Viral Video: ಹಸುವಿನ ಮೇಲೆ ಅತ್ಯಾಚಾರ ಎಸಗಿ ವಿಕೃತಿ ಮೆರೆದ ಕಿಡಿಗೇಡಿ; ಪೊಲೀಸರ ಕೈಗೆ ಸಿಕ್ಕಿಬೀಳ್ತಿದ್ದಂತೆ ಈತ ಮಾಡಿದ್ದೇನು ಗೊತ್ತಾ?
ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ರಾಮ್ ಬಹದ್ದೂರ್ ಎಂಬ ವ್ಯಕ್ತಿ ಹಸುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್(Viral Video)ಆಗಿದೆ. ಈ ವಿಡಿಯೊ ಸದರ್ ಪೊಲೀಸ್ ಠಾಣೆಯ ಪೊಲೀಸರ ಗಮನಕ್ಕೆ ಬಂದಿದ್ದು, ನಂತರ ಆರೋಪಿಯನ್ನು ಬಂಧಿಸಲು ಹೋದಾಗ ಆತ ಪೊಲೀಸರ ಮೇಲೆ ದಾಳಿ ಮಾಡಿದ್ದಾನೆ. ಕೊನೆಗೆ ಪೊಲೀಸರು ಪ್ರತಿದಾಳಿ ಮಾಡಿ ಆತನನ್ನು ಬಂಧಿಸಿದ್ದಾರೆ.


ಲಖನೌ: ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ವ್ಯಕ್ತಿಯೊಬ್ಬ ಹಸುವಿನ ಮೇಲೆ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಘಟನೆ ನಡೆದ ಕೆಲವೇ ಗಂಟೆಗಳ ನಂತರ, ಹಸುವಿನ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಲು ಬಂದಾಗ ಆತ ಪೊಲೀಸರ ಮೇಲೆ ಗುಂಡು ಹಾರಿಸಿದ್ದಾನೆ. ಇದರಿಂದ ಪೊಲೀಸರು ಗಾಯಗೊಂಡಿದ್ದು, ನಂತರ ಪೊಲೀಸರು ಆತನ ಮೇಲೆ ಪ್ರತಿದಾಳಿ ನಡೆಸಿ ಬಂಧಿಸಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ. ಗಾಯಗೊಂಡ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಆರೋಪಿಯ ಹೆಸರು ರಾಮ್ ಬಹದ್ದೂರ್ ಎಂದು ಹೇಳಲಾಗಿದ್ದು, ಈತ ಸದರ್ ಪೊಲೀಸ್ ಠಾಣೆ ಪ್ರದೇಶದ ನವಾಡಾ ರಸ್ತೆಯ ನಿವಾಸಿ. ಈತ ಸಹರಾನ್‌ಪುರದಲ್ಲಿ ಹಸುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದ್ದು, ಅದರಲ್ಲಿ ರಾಮ್ ಬಹದ್ದೂರ್ ಹಸುವಿನ ಜೊತೆ ಕ್ರೂರವಾಗಿ ವರ್ತಿಸುವುದು ಕಂಡುಬಂದಿದೆ. ಈ ವಿಡಿಯೊ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆದ ತಕ್ಷಣ ಆರೋಪಿಯ ವಿರುದ್ಧ ಕಾನೂನು ಕ್ರಮ ಮತ್ತು ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.
ವಿಡಿಯೊ ಇಲ್ಲಿದೆ ನೋಡಿ...
सहारनपुर में राम बहादुर ने एक गाय के साथ दुष्कर्म किया।
— Malwin yadav 🇮🇳 (@KumarMalwin) July 14, 2025
ये दुनिया रहने लाइक नहीं रहा अब pic.twitter.com/40eyxN9kqj
ವಿಡಿಯೊ ವೈರಲ್ ಆದ ನಂತರ, ವಿಡಿಯೊದಲ್ಲಿರುವ ಆರೋಪಿಯನ್ನು ಸದರ್ ಪೊಲೀಸ್ ಠಾಣೆಯ ಪೊಲೀಸರು ಗುರುತಿಸಿದ್ದು, ಆರೋಪಿಯನ್ನು ನವಾಡಾ ರಸ್ತೆಯ ನಿವಾಸಿ ರಾಮ್ ಬಹದ್ದೂರ್ ಎಂದು ಗುರುತಿಸಿದ್ದಾರೆ. ನಂತರ ಪೊಲೀಸರು ಆತನನ್ನು ಹುಡುಕಲು ಶುರುಮಾಡಿದಾಗ ತನಿಖೆಯ ಸಮಯದಲ್ಲಿ, ದೆಹಲಿ ರಸ್ತೆಯಲ್ಲಿ ಅನುಮಾನಾಸ್ಪದ ವ್ಯಕ್ತಿಯ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತು. ಮಾಹಿತಿ ಪಡೆದ ನಂತರ, ಸದರ್ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ತಲುಪಿದಾಗ ಆರೋಪಿ ಪೊಲೀಸ್ ತಂಡದ ಮೇಲೆ ಗುಂಡು ಹಾರಿಸಿದ್ದಾನೆ. ನಂತರ ಪೊಲೀಸರು ಸಹ ಪ್ರತಿದಾಳಿ ನಡೆಸಿ ಗುಂಡು ಹಾರಿಸಿದರು. ಇದರಲ್ಲಿ ಆರೋಪಿ ರಾಮ್ ಬಹದ್ದೂರ್ ಕಾಲಿಗೆ ಗುಂಡು ತಗುಲಿ ಗಾಯಗೊಂಡು ನೆಲಕ್ಕೆ ಬಿದ್ದಿದ್ದಾನೆ. ಪೊಲೀಸರು ಗಾಯಗೊಂಡ ರಾಮ್ ಬಹದ್ದೂರ್ ಅವನನ್ನು ಬಂಧಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಸುದ್ದಿಯನ್ನೂ ಓದಿ:Viral Video: ಸ್ಮಶಾನದಲ್ಲಿ ವಿವಾಹಿತ ಮಹಿಳೆಯೊಂದಿಗೆ ಬಿಜೆಪಿ ನಾಯಕನ ರಾಸಲೀಲೆ; ಕ್ಯಾಮರಾ ಕಣ್ಣಲ್ಲಿ ಸೆರೆ
ಮೂಕ ಪ್ರಾಣಿಗಳ ಮೇಲೆ ಇಂತಹ ದುಷ್ಕೃತ್ಯ ಎಸಗಿದ ಘಟನೆ ನಡೆದಿದ್ದು ಇದೇ ಮೊದಲಲ್ಲ. ಈ ಹಿಂದೆ ಎರಡು ತಿಂಗಳ ಕರುವಿನ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 35 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿತ್ತು.ಈ ಕರು ಸೆಹ್ರಾಮೌನ ಚಾನ್‌ಪುರ ಗ್ರಾಮದ ನಿವಾಸಿ ಧರಾ ಸಿಂಗ್‌ಗೆ ಸೇರಿದ್ದು, ರಾತ್ರಿ ಸಮಯದಲ್ಲಿ ಅದೇ ಗ್ರಾಮದ ನಿವಾಸಿ ರಾಮಪ್ರಸಾದ್ (35) ಎಂಬಾತ ಅದರ ಮೇಲೆ ಅತ್ಯಾಚಾರ ಎಸಗಿದ್ದನು. ಆರೋಪಿಯನ್ನು ಈ ಕೃತ್ಯ ಎಸಗುವಾಗ ರೆಡ್‍ಹ್ಯಾಂಡ್ ಆಗಿ ಹಿಡಿದ ನಂತರ ಸ್ಥಳೀಯ ನಿವಾಸಿಗಳು ಅವನನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದರು. ಪಶುವೈದ್ಯರು ಕರುವಿನ ಮೇಲೆ ವೈದ್ಯಕೀಯ ಪರೀಕ್ಷೆ ನಡೆಸಿ ಅತ್ಯಾಚಾರ ದೃಢಪಟ್ಟ ನಂತರ ಆರೋಪಿಯನ್ನು ಜೈಲಿಗೆ ಕಳುಹಿಸಲಾಗಿತ್ತು.