ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Viral Video: ಧಗ ಧಗಿಸಿದ ತಂಬಾಕು ಫ್ಯಾಕ್ಟರಿ- ಬೆಚ್ಚಿ ಬೀಳಿಸೋ ವಿಡಿಯೊ ಫುಲ್‌ ವೈರಲ್‌

Massive Fire Breaks Out: ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಸಿಂಗರಾಯಕೊಂಡ ಮಂಡಲದಲ್ಲಿರುವ ಬೆಲ್ಲಂ ಕೋಟಯ್ಯದಲ್ಲಿರುವ ತಂಬಾಕು ಕಾರ್ಖಾನೆಯಲ್ಲಿ ಶುಕ್ರವಾರ ಬೆಳಿಗ್ಗೆ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿಯ ಜ್ವಾಲೆಗಳು ಆ ಪ್ರದೇಶವನ್ನು ಆವರಿಸಿಕೊಂಡಿದೆ. ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿಯನ್ನು ನಂದಿಸಲು ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.

ಹೈದರಾಬಾದ್‌: ತಂಬಾಕು ಕಾರ್ಖಾನೆಯಲ್ಲಿ ಶುಕ್ರವಾರ ಬೆಳಿಗ್ಗೆ ಭಾರಿ ಬೆಂಕಿ ಅವಘಡ ಸಂಭವಿಸಿರುವ ದುರ್ಘಟನೆ ಆಂಧ್ರಪ್ರದೇಶದ (Andhra Pradesh) ಪ್ರಕಾಶಂ ಜಿಲ್ಲೆಯ ಸಿಂಗರಾಯಕೊಂಡ ಮಂಡಲದಲ್ಲಿರುವ ಬೆಲ್ಲಂ ಕೋಟಯ್ಯದಲ್ಲಿ ಸಂಭವಿಸಿದೆ. ಬೆಂಕಿಯ ತೀವ್ರತೆ ಎಷ್ಟಿದೆ ಎಂದರೆ ಅದನ್ನು ಊಹಿಸಲು ಅಸಾಧ್ಯ. ಇದರ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ (Viral Video) ಆಗಿದೆ.

ಬೆಂಕಿಯ ಜ್ವಾಲೆಗಳು ಆ ಪ್ರದೇಶವನ್ನು ಆವರಿಸಿಕೊಂಡಿದೆ. ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿಯನ್ನು ನಂದಿಸಲು ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಬೆಂಕಿ ಅವಘಡ ಸಂಭವಿಸಿದ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಕೂಡ ಧಾವಿಸಿದ್ದಾರೆ. ಬೆಂಕಿಯ ಕೆನ್ನಾಲಿಗೆ ಹೆಚ್ಚಿದ್ದರೂ, ಯಾವುದೇ ಗಾಯಗಳಾದ ಬಗ್ಗೆ ವರದಿಯಾಗಿಲ್ಲ.

ಇಲ್ಲಿಯವರೆಗೆ, ಬೆಂಕಿ ದುರ್ಘಟನೆಗೆ ಸುಮಾರು 300 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆಗಳು ಬಂದಿಲ್ಲ. ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ವರದಿಯಾಗಿದೆ. ಹೆಚ್ಚಿನ ವಿವರಗಳನ್ನು ಇನ್ನೂ ನಿರೀಕ್ಷಿಸಲಾಗುತ್ತಿದೆ.

ವಿಡಿಯೊ ವೀಕ್ಷಿಸಿ:



ಶಾರ್ಟ್ ಸರ್ಕ್ಯೂಟ್‌ನಿಂದ ಭಾರೀ ಅಗ್ನಿ ದುರಂತ

ಇತ್ತೀಚೆಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭಾರಿ ಅಗ್ನಿ ದುರಂತ ಸಂಭವಿಸಿತ್ತು. 19 ಎಲೆಕ್ಟ್ರಿಕ್ ಸ್ಕೂಟರ್‌ಗಳು ಬೆಂಕಿಗೆ ಸುಟ್ಟು ಭಸ್ಮವಾಗಿತ್ತು. ಕನಕಪುರ ರಸ್ತೆ ಮೆಟ್ರೋ ನಿಲ್ದಾಣದ ಬಳಿ ಈ ದುರ್ಘಟನೆ ನಡೆದಿತ್ತು. ಯಲಚೇನಹಳ್ಳಿಯ ಡೋಮಿನೋಸ್ ಪಿಜ್ಜಾ ಕಟ್ಟಡದ ನೆಲಮಹಡಿಯಲ್ಲಿ ಈ ದುರ್ಘಟನೆ ಸಂಭವಿಸಿತ್ತು.

ಮೆಟ್ರೋ ನಿಲ್ದಾಣದ ಬಳಿಯ ಕಮರ್ಷಿಯಲ್ ಕಟ್ಟಡದ ನೆಲಮಹಡಿಯಲ್ಲಿ ಸ್ಥಾಪಿಸಲಾಗಿದ್ದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಚಾರ್ಜಿಂಗ್ ಪಾಯಿಂಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿತ್ತು. ಚಾರ್ಜಿಂಗ್ ವೇಳೆ ಓವರ್‌ಹೀಟ್‌ನಿಂದಾಗಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಹೊತ್ತಿಕೊಂಡಿತ್ತು ಎನ್ನಲಾಗಿದೆ. ನಂತರ ಪಾರ್ಕಿಂಗ್ ಪ್ರದೇಶದಲ್ಲಿದ್ದ ಗ್ಯಾಸ್ ಲೈನ್‌ಗೂ ಬೆಂಕಿ ವ್ಯಾಪಿಸಿತ್ತು. ಈ ವೇಳೆ ಒಂದು ಸಿಲಿಂಡರ್ ಸ್ಫೋಟಗೊಂಡಿದ್ದು, ಅದರ ತೀವ್ರತೆಗೆ ಅಗ್ನಿ ದುರಂತ ಸಂಭವಿಸಿತ್ತು.

ಇದನ್ನೂ ಓದಿ: Viral Video: ನಡುರಸ್ತೆಯಲ್ಲಿ ಯುವಕರ ಬಿಗ್‌ ಫೈಟ್‌! ಧೂಮ್‌ ಮಚಾಲೇ ಎಂದ ನೆಟ್ಟಿಗರು- ವಿಡಿಯೊ ಇದೆ

ಈ ದುರಂತದಲ್ಲಿ ಪಾರ್ಕಿಂಗ್‍ನಲ್ಲಿ ನಿಲ್ಲಿಸಲಾಗಿದ್ದ 19 ಎಲೆಕ್ಟ್ರಿಕ್ ಬೈಕ್‌ಗಳು ಸಂಪೂರ್ಣವಾಗಿ ಅಗ್ನಿಗೆ ಆಹುತಿಯಾಗಿತ್ತು. ಈ ವೇಳೆ ಆರು ಗ್ಯಾಸ್ ಸಿಲಿಂಡರ್‌ನಲ್ಲಿ ಸೋರಿಕೆ ಕಾಣಿಸಿಕೊಂಡಿತ್ತು. ಸ್ಥಳೀಯರು ಕೂಡಲೇ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ದೊಡ್ಡ ದುರಂತವೊಂದು ತಪ್ಪಿತು. ವಿಷಯ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ವಾಹನ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದರು.

ಅಷ್ಟೇ ಅಲ್ಲ ಬೆಂಗಳೂರಿನ ನಗರತ್ ಪೇಟೆಯಲ್ಲೂ ನಸುಕಿನ ಜಾವ 3:30ಕ್ಕೆ ಭೀಕರ ಅಗ್ನಿ ದುರಂತ ಸಂಭವಿಸಿತ್ತು. ಈ ದುರ್ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿ ಐವರು ಮೃತಪಟ್ಟಿದ್ದರು. ನಗರತ್ ಪೇಟೆಯ ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ತಡರಾತ್ರಿ ಅಗ್ನಿ ದುರಂತ ಸಂಭವಿಸಿತ್ತು. ಪ್ಲಾಸ್ಟಿಕ್‌ ಅಂಗಡಿಯೊಳಗೆ ರಾತ್ರಿ ಕೆಲಸಗಾರರು ಮಲಗಿ ನಿದ್ರಿಸಿರುವಾಗ ಬೆಂಕಿ ಹೊತ್ತಿಕೊಂಡಿತ್ತು. ತೀವ್ರ ದಹನಕಾರಿ ವಸ್ತುಗಳು ಅಂಗಡಿಯಲ್ಲಿ ಇದ್ದುದರಿಂದ ಬೆಂಕಿ ಶೀಘ್ರವಾಗಿ ವ್ಯಾಪಿಸಿ ಈ ದುರಂತ ಸಂಭವಿಸಿತ್ತು.