Viral Video: ರೈಲಿನಲ್ಲಿ ಮರ್ಮಾಂಗ ತೋರಿಸಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಇಬ್ರಾಹಿಂ ಅರೆಸ್ಟ್
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮೊಹಮ್ಮದ್ ಇಬ್ರಾಹಿಂ ಎಂಬ ವೃದ್ಧ ಮುಸ್ಲಿಂ ವ್ಯಕ್ತಿ ತನ್ನ ಎದುರಿಗೆ ಕುಳಿತ 15 ವರ್ಷದ ಬಾಲಕಿಗೆ ಮರ್ಮಾಂಗ ತೋರಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಇದನ್ನು ಆಕೆ ವಿಡಿಯೊ ಮಾಡಿದ್ದು, ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.


ಅಗರ್ತಲ: ಇತ್ತೀಚೆಗೆ ತ್ರಿಪುರಾದಲ್ಲಿ ರೈಲಿನಲ್ಲಿ ಪ್ರಯಾಣಿಸುತ್ತ ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬ 15 ವರ್ಷದ ಬಾಲಕಿಗೆ ತನ್ನ ಮರ್ಮಾಂಗ ತೋರಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಇದರಿಂದ ಕೋಪಗೊಂಡ ಬಾಲಕಿ ತನ್ನ ಚಪ್ಪಲಿಯಿಂದ ಆ ವ್ಯಕ್ತಿಗೆ ಹೊಡೆದಿದ್ದಾಳೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆರೋಪಿಯನ್ನು ಅಮರಪುರ ನಿವಾಸಿ ಮೊಹಮ್ಮದ್ ಇಬ್ರಾಹಿಂ ಎಂದು ಗುರುತಿಸಲಾಗಿದ್ದು, ಆತನನ್ನು ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್ಪಿ) ತ್ರಿಪುರಾದ ಧರ್ಮನಗರ ಪಟ್ಟಣದಲ್ಲಿ ಬಂಧಿಸಿದ್ದಾರೆ. ಈ ವ್ಯಕ್ತಿ ಅಪ್ರಾಪ್ತ ಬಾಲಕಿಯ ಕಡೆಗೆ ಅಶ್ಲೀಲ, ಲೈಂಗಿಕ ಸೂಚನೆ ನೀಡುವ ಸನ್ನೆಗಳನ್ನು ಮಾಡುತ್ತಿದ್ದ ಕಾರಣ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವರದಿಗಳ ಪ್ರಕಾರ, ರೈಲು ಸುರಂಗದ ಮೂಲಕ ಹಾದುಹೋದಾಗ, ಈ ಅವಕಾಶವನ್ನು ಬಳಸಿಕೊಂಡ ಆತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಮೊಹಮ್ಮದ್ ಇಬ್ರಾಹಿಂ ಅಶ್ಲೀಲ, ಲೈಂಗಿಕ ಸನ್ನೆಗಳನ್ನು ಮಾಡಿದ ಘಟನೆಯ ವಿಡಿಯೊವನ್ನು ಸಂತ್ರಸ್ತೆ ರೆಕಾರ್ಡ್ ಮಾಡಿ ತನ್ನ ಸಹೋದರನಿಗೆ ಕಳುಹಿಸಿದ್ದಾಳೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಷಯ ಇತರ ಪ್ರಯಾಣಿಕರ ಗಮನಕ್ಕೆ ಬಂದಿದ್ದರಿಂದ ಅವರು ಆರೋಪಿಯನ್ನು ಹಿಡಿದು ಕಪಾಳಮೋಕ್ಷ ಮಾಡಿದ್ದಾರೆ. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಕ್ಕಾಗಿ ಮಹಿಳೆಯೊಬ್ಬಳು ಇಬ್ರಾಹಿಂಗೆ ಚಪ್ಪಲಿಯಿಂದ ಹೊಡೆದಿದ್ದಾಳೆ.
ವಿಡಿಯೊ ಇಲ್ಲಿದೆ ನೋಡಿ...
ಈ ಘಟನೆಯ ಬಗ್ಗೆ ಸರ್ಕಾರಿ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದು, ರೈಲು ಧರ್ಮನಗರ ಪಟ್ಟಣವನ್ನು ತಲುಪಿದ ನಂತರ, ಆರೋಪಿಯನ್ನು ರೈಲಿನಿಂದ ಇಳಿಸಿ ಸರ್ಕಾರಿ ರೈಲ್ವೆ ಪೊಲೀಸರಿಗೆ (GRP) ಒಪ್ಪಿಸಲಾಗಿದೆ.
ಈ ಸುದ್ದಿಯನ್ನೂ ಓದಿ:Viral Video: ವೆಡ್ಡಿಂಗ್ ಫೋಟೊಗ್ರಾಫರ್ನ ಈ ಟ್ರಿಕ್ಸ್ ನೋಡಿ ನೆಟ್ಟಿಗರು ಫುಲ್ ಫಿದಾ!
ರೈಲಿನಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು ಇದೇ ಮೊದಲಲ್ಲ. ಈ ಹಿಂದೆ ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಟಿಕೆಟ್ ಪರೀಕ್ಷಕನೊಬ್ಬನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ ಆತನನ್ನು ಬಂಧಿಸಿದ್ದರು.