ಕರ್ನಾಟಕ ಬಜೆಟ್​ ವಿದೇಶ ಮಹಿಳಾ ದಿನಾಚರಣೆ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Viral Video: ಚಲಿಸುತ್ತಿದ್ದ ರೈಲಿನಲ್ಲಿ ಸ್ಟಂಟ್ ಮಾಡಿ ಜಾರಿಬಿದ್ದ ವ್ಯಕ್ತಿ; ಇದೆಂಥಾ ಹುಚ್ಚುತನ...? ವಿಡಿಯೊ ನೋಡಿ

ಕಾಸ್ಗಂಜ್‍ನಿಂದ ಕಾನ್ಪುರಕ್ಕೆ ವೇಗವಾಗಿ ಚಲಿಸುತ್ತಿದ್ದ ರೈಲಿನ ಕಿಟಕಿಯ ಹೊರಭಾಗದಲ್ಲಿ ಯುವಕನೊಬ್ಬ ನೇತಾಡುತ್ತಾ ಹೋಗಿ ನಂತರ ಕೆಳಗೆ ಬಿದ್ದಿದ್ದಾನೆ. ಈ ಆಘಾತಕಾರಿ ವಿಡಿಯೊ ಸೋಶಿಯಲ್ ಮಿಡಿಯಾದಲ್ಲಿ ವೈರಲ್(Viral Video) ಆಗಿದೆ. ಅದೃಷ್ಟವಶಾತ್, ರೈಲು ಅಷ್ಟರಲ್ಲೇ ನಿಂತಿದ್ದರಿಂದ ದೊಡ್ಡ ಅಪಘಾತ ತಪ್ಪಿದೆ ಮತ್ತು ವ್ಯಕ್ತಿಗೆ ಯಾವುದೇ ರೀತಿಯ ತೀವ್ರವಾದ ಗಾಯಗಳಾಗಲಿಲ್ಲ.

ಚಲಿಸುತ್ತಿದ್ದ ರೈಲಿನ ಕಿಟಕಿಯಲ್ಲಿ ನೇತಾಡಿದ ಯುವಕ; ಕೊನೆಗೆ ಆಗಿದ್ದೇನು?

Profile pavithra Mar 11, 2025 4:17 PM

ನವದೆಹಲಿ: ಜನರು ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಲು ರೀಲ್ಸ್ ತಯಾರಿಸಲು ಅಪಾಯಕಾರಿ ಸ್ಟಂಟ್ ಮಾಡಿ ಜೀವಕ್ಕೆ ಆಪತ್ತು ತಂದುಕೊಳ್ಳುತ್ತಿದ್ದಾರೆ. ಇತ್ತೀಚೆಗೆ ರೀಲ್ಸ್ ಕ್ರೇಜ್‌ಗೆ ಬಿದ್ದು ಚಲಿಸುತ್ತಿದ್ದ ರೈಲಿನಲ್ಲಿ ಡ್ಯಾನ್ಸ್‌, ಸ್ಟಂಟ್‌ ಮಾಡುವಂತಹ ಹಲವಾರು ಅಪಾಯಕಾರಿ ವಿಡಿಯೊಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿವೆ. ಇದರಿಂದ ಅನೇಕ ಸಾವು ನೋವುಗಳು ಸಂಭವಿಸಿತ್ತು. ಇದೀಗ ವೇಗವಾಗಿ ಚಲಿಸುತ್ತಿದ್ದ ರೈಲಿನ ಕಿಟಕಿಯ ಹೊರಭಾಗದಲ್ಲಿ ಯುವಕನೊಬ್ಬ ನೇತಾಡುತ್ತಾ ಹೋಗಿ ನಂತರ ಕೆಳಗೆ ಬಿದ್ದಿದ್ದಾನೆ. ಈ ಆಘಾತಕಾರಿ ವಿಡಿಯೊ ಸೋಶಿಯಲ್ ಮಿಡಿಯಾದಲ್ಲಿ ವೈರಲ್(Viral Video) ಆಗಿದೆ.

ವೈರಲ್ ಆದ ವಿಡಿಯೊದಲ್ಲಿ ವ್ಯಕ್ತಿಯೊಬ್ಬ ರೈಲಿನಲ್ಲಿ ಅಪಾಯಕಾರಿ ಸ್ಟಂಟ್ ಮಾಡಲು ಸಹ ಪ್ರಯಾಣಿಕನ ಕೈ ಹಿಡಿದು ಚಲಿಸುತ್ತಿದ್ದ ರೈಲಿನ ಕಿಟಿಕಿಯ ಬಳಿ ನೇತಾಡಿದ್ದಾನೆ. ಸ್ವಲ್ಪ ಸಮಯದವರೆಗೆ ನೇತಾಡಿದ ನಂತರ ಆತ ರೈಲಿನಿಂದ ಜಿಗಿದು ಕೆಳಗೆ ಬಿದ್ದಿದ್ದಾನೆ. ಅದೃಷ್ಟವಶಾತ್, ರೈಲು ಅಷ್ಟರಲ್ಲೇ ನಿಂತಿದ್ದರಿಂದ ದೊಡ್ಡ ಅಪಘಾತ ತಪ್ಪಿದೆ ಮತ್ತು ವ್ಯಕ್ತಿಗೆ ಯಾವುದೇ ರೀತಿಯ ತೀವ್ರವಾದ ಗಾಯಗಳಾಗಲಿಲ್ಲವಂತೆ.

ರೈಲಿನಲ್ಲಿ ಅಪಾಯಕಾರಿ ಸ್ಟಂಟ್‌ನ ವಿಡಿಯೊ ಇಲ್ಲಿದೆ:



ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ಮೈಕ್ರೋ-ಬ್ಲಾಗಿಂಗ್ ವೆಬ್‌ಸೈಟ್‌ ಈ ವಿಡಿಯೊಗೆ ಕಾನ್ಪುರದ ಎಡಿಜಿ ಸರ್ಕಾರಿ ರೈಲ್ವೆ ಪೊಲೀಸ್ ಯುಪಿ (ಜಿಆರ್‌ಪಿ) ಅನ್ನು ಟ್ಯಾಗ್ ಮಾಡಿ ಈ ವಿಷಯವನ್ನು ಪರಿಶೀಲಿಸುವಂತೆ ನಿರ್ದೇಶನ ನೀಡಿದ್ದಾರೆ. ನಂತರ ಜಿಆರ್‌ಪಿ ಯುಪಿ ಎಸ್‍ಪಿ ಜಿಆರ್‌ಪಿ ಆಗ್ರಾ ಅವರನ್ನು ಟ್ಯಾಗ್ ಮಾಡಿ ಈ ವಿಷಯವನ್ನು ಪರಿಶೀಲಿಸಲು ನಿರ್ದೇಶನ ನೀಡಿದೆ. ಆಗ್ರಾ ಎಸ್‌ಪಿ ತಕ್ಷಣ ಪ್ರತಿಕ್ರಿಯಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಆರ್‌ಪಿ ಫರೂಕಾಬಾದ್ ಪೊಲೀಸ್ ಠಾಣೆಗೆ ನಿರ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ. ಆದರೆ ಇಲ್ಲಿಯವರೆಗೆ ಈ ವಿಷಯದಲ್ಲಿ ಯಾವುದೇ ಪೊಲೀಸ್ ಕ್ರಮ ಕೈಗೊಂಡ ಬಗ್ಗೆ ವರದಿಯಾಗಿಲ್ಲ.

ಈ ಸುದ್ದಿಯನ್ನೂ ಓದಿ:ರೀಲ್ಸ್‌ ಗೀಳು ತಂದ ಆಪತ್ತು; ರೈಲು ಡಿಕ್ಕಿಯಾಗಿ ಮೂವರು ಯುವಕರ ಸಾವು

ಇತ್ತೀಚೆಗೆ ರೀಲ್ಸ್​ ಮಾಡುವಾಗ ರೈಲು ಡಿಕ್ಕಿ ಹೊಡೆದು ಉತ್ತರ ಪ್ರದೇಶ ಮೂಲದ ಮೂವರು ಕಾರ್ಮಿಕರು ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದ ಸಿದ್ದೆನಾಯಕನಹಳ್ಳಿ ರೈಲ್ವೆ ಹಳಿ ಬಳಿ ನಡೆದಿದೆ. ಮೃತರನ್ನು ರಾಹುಲ್ (18), ಬಿಕೇಶ್ (20) ಮತ್ತು ಲಲನ್ (24) ಎಂದು ಗುರುತಿಸಲಾಗಿದೆ. ಯಶವಂತಪುರ ರೈಲ್ವೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಈ ಮೃತ ಯುವಕರು ಕಾರ್ಪೆಂಟರ್ ಕೆಲಸ ಮಾಡುತ್ತಿದ್ದರು.

ಸಂಜೆ ಕೆಲಸ ಮುಗಿಸಿಕೊಂಡು ರೈಲ್ವೆ ಹಳಿ ಬಳಿ ಬಂದು ರೀಲ್ಸ್ ಮಾಡುತ್ತಿದ್ದಾಗ ರೈಲು ಡಿಕ್ಕಿಯಾಗಿ ಯುವಕರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ರೈಲು ಡಿಕ್ಕಿ ಹೊಡೆದ ರಭಸಕ್ಕೆ ಹಳಿಗಳ ಮೇಲೆ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸತ್ಯ ಸಾಯಿ ಪ್ಯಾಸೆಂಜರ್ ರೈಲು ಡಿಕ್ಕಿ ಹೊಡೆದಿರುವ ಶಂಕೆ ವ್ಯಕ್ತವಾಗಿದೆ. ಹಳಿ ಮೇಲಿದ್ದ ಮೃತದೇಹಗಳನ್ನ ಕಂಡು ಸ್ಥಳಿಯರಿಂದ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ವೇಳೆ ಘಟನೆ ಬೆಳಕಿಗೆ ಬಂದಿದೆ.