ಅಸ್ಸಾಂ: ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (CM Himanta Biswa Sarma) ಅವರು ಮುಸ್ಲಿಮರಿಗೆ (Muslim community ) ಬಂದೂಕು ತೋರಿಸಿದ ವಿಡಿಯೊವೊಂದು (Viral Video) ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಸಾಕಷ್ಟು ಟೀಕೆಗೆ ಗುರಿಯಾಗಿದೆ. ಕಾಂಗ್ರೆಸ್ (Congress) ಪ್ರಧಾನಿ ನರೇಂದ್ರ ಮೋದಿ (PM Narendra Modi) ವಿರುದ್ಧ ವಾಗ್ದಾಳಿಯನ್ನು ನಡೆಸಿದೆ. ಅಸ್ಸಾಂ ಬಿಜೆಪಿಯ ಸಾಮಾಜಿಕ ಮಾಧ್ಯಮ ಖಾತೆಯಾದ ಎಕ್ಸ್ ನಲ್ಲಿ ಇದನ್ನು ಹಂಚಿಕೊಳ್ಳಲಾಗಿದ್ದು, ಬಳಿಕ ಅಳಿಸಲಾಗಿದೆ. ಆದರೆ ಕಾಂಗ್ರೆಸ್ ನಾಯಕರು ಸೇರಿದಂತೆ ಇನ್ನು ಹಲವರು ಇದರ ಸ್ಕ್ರೀನ್-ರೆಕಾರ್ಡಿಂಗ್ ಮಾಡಿ ವಿಡಿಯೊ ಹಂಚಿಕೊಂಡಿದ್ದಾರೆ.
ವೈರಲ್ ಆಗಿರುವ ವಿಡಿಯೊದಲ್ಲಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮುಸ್ಲಿಂ ಸಮುದಾಯದ ಮೇಲೆ ಬಂದೂಕು ತೋರಿಸುತ್ತಿರುವುದನ್ನು ಕಾಣಬಹುದಾಗಿದೆ. ಇದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಚುನಾವಣೆ ಹೊತ್ತಲ್ಲಿ ಬಿಜೆಪಿ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಈ ವಿಡಿಯೊವನ್ನು ಬಿಡುಗಡೆ ಮಾಡಿದೆ ಎಂದು ಅನೇಕರು ಕಾಮೆಂಟ್ ನಲ್ಲಿ ಹೇಳಿದ್ದಾರೆ.
ಮೆಟ್ರೋ ನಿಲ್ದಾಣದಲ್ಲಿ ಗೆಳತಿಯೊಂದಿಗಿದ್ದ ಮಗನನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ತಾಯಿ ಮಾಡಿದ್ದೇನು ಗೊತ್ತಾ?
'ಪಾಯಿಂಟ್-ಬ್ಲಾಂಕ್' ಹತ್ಯೆಯನ್ನು ತೋರಿಸುವ ಈ ವಿಡಿಯೊ ನರಮೇಧಕ್ಕೆ ಕರೆಯಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಲೋಕಸಭಾ ಸದಸ್ಯ ಕೆ.ಸಿ. ವೇಣುಗೋಪಾಲ್ ಸಾಮಾಜಿಕ ಮಾಧ್ಯಮ ಎಕ್ಸ್ ಖಾತೆಯಲ್ಲಿ ಹೇಳಿದ್ದಾರೆ.
ಟ್ರೋಲ್ ವಿಷಯವಾಗಿ ಇದನ್ನು ನಿರ್ಲಕ್ಷಿಸಬಹುದು. ಆದರೆ ಇದು ಹರಡುವ ವಿಷ ಮತ್ತು ಪರಿಣಾಮಗಳಿಗೆ ನರೇಂದ್ರ ಮೋದಿ ಅವರು ಇದನ್ನು ಖಂಡಿಸುತ್ತಾರೆಯೇ ? ನ್ಯಾಯಾಂಗವು ಕ್ರಮ ಕೈಗೊಳ್ಳಬೇಕು. ಇದರಲ್ಲಿ ಯಾವುದೇ ದಯೆ ತೋರಿಸಬಾರದು ಎಂದು ಹೇಳಿದ್ದಾರೆ.
ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾಟೆ ಅವರು ಪ್ರತಿಕ್ರಿಯಿಸಿ ನ್ಯಾಯಾಲಯಗಳು ಮತ್ತು ಇತರ ಸಂಸ್ಥೆಗಳು ನಿದ್ರಿಸುತ್ತಿವೆಯೇ? ಎಂದು ಪ್ರಶ್ನಿಸಿದ್ದಾರೆ. ಈ ವಿಡಿಯೊಗೆ ಸಂಬಂಧಿಸಿ ಬಿಜೆಪಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಬಿಜೆಪಿ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಇದನ್ನು ಫೆಬ್ರವರಿ 7ರಂದು ಹಂಚಿಕೊಂಡು ಬಳಿಕ ಡಿಲೀಟ್ ಮಾಡಿತ್ತು.
ಕಣ್ಣೀರಿನೊಂದಿಗೆ ಶಾಲೆಗೆ ವಿದಾಯ ಹೇಳುವ ಬದಲು ರೋಡ್‌ನಲ್ಲಿ ಅಪಾಯಕಾರಿ ಸ್ಟಂಟ್ ಪ್ರದರ್ಶನ; ಇದು ಜೆನ್ ಝಡ್ ಕಾಲ!
ಕೇರಳ ಕಾಂಗ್ರೆಸ್ ಇದನ್ನು ಹಂಚಿಕೊಂಡು ಮೋದಿಯವರ ಮಲೇಷ್ಯಾ ಪ್ರವಾಸಕ್ಕೆ ಇದನ್ನು ಜೋಡಿಸಿತ್ತು. ಮುಸ್ಲಿಂ ಬಹುಸಂಖ್ಯಾತ ದೇಶವಾದ ಮಲೇಷ್ಯಾಕ್ಕೆ ಪ್ರಧಾನಿ ಮೋದಿ ಅವರ ಪ್ರಸ್ತುತ ಭೇಟಿ ನೀಡಿದ್ದಾರೆ. ಅಲ್ಲಿ ಅವರು ಪ್ರಧಾನಿ ಅನ್ವರ್ ಇಬ್ರಾಹಿಂ ಅವರೊಂದಿಗೆ ತಿರುಗಾಡುತ್ತಿದ್ದಾರೆ. ಮಲೇಷ್ಯಾದ ಜನರಿಗೆ ಮತ್ತು ಪ್ರಪಂಚದಾದ್ಯಂತದ ಮುಸ್ಲಿಮರಿಗೆ ಮೋದಿ ಕೆಂಪು ಹಾಸು ಹಾಸಿದವರಿಗೆ ಏನು ಸಂದೇಶ ನೀಡುತ್ತಿದ್ದಾರೆ ಎಂದು ಪ್ರಶ್ನಿಸಿದೆ. ಹಿಮಂತ ಬಿಸ್ವಾ ಶರ್ಮಾ ಅವರನ್ನು ವಜಾಗೊಳಿಸಬೇಕು ಮತ್ತು ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.