ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Viral Video: ಮಥುರಾದಲ್ಲಿ 2 ಡಜನ್‍ಗೂ ಹೆಚ್ಚು ಕೋತಿಗಳ ಮಾರಣಹೋಮ; ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಿ!

ಉತ್ತರ ಪ್ರದೇಶದ ಮಥುರಾದ ಗೋವರ್ಧನ್ ಪ್ರದೇಶದ ಗೋವಿಂದ್ ಕುಂಡ್ ಬಳಿ ಸೋಮವಾರ (ಮೇ 5) ಸುಮಾರು 2 ಡಜನ್‍ಗೂ ಹೆಚ್ಚು ಕೋತಿಗಳು ನಿಗೂಢವಾಗಿ ಸಾವನ್ನಪ್ಪಿದ ಆಘಾತಕಾರಿ ಘಟನೆ ನಡೆದಿದೆ. ಕೋತಿಗಳು ರಸ್ತೆಯಲ್ಲಿ ಸತ್ತು ಬಿದ್ದಿರುವ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡು ವೈರಲ್(Viral Video) ಆಗಿದೆ. ಮುಗ್ಧ ಪ್ರಾಣಿಗಳ ನಿಗೂಢ ಸಾವಿನ ಹಿಂದಿನ ಕಾರಣವನ್ನು ಪೊಲೀಸರು ತನಿಖೆ ಮಾಡುತ್ತಿದ್ದಾರೆ.

2 ಡಜನ್‍ಗೂ ಹೆಚ್ಚು ಕೋತಿಗಳ ನಿಗೂಢವಾಗಿ ಸಾವು; ಕಾರಣವೇನು?

Profile pavithra May 6, 2025 4:35 PM

ಲಖನೌ: ಉತ್ತರ ಪ್ರದೇಶದ ಮಥುರಾದಲ್ಲಿ ಸೋಮವಾರ (ಮೇ 5) ಸುಮಾರು ಕೋತಿಗಳು ನಿಗೂಢವಾಗಿ ಸಾವನ್ನಪ್ಪಿದ ಆಘಾತಕಾರಿ ಘಟನೆಯೊಂದು ನಡೆದಿದೆ. ಕೋತಿಗಳು ರಸ್ತೆಯಲ್ಲಿ ಸತ್ತು ಬಿದ್ದಿರುವ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ. ಮುಗ್ಧ ಪ್ರಾಣಿಗಳ ನಿಗೂಢ ಸಾವಿನ ಹಿಂದಿನ ಕಾರಣವನ್ನು ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಗೋವರ್ಧನ್ ಪ್ರದೇಶದ ಗೋವಿಂದ್ ಕುಂಡ್ ಬಳಿ ಈ ಘಟನೆ ನಡೆದಿದ್ದು, ಅಲ್ಲಿ ಎರಡು ಡಜನ್‍ಗೂ ಹೆಚ್ಚು ಕೋತಿಗಳು ಸಾವನ್ನಪ್ಪಿವೆ ಎಂದು ವರದಿಯಾಗಿದೆ.

ವರದಿಗಳ ಪ್ರಕಾರ, ವಿದೇಶಿ ಪ್ರಜೆಯೊಬ್ಬ ಏರ್‌ಗನ್‌ ಬಳಸಿ ಕೋತಿಗಳನ್ನು ಗುಂಡಿಕ್ಕಿ ಕೊಂದಿದ್ದಾನೆ ಎನ್ನಲಾಗಿದೆ. ಕೋತಿಗಳ ಮೃತ ದೇಹಗಳನ್ನು ನೋಡಿದ ಜನರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸ್ ತಂಡವು ಸ್ಥಳಕ್ಕೆ ತಲುಪಿ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ವಿದೇಶಿ ವ್ಯಕ್ತಿಯೊಬ್ಬ ಕೆಲವು ಸಮಯದಿಂದ ಹತ್ತಿರದ ಜಾನಕಿ ದಾಸ್ ಆಶ್ರಮದಲ್ಲಿ ವಾಸಿಸುತ್ತಿದ್ದಾನೆ. ಅವನೇ ಈ ಕ್ರೂರ ಕೃತ್ಯವನ್ನು ನಡೆಸಿದ್ದಾನೆ ಎಂದು ಎಂದು ಸ್ಥಳೀಯ ಜನರು ಆರೋಪಿಸಿದ್ದಾರೆ.

ವಿಡಿಯೊ ಇಲ್ಲಿದೆ ನೋಡಿ...



ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಕೋತಿಗಳಿಗೆ ಏರ್‌ಗನ್ ಪೆಲೆಟ್‍ಗಳಿಂದ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಪೊಲೀಸರು ವಿದೇಶಿ ಪ್ರಜೆಯನ್ನು ಬಂಧಿಸಿದ್ದು, ಆತನ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಯು ಸ್ಥಳೀಯರು ಮತ್ತು ಭಕ್ತರನ್ನು ತೀವ್ರ ಆಘಾತಕ್ಕೀಡು ಮಾಡಿದೆ. ಧಾರ್ಮಿಕ ಪ್ರಾಮುಖ್ಯತೆಗೆ ಹೆಸರುವಾಸಿಯಾದ ಮಥುರಾದಲ್ಲಿ ಕೋತಿಗಳನ್ನು ಹನುಮಂತನ ಒಂದು ರೂಪವಾಗಿ ನೋಡಲಾಗುತ್ತದೆ ಮತ್ತು ಅವುಗಳಿಗೆ ಹಾನಿ ಮಾಡುವುದು ಆಕ್ರಮಣಕಾರಿ ಪ್ರವೃತ್ತಿ ಎಂದು ಸ್ಥಳೀಯರು ತಿಳಿಸಿದ್ದಾರೆ. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಮತ್ತು ಈ ವಿಷಯಕ್ಕೆ ಸಂಬಂಧಿಸಿದಂತೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಜನರು ಒತ್ತಾಯಿಸಿದ್ದಾರೆ.

ಈ ಸುದ್ದಿಯನ್ನೂ ಓದಿ:Viral Video: ಅಂಗಡಿಯವನ ಮೇಲೆ ಡೆಡ್ಲಿ ಆಟ್ಯಾಕ್‌ ಮಾಡಿದ ಹುಡುಗಿ- ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಿ!

ಮೂಕ ಪ್ರಾಣಿಗಳನ್ನು ಕ್ರೂರವಾಗಿ ಕೊಂದ ಘಟನೆಗಳು ಈ ಹಿಂದೆ ಕೂಡ ವರದಿಯಾಗಿತ್ತು. ಉತ್ತರಪ್ರದೇಶದ ಆಗ್ರಾದಲ್ಲಿ ವ್ಯಕ್ತಿಯೊಬ್ಬ ಬೀದಿ ನಾಯಿಯನ್ನು ಕೋಲಿನಿಂದ ಹೊಡೆದು ಕ್ರೂರವಾಗಿ ಕೊಂದಿದ್ದನು. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿ ಸೋಶಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿ ಪ್ರಾಣಿಪ್ರಿಯರ ಆಕ್ರೋಶಕ್ಕೆ ಕಾರಣವಾಗಿತ್ತು.ವರದಿ ಪ್ರಕಾರ, ನಾಯಿ ಶ್ಯಾಮ್ ನಗರದಲ್ಲಿ ವಾಸಿಸುವ ವಕೀಲ ಅಮಿತ್ ಮಿಶ್ರಾ ಮನೆಯ ಹೊರಗೆ ಮಲಗುತ್ತಿತಂತೆ. ಆಗ ನೆರೆಮನೆಯ ರಾಜ್ ಕುಮಾರ್ ಎಂಬಾತ ಇದ್ದಕ್ಕಿದ್ದಂತೆ ನಾಯಿಯ ಮೇಲೆ ಕೋಲಿನಿಂದ ಹೊಡೆದು ಕೊಂದಿದ್ದಾನೆ. ವಕೀಲ ಅಮಿತ್ ಮಿಶ್ರಾ ರಾತ್ರಿ ಮನೆಗೆ ಮರಳಿದಾಗ ಘಟನೆಯ ಬಗ್ಗೆ ತಿಳಿದು ಸಿಸಿಟಿವಿ ದೃಶ್ಯಾವಳಿಗಳನ್ನು ನೋಡಿದ ನಂತರ ಆರೋಪಿಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ಲಿಖಿತ ದೂರು ದಾಖಲಿಸಿದ್ದಾನೆ. ಅಲ್ಲದೇ , ಸ್ಥಳೀಯರು ಸತ್ತ ನಾಯಿಯ ದೇಹವನ್ನು ಮಂಜುಗಡ್ಡೆಯ ತುಂಡಿನ ಮೇಲೆ ಇರಿಸಿ ಪೊಲೀಸರು ಮರಣೋತ್ತರ ಪರೀಕ್ಷೆ ನಡೆಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಿವಾಸಿಗಳು ಒತ್ತಾಯಿಸಿದ್ದಾರೆ.