ವಿದೇಶ ಫ್ಯಾಷನ್‌ ಲೋಕ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್‌ ಹೌಸ್‌ ಸಂಪಾದಕೀಯ

Viral Video: ಶಿವರಾತ್ರಿಯಂದು ಹಾಸ್ಟೆಲ್​ನಲ್ಲಿ ಮಾಂಸಾಹಾರ- ವಿದ್ಯಾರ್ಥಿಗಳ ನಡುವೆ ಮಾರಾಮಾರಿ; ವಿಡಿಯೊ ವೈರಲ್

ಮಹಾಶಿವರಾತ್ರಿಯ ದಿನದಂದು, ಮಾಂಸಹಾರ ಊಟ ಬಡಿಸಿದ್ದಕ್ಕೆ ದೆಹಲಿಯ ದಕ್ಷಿಣ ಏಷ್ಯಾ ವಿಶ್ವವಿದ್ಯಾಲಯದ ಕ್ಯಾಂಟೀನ್‍ನಲ್ಲಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಈ ಘಟನೆಯಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಥಳಿಸಿದ್ದು, ಈ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video)ಆಗಿದೆ.

ಶಿವರಾತ್ರಿಯಂದು ಮಾಂಸಾಹಾರ- ಇಡೀ ಹಾಸ್ಟೆಲ್‌ ರಣರಂಗ!

Profile pavithra Feb 27, 2025 3:42 PM

ನವದೆಹಲಿ: ಮಹಾಶಿವರಾತ್ರಿಯ ದಿನದಂದು, ನಾನ್‍ವೆಜ್‍ ಊಟದ ವಿಚಾರವಾಗಿ ದೆಹಲಿಯ ದಕ್ಷಿಣ ಏಷ್ಯಾ ವಿಶ್ವವಿದ್ಯಾಲಯದ ಕ್ಯಾಂಟೀನ್‍ನಲ್ಲಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಈ ಘಟನೆಯಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಥಳಿಸಿದ್ದು, ಈ ಘಟನೆಯ ವಿಡಿಯೊ ಸೋಶಿಯಲ್ ಮಿಡಿಯಾದಲ್ಲಿ ವೈರಲ್(Viral Video) ಆಗಿದೆ. ಈ ಘಟನೆಯಲ್ಲಿ ಎಬಿವಿಪಿ ಕಾರ್ಯಕರ್ತರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ವೈರಲ್ ವಿಡಿಯೊದಲ್ಲಿ ಎಬಿವಿಪಿ ಕಾರ್ಯಕರ್ತರು ವಿದ್ಯಾರ್ಥಿನಿಯೊಬ್ಬಳ ಕೂದಲನ್ನು ಎಳೆಯುವುದು, ಹೊಡೆಯುವುದು ಮತ್ತು ಇತರ ವಿದ್ಯಾರ್ಥಿಗಳನ್ನು ಎಳೆದಾಡುವುದು ಸೆರೆಯಾಗಿದೆ.

ಅಲ್ಲಿ ನಡೆದಿದ್ದೇನು?

ವಿಶ್ವವಿದ್ಯಾಲಯದಲ್ಲಿ ಓದುತ್ತಿರುವ ಕೆಲವು ವಿದ್ಯಾರ್ಥಿಗಳು ಮಹಾಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಉಪವಾಸದಲ್ಲಿದ್ದರು. ಹಾಗಾಗಿ ಅವರು ಸಾತ್ವಿಕ ಆಹಾರವನ್ನು ತಯಾರಿಸುವಂತೆ ಕ್ಯಾಂಟೀನ್ ಸಿಬ್ಬಂದಿಗಳ ಬಳಿ ಮನವಿ ಮಾಡಿದ್ದರು. ಆದರೆ ಅವರು ಊಟಕ್ಕಾಗಿ ಕ್ಯಾಂಟೀನ್‍ಗೆ ಬಂದಾಗ ಉಪವಾಸದ ಆಹಾರದ ಜೊತೆಗೆ ಮಾಂಸಾಹಾರಿ ಭಕ್ಷ್ಯಗಳನ್ನು (ಮೀನು) ಸಹ ಬಡಿಸುತ್ತಿರುವುದನ್ನು ಕಂಡು ಇದನ್ನು ವಿರೋಧಿಸಿದ್ದಾರೆ. ಇದರಿಂದಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಈ ಗಲಾಟೆಯಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಥಳಿಸಿದ್ದಾರೆ. ಈ ಘಟನೆಯ ವಿಡಿಯೊ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.



ತಮ್ಮ ಬೇಡಿಕೆಗಳಿಗೆ ವಿದ್ಯಾರ್ಥಿಗಳು ಒಪ್ಪದ ಕಾರಣ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿದೆ ಎಂದು ಭಾರತೀಯ ವಿದ್ಯಾರ್ಥಿ ಒಕ್ಕೂಟ (ಎಸ್‌ಎಫ್‌ಐ) ಆರೋಪಿಸಿದೆ. ಆದರೆ ಎಬಿವಿಪಿ ಈ ಆರೋಪಗಳನ್ನು ತಳ್ಳಿಹಾಕಿದೆ. 110 ವಿದ್ಯಾರ್ಥಿಗಳು ಉಪವಾಸವನ್ನು ಆಚರಿಸುತ್ತಿರುವುದರಿಂದ ಮಹಾ ಶಿವರಾತ್ರಿಯಂದು ಸಸ್ಯಾಹಾರಿ ಆಹಾರವನ್ನು ತಯಾರಿಸುವಂತೆ ಮೆಸ್ ಆಡಳಿತಕ್ಕೆ ವಿನಂತಿಸಿದ್ದಾರೆ ಎಂದು ಎಬಿವಿಪಿ ಹೇಳಿದೆ. ಆದರೆ ಕೆಲವರು ಉದ್ದೇಶಪೂರ್ವಕವಾಗಿ ಮಾಂಸಾಹಾರವನ್ನು ಬಡಿಸಲು ಮತ್ತು ಧಾರ್ಮಿಕ ಸಾಮರಸ್ಯವನ್ನು ಭಂಗಗೊಳಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ಈ ಬಗ್ಗೆ ಯಾವುದೇ ಔಪಚಾರಿಕ ದೂರು ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ:Viral News: ಆಲಿಘಡ್‌ ವಿವಿ ಹಾಸ್ಟೆಲ್‌ ನೋಟಿಸ್‌ನಲ್ಲಿ ಬೀಫ್‌ ಬಿರಿಯಾನಿ ಉಲ್ಲೇಖ: ಆಡಳಿತ ಮಂಡಳಿ ಹೇಳಿದ್ದೇನು?

ಉತ್ತರ ಪ್ರದೇಶದ ಆಲಿಘಡ್ ಮುಸ್ಲಿಂ ವಿಶ್ವವಿದ್ಯಾಲಯದ ಸುಲೇಮಾನ್ ಹಾಸ್ಟೆಲ್‌ನಲ್ಲಿ ಹಾಕಿದ್ದ ನೋಟಿಸ್‌ನಲ್ಲಿ 'ಬೀಫ್ ಬಿರಿಯಾನಿ' ಅಂತ ಬರೆದಿದ್ದರಿಂದ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಕುಲಪತಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿವೆ. ಆಡಳಿತ ಮಂಡಳಿ ಟೈಪಿಂಗ್‌ ಮಿಸ್ಟೇಕ್‌ ಎಂದು ಹೇಳುವ ಮೂಲಕ ಈ ವಿವಾದಕ್ಕೆ ತೆರೆ ಎಳೆದಿದೆ.ಆದರೆ ಹಿಂದೂ ಸಂಘಟನೆಯ ಪ್ರತಿಭಟನಾಕಾರರು ಸೂಕ್ತ ಕ್ರಮ ಕೈಗೊಳ್ಳದಿದ್ದರೆ, ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡುವುದಾಗಿ ಖಡಕ್ ಎಚ್ಚರಿಕೆ ನೀಡಿದ್ದಾರೆ.‌ ಉದ್ದೇಶಪೂರ್ವಕವಾಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿವೆ.