ್ಷಕ; ನೋಡಿ ನಕ್ಕ ವಿದ್ಯಾರ್ಥಿಗೆ ಹಿಗ್ಗಾಮುಗ್ಗಾ ಥಳಿತ!
ಇಂತಹ ಘಟನೆ ರೈಲ್ವೆ ನಿಲ್ದಾಣದಲ್ಲಿ ನಡೆದಿದ್ದು ಇದೇ ಮೊದಲಲ್ಲ. ಈ ಹಿಂದೆ ಪಶ್ಚಿಮ ಬಂಗಾಳದ ಮಹಿಳೆಯೊಬ್ಬಳು ರೈಲ್ವೆ ನಿಲ್ದಾಣದ ಪ್ಲಾಟ್‍ಫಾರ್ಮ್‍ನಲ್ಲಿ ಹಸ್ತಮೈಥುನ ಮಾಡುತ್ತಿರುವ ವ್ಯಕ್ತಿಯ ವಿಡಿಯೊವನ್ನು ಸೋಶಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಳು. ಹೌರಾಗೆ ಹೋಗುವ ಸ್ಥಳೀಯ ರೈಲು ಬಂದೇಲ್ ನಿಲ್ದಾಣದಿಂದ ಹೊರಡುವ ಸ್ವಲ್ಪ ಮೊದಲು ಆ ವ್ಯಕ್ತಿ ಮಹಿಳಾ ಬೋಗಿಯ ಹೊರಗೆ ಹಸ್ತಮೈಥುನ ಮಾಡಿದ್ದಾನಂತೆ. ಅವಳು ರೈಲಿನಿಂದ ಇಳಿದು ಆ ವ್ಯಕ್ತಿಯನ್ನು ತರಾಟೆಗೆ ತೆಗದುಕೊಂಡಿದ್ದಾಳೆ ಆದರೆ ಪೊಲೀಸರು ಅವನನ್ನು ಹಿಡಿಯುವ ಮೊದಲು ಆ ವ್ಯಕ್ತಿ ತಪ್ಪಿಸಿಕೊಂಡಿದ್ದಾನೆ. ರೈಲ್ವೆ ಪೊಲೀಸ್ ಅಧಿಕಾರಿಯೊಬ್ಬರು ಆ ವ್ಯಕ್ತಿ ಮಾನಸಿಕವಾಗಿ ಅಸ್ವಸ್ಥ ಎಂಬುದಾಗಿ ತಿಳಿಸಿದ್ದಾರೆ. ರೈಲ್ವೆ ಪೊಲೀಸರು ಬುರ್ದ್ವಾನ್ ಜಿಆರ್‌ಪಿಗೆ ಮಾಹಿತಿ ನೀಡಿದರೂ ಕೂಡ ಆ ವ್ಯಕ್ತಿ ಪತ್ತೆಯಾಗಿರಲಿಲ್ಲವಂತೆ.