ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ವಿವಿ ಸೆಮಿಸ್ಟರ್ ಪರೀಕ್ಷೆಯಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯದ ಪ್ರಶ್ನೆ; ಪ್ರೊಫೆಸರ್ ಸಸ್ಪೆಂಡ್

controversial question: ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿವಿ ಸೆಮಿಸ್ಟರ್ ಪರೀಕ್ಷೆಯಲ್ಲಿ ಮುಸ್ಲಿಮರ ಬಗ್ಗೆ ಕೇಳಿರುವ ಪ್ರಶ್ನೆಯೊಂದಕ್ಕೆ ಸಂಬಂಧಿಸಿದಂತೆ ಭಾರಿ ವಿವಾದಕ್ಕೆ ಕಾರಣವಾಗಿದ್ದು, ಪ್ರಾಧ್ಯಾಪಕರನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ. ಪ್ರಶ್ನೆಪತ್ರಿಕೆಯ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಚರ್ಚೆಗೆ ಕಾರಣವಾಗಿದೆ.

ವಿವಿ ಪರೀಕ್ಷೆಯಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯದ ಪ್ರಶ್ನೆ

ದೆಹಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿವಿ ಪರಶ್ನೆ ಪತ್ರಿಕೆ -

Priyanka P
Priyanka P Dec 24, 2025 3:52 PM

ನವದೆಹಲಿ, ಡಿ. 24: ಇಲ್ಲಿನ ಜಾಮಿಯಾ ಮಿಲಿಯಾ ಇಸ್ಲಾಮಿಯಾ (JMI) ವಿಶ್ವವಿದ್ಯಾಲಯದ ಪ್ರಾಧ್ಯಾಪಕರೊಬ್ಬರು ಸೆಮಿಸ್ಟರ್ ಪರೀಕ್ಷೆಯಲ್ಲಿ ಕೇಳಿದ ಪ್ರಶ್ನೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಚರ್ಚೆ ಹುಟ್ಟು ಹಾಕಿದೆ. ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾದ ನಂತರ ಅವರನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ. ಈ ವಿಷಯದ ಬಗ್ಗೆ ತನಿಖೆ ನಡೆಸಲು ವಿಶ್ವವಿದ್ಯಾಲಯವು ಸಮಿತಿಯನ್ನು ರಚಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ (viral news).

ಈ ವಾರದ ಆರಂಭದಲ್ಲಿ ನಡೆದ ಬಿಎ (ಆನರ್ಸ್) ಸಮಾಜಶಾಸ್ತ್ರದ ಮೊದಲ ಸೆಮಿಸ್ಟರ್ ಪರೀಕ್ಷೆಯಲ್ಲಿ ಭಾರತದಲ್ಲಿ ಸಾಮಾಜಿಕ ಸಮಸ್ಯೆಗಳು ಎಂಬ ಶೀರ್ಷಿಕೆಯ ಪ್ರಬಂಧದ ಮೇಲೆ ಕೇಳಲಾದ 15 ಅಂಕಗಳ ಪ್ರಶ್ನೆ ಸದ್ಯ ವಿವಾದ ಹುಟ್ಟು ಹಾಕಿದೆ. ಭಾರತದಲ್ಲಿ ಮುಸ್ಲಿಂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳನ್ನು ಸೂಕ್ತ ಉದಾಹರಣೆಗಳೊಂದಿಗೆ ವಿವರಿಸಿ ಎಂಬ ಪ್ರಶ್ನೆ ನೀಡಲಾಯಿತು.

ವಿಶ್ವದಲ್ಲೇ ಅತೀ ಪ್ರಾಚೀನ ವಿಶ್ವವಿದ್ಯಾನಿಲಯ ಯಾವುದು ಗೊತ್ತೆ?

ಪ್ರೊ. ವೀರೇಂದ್ರ ಬಾಲಾಜಿ ಶಹಾರೆ ಈ ಪ್ರಶ್ನೆ ರಚಿಸಿದ್ದು ಅವರ ವಿರುದ್ದ ಸಾಕಷ್ಟು ಟೀಕೆ ವ್ಯಕ್ತವಾಗುತ್ತಿದೆ. ಅವರ ವಿರುದ್ಧ ಸಾಕಷ್ಟು ದೂರು ಬಂದ ನಂತರ, ವಿಶ್ವವಿದ್ಯಾನಿಲಯವು ತಾತ್ಕಾಲಿಕವಾಗಿ ಅಮಾನತುಗೊಳಿಸಿದೆ. ಜತೆಗೆ ತನಿಖಾ ಸಮಿತಿಯನ್ನು ರಚಿಸಲಾಗಿದೆ. ʼʼಸಮಿತಿಯು ತನ್ನ ವರದಿಯನ್ನು ಸಲ್ಲಿಸುವವರೆಗೆ, ಸಂಬಂಧಪಟ್ಟ ಪ್ರಾಧ್ಯಾಪಕರನ್ನು ಅಮಾನತುಗೊಳಿಸಲಾಗಿದೆʼʼ ಎಂದು ವಿಶ್ವವಿದ್ಯಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಲ್ಲಿದೆ ವೈರಲ್ ಫೋಟೊ:



ತಾತ್ಕಾಲಿಕ ರಿಜಿಸ್ಟ್ರಾರ್ ಆಗಿರುವ ಸಿಎ ಶೇಖ್ ಸಫಿಉಲ್ಲಾಹ್ ಸಹಿ ಮಾಡಿದ ಆದೇಶವು ಪತ್ರವು ಸದ್ಯ ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಅದರಲ್ಲಿ ಮುಂದಿನ ಆದೇಶವರೆಗೂ ಪ್ರೊ. ವೀರೇಂದ್ರ ಬಾಲಾಜಿ ಶಹಾರೆ ಅವರನ್ನು ಅಮಾನತುಗೊಳಿಸಿರುವುದನ್ನು ಉಲ್ಲೇಖಿಸಲಾಗಿದೆ.

ಅಮಾನತು ಅವಧಿಯಲ್ಲಿ ಪ್ರೊಫೆಸರ್ ಶಹಾರೆ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ದೆಹಲಿಯನ್ನು ಬಿಟ್ಟು ಹೋಗುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಜತೆಗೆ ನಿಯಮಗಳ ಪ್ರಕಾರ ಪೊಲೀಸ್ ಎಫ್‌ಐಆರ್ ದಾಖಲಿಸಲಾಗುವುದು ಎಂದು ಉಲ್ಲೇಖಿಸಲಾಗಿದೆ. ಆದರೆ ವಿಶ್ವವಿದ್ಯಾನಿಲಯದ ಅಧಿಕಾರಿಗಳು ಪ್ರಾಧ್ಯಾಪಕರ ವಿರುದ್ಧ ಎಫ್‌ಐಆರ್ ದಾಖಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ʼʼಅಧ್ಯಾಪಕರ ವಿರುದ್ಧ ಪೊಲೀಸ್ ಪ್ರಕರಣ ದಾಖಲಿಸುವ ಯಾವುದೇ ಪ್ರಸ್ತಾಪವಿಲ್ಲ. ಈ ವಿಷಯವನ್ನು ಸಮಿತಿಯ ಮೂಲಕ ಆಂತರಿಕವಾಗಿ ಪರಿಶೀಲಿಸಲಾಗುತ್ತಿದೆʼʼ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇನ್ನು ಪ್ರಶ್ನೆ ಪತ್ರಿಕೆಯ ಫೋಟೊ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ.

ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಹಿರಿಯ ಸಲಹೆಗಾರ ಕಾಂಚನ್ ಗುಪ್ತಾ ಎಕ್ಸ್‌ ಖಾತೆಯಲ್ಲಿ ಅಮಾನತು ಸೂಚನೆಯನ್ನು ಹಂಚಿಕೊಂಡ ನಂತರ ಈ ವಿಚಾರವು ಮತ್ತಷ್ಟು ಗಮನ ಸೆಳೆಯಿತು. ʼʼಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿವಿಧ ಸಮುದಾಯದ ವಿದ್ಯಾರ್ಥಿಗಳನ್ನು ಒಳಗೊಂಡ ಕೇಂದ್ರೀಯ ವಿಶ್ವ ವಿದ್ಯಾಲಯ ಈ ಪ್ರಶ್ನೆಯು ದುರುದ್ದೇಶಪೂರಿತ ಉದ್ದೇಶವನ್ನು ತೋರಿಸುತ್ತದೆʼʼ ಎಂದು ಪತ್ರಿಕೆ ಸಿದ್ಧಪಡಿಸಿದವರನ್ನು ಗುಪ್ತಾ ಟೀಕಿಸಿದ್ದಾರೆ.

ಜಾಮಿಯಾ ಮಿಲಿಯಾ ಇಸ್ಲಾಮಿಯಾ ಅಮಾನತು ಆದೇಶವನ್ನು ಮೀರಿ ವಿವರವಾದ ಸಾರ್ವಜನಿಕ ಹೇಳಿಕೆಯನ್ನು ನೀಡಿಲ್ಲವಾದರೂ, ವಿಚಾರಣಾ ಸಮಿತಿಯು ಪ್ರಶ್ನೆಯನ್ನು ಹೇಗೆ ರೂಪಿಸಲಾಯಿತು ಮತ್ತು ಅನುಮೋದಿಸಲಾಯಿತು ಮತ್ತು ಅದು ವಿಶ್ವವಿದ್ಯಾಲಯದ ಮಾನದಂಡಗಳನ್ನು ಅಥವಾ ಪರೀಕ್ಷಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿದೆಯೇ ಎಂಬುದನ್ನು ಪರಿಶೀಲಿಸುತ್ತದೆ ಎಂದು ಮೂಲಗಳು ತಿಳಿಸಿವೆ. ಸಮಿತಿಯ ತನಿಖೆಯು ಪ್ರಕರಣದ ಮುಂದಿನ ಕ್ರಮವನ್ನು ನಿರ್ಧರಿಸುವ ನಿರೀಕ್ಷೆಯಿದೆ.