#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Viral Video: ವಿಮಾನದಲ್ಲಿ ಗನ್ ತೋರಿಸಿ ಬೆದರಿಕೆ ಹಾಕಿದ ಪ್ರಯಾಣಿಕ; ಭಯಾನಕ ವಿಡಿಯೊ ವೈರಲ್

ವಿಮಾನವೊಂದರಲ್ಲಿ ಪ್ರಯಾಣಿಕರೊಬ್ಬರು ಬಂದೂಕನ್ನು ಹೊರತೆಗೆದು ಪ್ರಯಾಣಿಕರಿಗೆ ಬೆದರಿಕೆ ಹಾಕಿದ ದೃಶ್ಯ ವೊಂದು ಸೋಶಿಯಲ್ ಮೀಡಿಯಾದಲ್ಲಿ ಬಹಳಷ್ಟು ವೈರಲ್ ಆಗುತ್ತಿದೆ. ವಿಮಾನವು ಟೇಕ್ ಆಫ್ ಆದ ಕೆಲವೇ ಸಮಯದಲ್ಲಿ ಈ ಘಟನೆ ಸಂಭವಿಸಿದ್ದು, ಈ ದೃಶ್ಯ ಪ್ರಯಾಣಿಕರನ್ನೇ ಬೆಚ್ಚಿ ಬೀಳಿಸಿದೆ. ಸದ್ಯ ಈ ಭಯಾನಕ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಬಹಳಷ್ಟು ವೈರಲ್ ಆಗುತ್ತಿದೆ.

ವಿಮಾನದಲ್ಲಿ ಗನ್ ಹಿಡಿದು ಆತಂಕ ಸೃಷ್ಟಿಸಿದ ಪ್ರಯಾಣಿಕ; ವಿಡಿಯೊ ವೈರಲ್

Profile Pushpa Kumari Feb 10, 2025 8:00 AM

ವಾಷಿಂಗ್ಟನ್: ಅಮೆರಿಕದ ಟೊನ್‌ಕಾಂಟಿನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ಫ್ಲೈಟ್ ಒಂದರಲ್ಲಿ ಪ್ರಯಾಣಿಕರೊಬ್ಬರು ಬಂದೂಕನ್ನು ಹೊರ ತೆಗೆದು ಪ್ರಯಾಣಿಕರಿಗೆ ಬೆದರಿಕೆ ಹಾಕಿದ ದೃಶ್ಯವೊಂದು ಸೋಶಿಯಲ್ ಮೀಡಿಯಾದಲ್ಲಿ ಬಹಳಷ್ಟು ವೈರಲ್ ಆಗುತ್ತಿದೆ. ವಿಮಾನವು ಟೇಕ್ ಆಫ್ ಆದ ಕೆಲವೇ ಸಮಯದಲ್ಲಿ ಈ ಘಟನೆ ಸಂಭವಿಸಿದ್ದು, ಈ ದೃಶ್ಯ ಪ್ರಯಾಣಿಕರನ್ನೇ ಬೆಚ್ಚಿ ಬೀಳಿಸಿದೆ. ವಿಮಾನದಲ್ಲಿ ಪ್ರಯಾಣಿಕರು ಗೊಂದಲಕ್ಕೆ ಒಳಗಾಗುತ್ತಿದ್ದಂತೆ ಸಿಬ್ಬಂದಿ ಎಚ್ಚೆತ್ತುಕೊಂಡು ಬಂದೂಕುಧಾರಿಯನ್ನು ನಿಯಂತ್ರಣಕ್ಕೆ ತಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಂಡಿದ್ದಾರೆ. ಸದ್ಯ ಈ ಭಯಾನಕ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಬಹಳಷ್ಟು ವೈರಲ್ ಆಗುತ್ತಿದೆ (Viral Video).



ರೋಟಾನ್‌ಗೆ ತೆರಳುವ ವಿಮಾನದಲ್ಲಿ ಈ ಘಟನೆ ಸಂಭವಿಸಿದ್ದು, ವಿಮಾನ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಬಂದೂಕುಧಾರಿಯನ್ನು ತಡೆದಿದ್ದು ಯಾವುದೇ ಹಾನಿಯಾಗದಂತೆ ಕ್ರಮ ಕೈಗೊಂಡರು. ನಂತರ ಪೈಲಟ್ ವಿಮಾನವನ್ನು ಟೊನ್‌ಕಾಂಟಿನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮರಳಿ ತಿರುಗಿಸಿದ್ದಾರೆ. ವಿಮಾನ ನಿಲ್ದಾಣಕ್ಕೆ ಬಂದ ನಂತರ, ರಾಷ್ಟ್ರೀಯ ಪೊಲೀಸ್ ಅಧಿಕಾರಿಗಳು ವಿಮಾನವನ್ನು ಪ್ರವೇಶಿಸಿ ಶಂಕಿತನನ್ನು ಬಂಧಿಸಿದ್ದು ಘಟನೆಯಿಂದ ಆಘಾತಕ್ಕೊಳಗಾದ ಪ್ರಯಾಣಿಕರನ್ನು ಮತ್ತೊಂದು ವಿಮಾನದಲ್ಲಿ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಬಂದೂಕುಧಾರಿಯು ವಿಮಾನದೊಳಗೆ ಬಂದೂಕನ್ನು ಹೇಗೆ ಸಾಗಿಸಿದ್ದಾನೆ ಎಂಬ ವಿವರಗಳು ಸ್ಪಷ್ಟವಾಗಿ ತಿಳಿದು ಬಂದಿಲ್ಲ. ಈ ಮಾರ್ಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಎಂ ಏರ್‌ಲೈನ್ಸ್ ಅಥವಾ ಟ್ಯಾಗ್ ಏರ್‌ಲೈನ್ಸ್ ಭದ್ರತಾ ಉಲ್ಲಂಘನೆಯ ಕುರಿತು ಯಾವುದೇ ಹೇಳಿಕೆಗಳನ್ನು ನೀಡಿಲ್ಲ.

ಇದನ್ನು ಓದಿ: Viral Vide: ವರನ ಸಿಬಿಲ್ ಸ್ಕೋರ್ ಕಡಿಮೆ- ಮದುವೆ ಕ್ಯಾನ್ಸಲ್‌ ಮಾಡಿದ ವಧುವಿನ ಕುಟುಂಬ

ಈ ದೃಶ್ಯ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಬಹಳಷ್ಟು ವೈರಲ್ ಆಗಿದ್ದು ನೆಟ್ಟಿಗರು ದೃಶ್ಯ ನೋಡಿ ನಾನಾ ರೀತಿಯ ಕಮೆಂಟ್ ಮಾಡಿದ್ದಾರೆ‌. ನೆಟ್ಟಿಗರೊಬ್ಬರು ಪ್ರಯಾಣಿಕರ ತಪಾಸಣೆಯನ್ನು ಅಲ್ಲಿನ ಸಿಬ್ಬಂದಿ ಸರಿಯಾಗಿ ಮಾಡಿಲ್ಲ ಇರಬೇಕು ಎಂದು ಹೇಳಿದ್ದಾರೆ. ಮತ್ತೊಬ್ಬರು ಇದು ವಿಮಾನ ಸಂಚರಿಸುವಾಗ ಸಂಭವಿಸಿದರೆ ತುಂಬಾ ಅಪಾಯಕಾರಿ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಇನ್ನೊಬ್ಬ ಬಳಕೆದಾರ ಆತ ಬಂದೂಕಿನೊಂದಿಗೆ ವಿಮಾನ ದೊಳಗೆ ಪ್ರವೇಶ ಮಾಡಿದ್ದು ಹೇಗೆ? ಎಂದು ಪ್ರಶ್ನಿಸಿದ್ದಾರೆ.