ಕರ್ನಾಟಕ ಬಜೆಟ್​ ವಿದೇಶ ಮಹಿಳಾ ದಿನಾಚರಣೆ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Viral Video: ಮದುವೆಯ ದಿನವೇ ಮಸಣ ಸೇರಿದ ವರ; ಅಷ್ಟಕ್ಕೂ ಆಗಿದ್ದೇನು?

ನ್ಯಾಷನಲ್ ಸ್ಟೂಡೆಂಟ್ ಯೂನಿಯನ್ ಆಫ್ ಇಂಡಿಯಾದ (NSUI) ಮಾಜಿ ಜಿಲ್ಲಾಧ್ಯಕ್ಷ ಪ್ರದೀಪ್ ಜಾಟ್ ಎಂಬಾತ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುವಾಗ ಕುಸಿದು ಬಿದ್ದು ಸಾವನ್ನಪ್ಪಿದ ದಾರುಣವಾದ ಘಟನೆ ಮಧ್ಯಪ್ರದೇಶದ ಶಿಯೋಪುರ್ ನಗರದಲ್ಲಿ ಶುಕ್ರವಾರ (ಫೆಬ್ರವರಿ 14) ರಾತ್ರಿ ನಡೆದಿದೆ. ಈ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ.

ಮದ್ವೆ ಮೆರವಣಿಗೆ ವೇಳೆ ಕುದುರೆಯಿಂದ ಬಿದ್ದು ವರ ಸಾವು!

Profile pavithra Feb 17, 2025 7:49 PM

ಭೋಪಾಲ್: ಮಧ್ಯಪ್ರದೇಶದ ಶಿಯೋಪುರ್ ನಗರದಲ್ಲಿ ಶುಕ್ರವಾರ (ಫೆಬ್ರವರಿ 14)ರಾತ್ರಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುವಾಗ ವರ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿರುವುದಾಗಿ ವರದಿಯಾಗಿದೆ. ಈ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ. ಸಾವನ್ನಪ್ಪಿದ ವರನನ್ನು ನ್ಯಾಷನಲ್ ಸ್ಟೂಡೆಂಟ್ ಯೂನಿಯನ್ ಆಫ್ ಇಂಡಿಯಾದ (NSUI) ಮಾಜಿ ಜಿಲ್ಲಾಧ್ಯಕ್ಷ ಪ್ರದೀಪ್ ಜಾಟ್ ಎಂದು ಗುರುತಿಸಲಾಗಿದೆ. ಸ್ಥಳೀಯ ಆಸ್ಪತ್ರೆಗೆ ತಲುಪಿದಾಗ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.

ವರದಿ ಪ್ರಕಾರ, ಮದುವೆ ಮೆರವಣಿಗೆಯ ವೇಳೆ ನಗರದ ಜಾಟ್ ಹಾಸ್ಟೆಲ್‍ನಲ್ಲಿ ಈ ಘಟನೆ ನಡೆದಿದೆ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವಿಡಿಯೊದಲ್ಲಿ ಪ್ರದೀಪ್ ಜಾಟ್ ಕುದುರೆ ಸವಾರಿ ಮಾಡುವಾಗ ಆತ ಕುದುರೆಯ ಮೇಲಿನ ನಿಯಂತ್ರಣ ಕಳೆದುಕೊಂಡು ಕುಸಿದು ಬಿದ್ದಿದ್ದಾನೆ. ತಕ್ಷಣ ವರನನ್ನು ಶಿಯೋಪುರ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆತ ಆಸ್ಪತ್ರೆಗೆ ಬರುವ ಮುನ್ನವೇ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.



ವರದಿಗಳ ಪ್ರಕಾರ, ಕುಸಿದು ಬೀಳುವ ಮೊದಲು, ಕುದುರೆಯಿಂದ ಇಳಿದು ಸ್ವಲ್ಪ ಹೊತ್ತು ಕಳಗೆ ಇಳಿದು ಡ್ಯಾನ್ಸ್‌ ಮಾಡಿದ್ದಾನಂತೆ.ನಂತರ ಕುದುರೆ ಹತ್ತಿ ಸವಾರಿ ಮಾಡಿದ್ದಾನೆ. ಆ ವೇಳೆ ಈ ದುರಂತ ನಡೆದಿದೆ. ಪ್ರದೀಪ್ ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಹಾಗಾಗಿ ಮರಣೋತ್ತರ ಪರೀಕ್ಷೆಗಾಗಿ ಕಾಯಲಾಗುತ್ತಿದೆಯಂತೆ.

ಮಧ್ಯಪ್ರದೇಶದ ಇಂದೋರ್‌ನಲ್ಲಿ ಇದೇ ರೀತಿಯ ದುರಂತ ಸಂಭವಿಸಿದ ಕೆಲವೇ ದಿನಗಳಲ್ಲಿ ಈ ಘಟನೆ ನಡೆದಿದೆ. ಈ ವಾರದ ಆರಂಭದಲ್ಲಿ, 23 ವರ್ಷದ ಪರಿಣಿತಾ ಜೈನ್ ತನ್ನ ಸೋದರಸಂಬಂಧಿಯ ಮದುವೆಯಲ್ಲಿ ಡ್ಯಾನ್ಸ್‌ ಮಾಡುವಾಗ ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ. ಅವಳು ಸಾಯುವ ಮುನ್ನ ಬಾಲಿವುಡ್ ಹಿಟ್ "ಶರಾರಾ ಶರಾರಾ" ಹಾಡಿಗೆ ನೃತ್ಯ ಮಾಡಿದ್ದಳು ಎನ್ನಲಾಗಿದೆ.

ಹಾಗೇ ಜನವರಿ 19 ರಂದು ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಇದೇ ರೀತಿಯ ಘಟನೆ ನಡೆದಿದ್ದು, ವರನಿಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾನೆ. ವಿವಾಹ ಆಚರಣೆಯ ಸಮಯದಲ್ಲಿ ಅತಿಥಿಗಳು ಖುಷಿಯಿಂದ ಡ್ಯಾನ್ಸ್‌ ಮಾಡುತ್ತಿದ್ದಾಗ ವರನು ಮದುವೆ ಮಂಟಪದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ.

ಈ ಸುದ್ದಿಯನ್ನೂ ಓದಿ: Viral Video: ಕಂಠಪೂರ್ತಿ ಕುಡಿದು ಮಂಟಪದಲ್ಲೇ ವರನ ರಂಪಾಟ; ಮದುವೆ ಕ್ಯಾನ್ಸಲ್ ಮಾಡಿದ ವಧುವಿನ ತಾಯಿ: ವಿಡಿಯೊ ವೈರಲ್

ಮದುವೆ ದಿನ ವರನೊಬ್ಬ ಕಂಠಪೂರ್ತಿ ಕುಡಿದು ವಿವಾಹ ಮಂಟಪದಲ್ಲಿ ರಂಪಾಟ ಮಾಡಿದ್ದಾನೆ. ಇದರಿಂದ ಮದುವೆಯೇ ರದ್ದಾಗಿದ್ದು, ಈ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಬಹಳಷ್ಟು ವೈರಲ್ ಆಗುತ್ತಿದೆ. ಮಗಳ ಮುಂದಿನ ಜೀವನಕ್ಕಾಗಿ ವಧುವಿನ ತಾಯಿ ಮಹತ್ವದ ನಿರ್ಧಾರ ತೆಗೆದುಕೊಂಡು ಅದ್ದೂರಿ ಮದುವೆಯನ್ನೇ  ಕ್ಯಾನ್ಸಲ್ ಮಾಡಿದ್ದಾರೆ. ಈ ವಿಡಿಯೊ ನೋಡಿದ ಹಲವರು ವಧುವಿನ ತಾಯಿಯ ದಿಟ್ಟ ನಿರ್ಧಾರಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

ಬೆಂಗಳೂರಿನಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು,ಮದುವೆ ದಿನ ವರ ಹಾಗೂ ವರನ ಸ್ನೇಹಿತರು ಕುಡಿದು ಬಂದು ಗಲಾಟೆ  ಮಾಡಿದ್ದಾರೆ. ವರನು ಮದುವೆ ಮನೆಗೆ  ಕಂಠಪೂರ್ತಿ ಕುಡಿದು ಬಂದಿದ್ದು ಮಾತ್ರವಲ್ಲದೇ ಆರತಿ ತಟ್ಟೆಯನ್ನು ಎಸೆದು ಅಪಮಾನಿಸಿದ್ದಾನೆ. ಈ ಸಂದರ್ಭ ವಧು ತಾಯಿ ತಾಳ್ಮೆ ಕಳೆದುಕೊಂಡಿದ್ದು ತಮ್ಮ ಮಗಳ ಮುಂದಿನ ಜೀವನಕ್ಕಾಗಿ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ.

ಸಮಾರಂಭಕ್ಕೆ ಆಗಮಿಸಿದ್ದ ಎಲ್ಲರಲ್ಲೂ ಕ್ಷಮೆ ಕೋರಿ ಈ ಮದುವೆ ಮುರಿಯುವ ನಿರ್ಧಾರ ಮಾಡಿದ್ದೇವೆ. ನನಗೆ ನನ್ನ ಮಗಳ ಭವಿಷ್ಯವೇ ಮುಖ್ಯ. ಹೀಗಾಗಿ ಮದುವೆ ಮುಂದುವರಿಸುವುದಿಲ್ಲ ಎಂದು ಹೇಳಿದ್ದಾರೆ. ವೈರಲ್ ವಿಡಿಯೊದಲ್ಲಿ ತಾಯಿ ಎಲ್ಲರ ಮುಂದೆ ಕೈಜೋಡಿಸಿ ವಿನಂತಿ ಮಾಡುತ್ತಿರುವುದು ಕಂಡು ಬಂದಿದೆ. ಕೆಲವರು ಅವರ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ವಧುವಿನ ತಾಯಿ ಮದುವೆ ಕ್ಯಾನ್ಸಲ್ ಮಾಡುವ ಬಗ್ಗೆ ಖಚಿತ ನಿರ್ಧಾರ ಕೈಗೊಂಡಿದ್ದಾರೆ.