physical Abuse: ಆಸ್ಪತ್ರೆಯ ಐಸಿಯುನಲ್ಲಿ ಮಲಗಿದ್ದವಳ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಅರೆಸ್ಟ್
ಗುರುಗ್ರಾಮದ ಮೇದಾಂತ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿಯ ಮೇಲೆ ಆಸ್ಪತ್ರೆಯ ಸಿಬ್ಬಂದಿ ದೀಪಕ್ ಎಂಬಾತ ಅತ್ಯಾಚಾರ(Physical Abuse) ಎಸಗಿದ್ದಾನೆ. ಈ ಬಗ್ಗೆ ಪೊಲೀಸ್ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿ 800 ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿ 4 ದಿನಗಳ ನಂತರ ಆರೋಪಿಯನ್ನು ಬಂಧಿಸಿದ್ದಾರೆ.


ಚಂಢೀಗಡ: ಇತ್ತೀಚೆಗೆ ಗುರುಗ್ರಾಮದ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಗಗನಸಖಿಯ ಮೇಲೆ ವ್ಯಕ್ತಿಯೊರ್ವ ಅತ್ಯಾಚಾರ(Physical Abuse) ಎಸಗಿದಂತಹ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಗಗನಸಖಿಯ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಯನ್ನು ಬಂಧಿಸಲು ಪೊಲೀಸರು ವಿಶೇಷ ತನಿಖಾ ತಂಡ (ಎಸ್ಐಟಿ) 8 ಕ್ರ್ಯಾಕ್ ತಂಡಗಳ ನೆರವಿನೊಂದಿಗೆ ಶೋಧ ನಡೆಸಿದ್ದಾರೆ. ಕೊನೆಗೂ 800 ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿ 4 ದಿನಗಳ ನಂತರ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಬಿಹಾರದ ಮುಜಾಫರ್ಪುರ ಜಿಲ್ಲೆಯ ಬಧೌಲಿ ಗ್ರಾಮದ ನಿವಾಸಿ ದೀಪಕ್ ಎಂದು ಗುರುತಿಸಲಾಗಿದ್ದು, ಗುರುಗ್ರಾಮ್‍ನಲ್ಲಿ ಏಪ್ರಿಲ್ 18ರಂದು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಸ್ಪತ್ರೆಯಲ್ಲಿ ಅಳವಡಿಸಲಾದ 800 ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಎಸ್ಐಟಿ ವಿಶ್ಲೇಷಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತಲೆಮರೆಸಿಕೊಂಡಿದ್ದ 25 ವರ್ಷದ ಆರೋಪಿ ವ್ಯಕ್ತಿ ಕಳೆದ ಐದು ತಿಂಗಳಿನಿಂದ ಆಸ್ಪತ್ರೆಯಲ್ಲಿ ತಂತ್ರಜ್ಞನಾಗಿ ಕೆಲಸ ಮಾಡುತ್ತಿದ್ದನು ಎಂಬುದಾಗಿ ತಿಳಿದುಬಂದಿದೆ. ಪೊಲೀಸರು ಆರೋಪಿಯ ಬಗ್ಗೆ ನೀಡಿದ ಮಾಹಿತಿಯ ಆಧಾರದ ಮೇಲೆ, ಆಸ್ಪತ್ರೆಯ ಅಧಿಕಾರಿಗಳು ಶಂಕಿತ ಉದ್ಯೋಗಿಯನ್ನು ಅಮಾನತುಗೊಳಿಸಿದ್ದಾರೆ ಎನ್ನಲಾಗಿದೆ.
ನಡೆದಿದ್ದೇನು?
ಗಗನಸಖಿಯೊಬ್ಬಳು ಗಂಭೀರ ಆರೋಗ್ಯ ಸ್ಥಿತಿಯಲ್ಲಿ ಏಪ್ರಿಲ್ 6 ರಂದು ಗುರುಗ್ರಾಮದ ಮೇದಾಂತ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇದ್ದಾಗ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಆಕೆ ಆರೋಪಿಸಿದ್ದಾಳೆ. ಆತನ ದಾಳಿಯಿಂದ ತನಗೆ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಆ ಸಮಯದಲ್ಲಿ ಇಬ್ಬರು ನರ್ಸ್‍ಗಳು ಅಲ್ಲಿ ಇದ್ದರು, ಅವರು ಯಾರೂ ಕೂಡ ತಡೆಯಲಿಲ್ಲ ಎಂದು ಆಕೆ ತಿಳಿಸಿದ್ದಾಳೆ.
ಏಪ್ರಿಲ್ 13 ರಂದು ಆಸ್ಪತ್ರೆಯಿಂದ ಮನೆಗೆ ಬಂದ ನಂತರ ಲೈಂಗಿಕ ದೌರ್ಜನ್ಯದ ಬಗ್ಗೆ ಪತಿಗೆ ಹೇಳಿದಾಗ ಈ ವಿಷಯ ಬೆಳಕಿಗೆ ಬಂದಿದೆ. ಪತಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
46 ವರ್ಷದ ಗಗನಸಖಿಯ ದೂರಿನ ಆಧಾರದ ಮೇಲೆ ಏಪ್ರಿಲ್ 14 ರಂದು ಸದರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆಯಂತೆ. ಒಂದು ದಿನದ ನಂತರ, ಆಸ್ಪತ್ರೆಯು ಆರೋಪವನ್ನು ಒಪ್ಪಿಕೊಂಡು ಸಂಬಂಧಿತ ಅಧಿಕಾರಿಗಳು ನಡೆಸಿದ ತನಿಖೆಗೆ ಸಂಪೂರ್ಣವಾಗಿ ಸಹಕರಿಸಿದೆಯಂತೆ.
ಈ ಸುದ್ದಿಯನ್ನೂ ಓದಿ:Viral Video: ಮದುವೆ ಮನೆಯೋ? ಇಲ್ಲ, ರಣರಂಗವೋ? ಅಷ್ಟಕ್ಕೂ ಆಗಿದ್ದೇನು ಗೊತ್ತಾ? ಈ ವಿಡಿಯೊ ನೋಡಿ
ಸಂತ್ರಸ್ತ ಗಗನಸಖಿಯ ಆರೋಗ್ಯ ಸ್ಥಿತಿ ಬಹಳ ಗಂಭೀರವಾಗಿದ್ದ ಕಾರಣ ಆಕೆಯನ್ನು ಏಪ್ರಿಲ್ 5 ರಂದು ಮೇದಾಂತ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಲ್ಲಿ ಅವಳು ಒಂದು ವಾರಕ್ಕೂ ಹೆಚ್ಚು ಕಾಲ ವೆಂಟಿಲೇಟರ್‌ನಲ್ಲಿ ತುರ್ತು ಚಿಕಿತ್ಸೆಗೆ ಒಳಗಾಗಿದ್ದಳು ಎಂದು ವರದಿಯಾಗಿದೆ. ಏಪ್ರಿಲ್ 6ರಂದು ವಾರ್ಡ್ ಸಿಬ್ಬಂದಿಯೊಬ್ಬರು ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.