ಕರ್ನಾಟಕ ಬಜೆಟ್​ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Viral News: ನಡುರಸ್ತೆಯಲ್ಲಿ ವ್ಯಕ್ತಿಯನ್ನು ಚಾಕುವಿನಿಂದ ಇರಿದು ಕೊಂದ ಮಂಗಳಮುಖಿಯರು- ಶಾಕಿಂಗ್‌ ವಿಡಿಯೊ ಎಲ್ಲೆಡೆ ವೈರಲ್‌

ಆರು ಮಂಗಳಮುಖಿಯರು ಸೇರಿಕೊಂಡು ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿ ಚಾಕುವಿನಿಂದ ಇರಿದು ಕೊಂದಿರುವ ಆಘಾತಕಾರಿ ಘಟನೆಯ ವಿಡಿಯೊವೊಂದು ಸೋಶಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡು ವೈರಲ್(Viral Video) ಆಗಿದೆ. ಈ ಘಟನೆ ಮಧ್ಯಪ್ರದೇಶದ ಭೋಪಾಲ್‍ನಲ್ಲಿ ನಡೆದಿರುವುದಾಗಿ ತಿಳಿದುಬಂದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈವರೆಗೆ ಇಬ್ಬರು ಮಂಗಳಮುಖಿಯರನ್ನು ಬಂಧಿಸಿದ್ದಾರೆ.

ನಡುರಸ್ತೆಯಲ್ಲಿ  ಮಂಗಳಮುಖಿಯರು ಮಾಡಿದ ಕೃತ್ಯವೇನು ನೋಡಿ!

Profile pavithra Mar 22, 2025 1:07 PM

ಭೋಪಾಲ್‍: ಸೋಶಿಯಲ್ ಮಿಡಿಯಾಗಳಲ್ಲಿ ಆಗಾಗ ಹಲವು ಘಟನೆಗಳು ವಿಡಿಯೊ ವೈರಲ್ ಆಗುತ್ತಿರುತ್ತದೆ. ಇದೀಗ ಆರು ಮಂಗಳಮುಖಿಯರು ಸೇರಿಕೊಂಡು ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿ ಚಾಕುವಿನಿಂದ ಇರಿದು ಕೊಂದಿರುವ ಆಘಾತಕಾರಿ ಘಟನೆಯ ವಿಡಿಯೊವೊಂದು ಸೋಶಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡು ವೈರಲ್(Viral Video) ಆಗಿದೆ. ಈ ದುರಂತ ಘಟನೆ ಮಧ್ಯಪ್ರದೇಶದ ಭೋಪಾಲ್‍ನಲ್ಲಿ ನಡೆದಿದೆಯಂತೆ. ಭೋಪಾಲ್‍ನ ತೆಲೈಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಕ್ರೂರ ಕೊಲೆ ನಡೆದಿದ್ದು, ಇದರಲ್ಲಿ ಆರು ಮಂಗಳಮುಖಿಯರನ್ನೊಳಗೊಂಡ ಗುಂಪು ರಸ್ತೆಯಲ್ಲಿ ಯುವಕನನ್ನು ಕೊಂದಿದೆ. ಮೃತನನ್ನು ಆದಿಲ್ ಖಾನ್ (23) ಎಂದು ಗುರುತಿಸಲಾಗಿದೆ. ಹಳೆಯ ದ್ವೇಷದಿಂದಾಗಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.

ದಾಳಿಕೋರರು ಚಾಕುವಿನಿಂದ ಅವನ ಕತ್ತು ಸೀಳಿ, ಅವನ ಎರಡೂ ಮಣಿಕಟ್ಟುಗಳನ್ನು ಕತ್ತರಿಸಿ, ಎದೆಗೆ ಇರಿದಿದ್ದಾರೆ. ಇದರಿಂದ ಆತ ಸ್ಥಳದಲ್ಲೇ ಸಾವನಪ್ಪಿದ್ದಾನೆ. ಹಾಗೇ ಮಂಗಳಮುಖಿಯರು ಮತ್ತು ಇನ್ನೊಬ್ಬ ವ್ಯಕ್ತಿ ಸಂತ್ರಸ್ತನ ಮೇಲೆ ಹಲ್ಲೆ ನಡೆಸಿದ್ದ ಘಟನೆಯ ವಿಡಿಯೊವೊಂದು ಕೂಡ ವೈರಲ್‌ ಆಗಿತ್ತು. ಘಟನೆಯಲ್ಲಿ ಇಬ್ಬರು ಆರೋಪಿಗಳಾದ ನವಾಬ್ ಮತ್ತು ಅಲ್ಬಿರಾ ಕೂಡ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ನಂತರ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ.

ಘಟನೆಗೆ ಸಂಬಂಧಿಸಿದ ವಿಡಿಯೊ ಇಲ್ಲಿದೆ



ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈವರೆಗೆ ಇಬ್ಬರು ಮಂಗಳಮುಖಿಯರನ್ನು ಬಂಧಿಸಿದ್ದಾರೆ. ಆದರೆ ಇನ್ನೂ ಕೆಲವು ಆರೋಪಿಗಳು ಪರಾರಿಯಾಗಿದ್ದಾರೆ. ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಂತ್ರಸ್ತನ ಕುಟುಂಬ ಆರೋಪಿಸಿದೆ. ಆರಂಭದಲ್ಲಿ ಪ್ರಕರಣವನ್ನು ಮುಖ್ಯ ಆರೋಪಿಯ ವಿರುದ್ಧ ದಾಖಲಿಸುವ ಬದಲು ಅಪರಿಚಿತ ವ್ಯಕ್ತಿಯ ವಿರುದ್ಧ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. ಪ್ರಸ್ತುತ, ಉಳಿದ ಅಪರಾಧಿಗಳನ್ನು ಪತ್ತೆಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ.

ಮಂಗಳಮುಖಿಯರು ಇಂತಹ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಇದೇ ಮೊದಲಲ್ಲ. ಈ ಹಿಂದೆ 2009 ರಲ್ಲಿ ವಿನೋದ್ ಎಂಬ 19 ವರ್ಷದ ಹುಡುಗನನ್ನು ಅಪಹರಿಸಿ ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ ಒಳಗಾಗುವಂತೆ ಒತ್ತಾಯಿಸಿದ ಆರೋಪದ ಮೇಲೆ 11 ಮಂಗಳಮುಖಿಯರನ್ನು ಬಂಧಿಸಿದ ತಮಿಳುನಾಡಿನ ಅಪರಾಧ ತನಿಖಾ ಇಲಾಖೆ (ಸಿಬಿಸಿಐಡಿ) ನಂತರ ಚಾರ್ಜ್‌ಶೀಟ್ ಸಲ್ಲಿಸಿದೆ.

ಈ ಸುದ್ದಿಯನ್ನೂ ಓದಿ:‌Viral Video: ಲಿಫ್ಟ್ ಕೇಳಿದ ಯುವಕನನ್ನೇ ಗುದ್ದಿಕೊಂಡು ಹೋದ ಬೈಕ್ ಸವಾರ; ಬೆಚ್ಚಿಬೀಳಿಸುವ ವಿಡಿಯೊ ವೈರಲ್

ಕ್ರಿಮಿನಲ್ ವಿಚಾರಣೆಯನ್ನು ಎದುರಿಸುತ್ತಿರುವ ಈ 11 ಮಂಗಳಮುಖಿಯರ ಗುಂಪು ಚೆನ್ನೈನ ಮಹಿಳಾ ನ್ಯಾಯಾಲಯದಲ್ಲಿ ತಮ್ಮ ಪ್ರಕರಣದ ವಿಚಾರಣೆಯನ್ನು ವಿರೋಧಿಸಿ ಅರ್ಜಿ ಸಲ್ಲಿಸಿದೆ. ತಾವು ಗಂಡು ಅಥವಾ ಹೆಣ್ಣು ಅಲ್ಲದ ಕಾರಣ ಅವರ ವಿಚಾರಣೆಗೆ ವಿಶೇಷ ನ್ಯಾಯಾಲಯವನ್ನು ರಚಿಸಬೇಕು ಎಂದು ಆರೋಪಿಗಳು ತಮ್ಮ ಅರ್ಜಿಯಲ್ಲಿ ವಾದಿಸಿದ್ದರು. ಆದರೆ ನ್ಯಾಯಾಲಯ ಇದಕ್ಕೆ ಒಪ್ಪಲಿಲ್ಲ ಎನ್ನಲಾಗಿದೆ.