ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಪೊಲೀಸ್ ಸಮವಸ್ತ್ರ ಧರಿಸಿ ಸ್ಪಾದಲ್ಲಿ ಮಹಿಳೆ ಜತೆ ಅಸಭ್ಯ ವರ್ತನೆ: ಕಿಡಿಗೇಡಿಯ ಅನುಚಿತ ವರ್ತನೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ

Viral Video: ಹರಿಯಾಣದ ಫರಿದಾಬಾದ್‌ನ ಸ್ಪಾ ಕೇಂದ್ರವೊಂದರಲ್ಲಿ ಖಾಕಿ ಸಮವಸ್ತ್ರಧಾರಿ ಧರಿಸಿದ್ದ ವ್ಯಕ್ತಿ ಮಹಿಳೆಯನ್ನು ಅಸಭ್ಯವಾಗಿ ಸ್ಪರ್ಶಿಸಿದ್ದಾನೆ‌. ಈ ಆಘಾತಕಾರಿ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ. ಈ ಬಗ್ಗೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.

ಹರಿಯಾಣದಲ್ಲಿ ಮಹಿಳೆ ಜತೆ ಅಸಭ್ಯವಾಗಿ ವರ್ತಿಸಿದ ಪೊಲೀಸ್ ಅಧಿಕಾರಿ

ಚಂಡೀಗಢ, ಜೂ. 23: ಕಾನೂನು ರಕ್ಷಣೆ ಮಾಡಬೇಕಾದ ಪೊಲೀಸ್ ಅಧಿಕಾರಿಯೇ ಮಹಿಳೆ ಜತೆ ಅಸಭ್ಯವಾಗಿ ನಡೆದುಕೊಂಡಿರುವ ಘಟನೆ ನಡೆದಿದೆ. ಹರಿಯಾಣದ ಫರಿದಾಬಾದ್‌ನ ಸ್ಪಾ ಕೇಂದ್ರವೊಂದರಲ್ಲಿ ಖಾಕಿ ಸಮವಸ್ತ್ರ ಧರಿಸಿದ್ದ ವ್ಯಕ್ತಿ ಮಹಿಳೆಯನ್ನು ಅಸಭ್ಯವಾಗಿ ಸ್ಪರ್ಶಿಸಿದ್ದಾನೆ‌. ಈ ಆಘಾತಕಾರಿ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಸೋಷಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ (Viral News) ಆಗಿದೆ. ಸಾರ್ವಜನಿಕರಿಗೆ ರಕ್ಷಣೆ ನೀಡುವ ಪೊಲೀಸರೇ ಈ ರೀತಿ ವರ್ತಿಸಿದರೆ ಹೇಗೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೈರಲ್ ದೃಶ್ಯದಲ್ಲಿ ಆವರಣದೊಳಗೆ ಮೂವರು ವ್ಯಕ್ತಿಗಳು ನಿಂತಿರುವುದನ್ನು ಕಾಣಬಹುದು. ಒಬ್ಬ ವ್ಯಕ್ತಿ ಪೊಲೀಸ್ ಸಮವಸ್ತ್ರ ಧರಿಸಿದ್ದರೆ, ಇನ್ನೊಬ್ಬ ವ್ಯಕ್ತಿ ಭದ್ರತಾ ಸಿಬ್ಬಂದಿಯ ಸಮವಸ್ತ್ರ ತೊಟ್ಟಿದ್ದಾನೆ. ಕೆಂಪು ಟಾಪ್ ಮತ್ತು ಕಪ್ಪು ಜೀನ್ಸ್ ಧರಿಸಿದ ಮಹಿಳೆಯೊಬ್ಬರು ಅವರೊಂದಿಗೆ ಮಾತನಾಡುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ.

ವಿಡಿಯೊ ನೋಡಿ:



ವಿಡಿಯೊ ಮುಂದುವರಿದಂತೆ, ಪೊಲೀಸ್ ಸಮವಸ್ತ್ರ ಧರಿಸಿದ ವ್ಯಕ್ತಿ ಮಹಿಳೆಯನ್ನು ಅನುಚಿತವಾಗಿ ಸ್ಪರ್ಶಿಸಿರುವುದು ಕಂಡು ಬಂದಿದೆ. ಆಕೆಯ ಕೂದಲನ್ನು ಪಕ್ಕಕ್ಕೆ ಸರಿಸಿ ನಗುತ್ತಾ ಕುತ್ತಿಗೆಯ ಬಳಿ ಸ್ಪರ್ಶಿಸುತ್ತಿರುವುದು ಕಂಡು ಬಂದಿದೆ. ​ವಾಣಿಜ್ಯ ಸಂಕೀರ್ಣವೊಂದರಲ್ಲಿರುವ ಥಾಯ್ ಸ್ಪಾ ಕೇಂದ್ರದೊಳಗೆ ಈ ಘಟನೆ ನಡೆದಿದೆ. ಈ ದೃಶ್ಯ ವೈರಲ್ ಆಗುತ್ತಿದ್ದಂತೆ ಹಲವು ಬಳಕೆದಾರರು ಕಿಡಿಕಾರಿದ್ದಾರೆ.

ಫ್ರಾನ್ಸ್‌ನಲ್ಲಿ ಮಹಿಳೆಯರ ಸುರಕ್ಷತೆ ಆದ್ಯತೆ; ಮುಂಜಾನೆ 4:30ಕ್ಕೆ ಒಬ್ಬಂಟಿಯಾಗಿ ಬೀದಿಯಲ್ಲಿ ಓಡಾಡಿದ ಭಾರತೀಯ ಮಹಿಳೆ

ಸಮವಸ್ತ್ರದಲ್ಲಿ ಕಾಣಿಸಿಕೊಂಡ ವ್ಯಕ್ತಿ ನಿಜವಾದ ಪೊಲೀಸ್‌ ಆಗಿದ್ದರೆ ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹಲವರು ಆಗ್ರಹಿಸಿದ್ದಾರೆ. ವಿಡಿಯೊದಲ್ಲಿ ಕಂಡುಬರುವ ವ್ಯಕ್ತಿ ನಿಜವಾಗಿಯೂ ಪೊಲೀಸ್ ಸಿಬ್ಬಂದಿಯೇ ಅಥವಾ ಹಾಗೆ ನಟಿಸುತ್ತಿದ್ದನಾ ಎನ್ನುವ ಪ್ರಶ್ನೆ ಕೂಡ ಮೂಡಿ ಬಂದಿದೆ. ​ಈ ದೃಶ್ಯ ತೀವ್ರ ಚರ್ಚೆಗೆ ಗ್ರಾಸವಾಗಿದ್ದರೂ, ಇದರ ಸತ್ಯಾಸತ್ಯತೆಯನ್ನು ಇನ್ನೂ ತಿಳಿದು ಬಂದಿಲ್ಲ. ನೆಟ್ಟಿಗರೊಬ್ಬರು, ʼʼಇಂತಹ ಕಾಮುಕನನ್ನು ಸುಮ್ಮನೆ ಬಿಡಬಾರದುʼʼ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಮತ್ತೊಬ್ಬರು, ʼʼರಕ್ಷಣೆ ಮಾಡುವವರೇ ಈ ಕೃತ್ಯ ಎಸಗಿದರೆ ಹೇಗೆ?ʼʼ ಎಂದು ಪ್ರಶ್ನಿಸಿದ್ದಾರೆ.