ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ನೋಯ್ಡಾ ಕಾಲೇಜಿನಲ್ಲಿ ಜೂನಿಯರ್ ವಿದ್ಯಾರ್ಥಿನಿ ಮೇಲೆ ಹಲ್ಲೆ: ಕಪಾಳಮೋಕ್ಷ ಮಾಡಿ ದೌರ್ಜನ್ಯ!

Viral Video: ಗ್ರೇಟರ್ ನೋಯ್ಡಾದ ಖಾಸಗಿ ವಿಶ್ವವಿದ್ಯಾಲಯದ ವಿಡಿಯೊವೊಂದು ವೈರಲ್ ಆಗಿದ್ದು ಸೀನಿಯರ್ ವಿದ್ಯಾರ್ಥಿಗಳ ಗುಂಪೊಂದು ಜೂನಿಯರ್ ವಿದ್ಯಾರ್ಥಿಗಳ ಮೇಲೆ ಹಲ್ಲೆಯನ್ನು ನಡೆಸಿದೆ. ವಿದ್ಯಾರ್ಥಿನಿಯೊಬ್ಬಳು ಜೂನಿಯರ್ ವಿದ್ಯಾರ್ಥಿನಿಗೆ ಸರಿಯಾಗಿ ನಿಂದಿಸಿ ಕಪಾಳಮೋಕ್ಷ ಮಾಡಿದ್ದಾಳೆ‌. ಸದ್ಯ ಈ ವಿಡಿಯೊ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಆತಂಕವನ್ನು ವ್ಯಕ್ತ ಪಡಿಸಿದ್ದಾರೆ..

ನೋಯ್ಡಾದಲ್ಲಿ ಸೀನಿಯರ್ ವಿದ್ಯಾರ್ಥಿಗಳ ರ‍್ಯಾಗಿಂಗ್: ನೆಟ್ಟಿಗರು ಕಿಡಿ

ನೋಯ್ಡಾ ಕಾಲೇಜಿನಲ್ಲಿ ಸೀನಿಯರ್ ವಿದ್ಯಾರ್ಥಿಗಳಿಂದ ರ‍್ಯಾಗಿಂಗ್ -

Profile
Pushpa Kumari May 5, 2026 1:37 PM

ನೋಯ್ಡಾ, ಮೇ 5: ಪ್ರತಿಷ್ಠಿತ ಕಾಲೇಜಿನಲ್ಲೇ ವಿದ್ಯಾರ್ಥಿಗಳಿಂದ ರ‍್ಯಾಗಿಂಗ್​ ನಡೆದಿರುವ ಆರೋಪ ವೊಂದು ಕೇಳಿ ಬಂದಿದೆ. ಗ್ರೇಟರ್ ನೋಯ್ಡಾದ ಖಾಸಗಿ ವಿಶ್ವವಿದ್ಯಾಲಯದ ವಿಡಿಯೊವೊಂದು ವೈರಲ್ ಆಗಿದ್ದು ಸೀನಿಯರ್ ವಿದ್ಯಾರ್ಥಿಗಳ ಗುಂಪೊಂದು ಜೂನಿಯರ್ ವಿದ್ಯಾರ್ಥಿಗಳ ಮೇಲೆ ಹಲ್ಲೆಯನ್ನು ನಡೆಸಿದೆ. ವಿದ್ಯಾರ್ಥಿನಿಯೊಬ್ಬಳು ಜೂನಿಯರ್ ವಿದ್ಯಾರ್ಥಿನಿಗೆ ಸರಿಯಾಗಿ ನಿಂದಿಸಿ ಕಪಾಳಮೋಕ್ಷ ಮಾಡಿದ್ದಾಳೆ‌. ಸದ್ಯ ಈ ವಿಡಿಯೊ ವೈರಲ್ (Viral News) ಆಗುತ್ತಿದ್ದಂತೆ ನೆಟ್ಟಿಗರು ಆತಂಕವನ್ನು ವ್ಯಕ್ತ ಪಡಿಸಿದ್ದಾರೆ

ಆನ್‌ಲೈನ್‌ನಲ್ಲಿ ಈ ವಿಡಿಯೊ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಈ ದೃಶ್ಯಾವಳಿಯಲ್ಲಿ, ಸಿನಿ ಯರ್ ಕ್ಲಾಸ್ ನ ಹುಡುಗಿಯರ ಗುಂಪೊಂದು ಜೂನಿಯರ್ ವಿದ್ಯಾರ್ಥಿನಿಯ ಮೇಲೆ ಕ್ರೂರವಾಗಿ ರ‍್ಯಾಗಿಂಗ್ ಮತ್ತು ಹಲ್ಲೆಯನ್ನು ನಡೆಸಿದೆ. ಅಷ್ಟೇ ಅಲ್ಲದೆ ಆಕೆಯ ಕುಟುಂಬದ ಬಗ್ಗೆ ನಿಂದನೀಯ ಪದಗಳನ್ನು ಬಳಸಿ ದೌರ್ಜನ್ಯವನ್ನು ಎಸಗಲಾಗಿದೆ.

ವಿಡಿಯೊ ನೋಡಿ:



ವೈರಲ್ ಆದ ವಿಡಿಯೊದಲ್ಲಿ ಶಾಲಾ ಕಾಲೇಜಿನ ಬಳಿ ವಿದ್ಯಾರ್ಥಿಗಳ ಗುಂಪೊಂದು ನಿಂತಿರುವುದು ಕಾಣುತ್ತದೆ.. ಸೀನಿಯರ್ ವಿದ್ಯಾರ್ಥಿನಿಯೂ ತನ್ನ ಜೂನಿಯರ್ ವಿದ್ಯಾರ್ಥಿಯ ಕೆನ್ನೆಗೆ ಹಲವು ಭಾರೀ ಬಾರಿಸಿದ್ದಾಳೆ. ಜೂನಿಯರ್ ವಿದ್ಯಾರ್ಥಿ ಪದೇ ಪದೇ ನಿರಾಕರಿಸಿದರೂ ಹಲ್ಲೆ ಮುಂದು ವರೆದಿದೆ. ಕೆಟ್ಟ ಪದಗಳಿಂದ ಆಕೆಯ ಕುಟುಂಬಕ್ಕೆ ಬೈದಿದ್ದು ಹೊಡೆಯಬೇಡಿ ಎಂದು ಬೇಡಿಕೊಂಡರೂ ಬಿಡದೇ ಕಿರುಕುಳ ನೀಡಿದ್ದಾರೆ.

ನವ ಜೋಡಿಗಳಿಗೆ ಶುಭ ಹಾರೈಸುತ್ತಿದ್ದಾಗಲೇ ದಿಢೀರ್ ಆಗಿ ಕುಸಿದ ವೇದಿಕೆ

ಆಕೆಯಿಂದ ಬಲವಂತವಾಗಿ ಕ್ಷಮೆ ಕೇಳುವಂತೆ ಒತ್ತಾಯಿಸಿದ್ದಾರೆ. ಸುತ್ತಲೂ ಇದ್ದ ಇತರ ವಿದ್ಯಾರ್ಥಿನಿಯರು ಈ ಕೃತ್ಯ ತಡೆಯುವ ಬದಲಾಗಿ ಬೆಂಬಲ ನೀಡುತ್ತಾ ನಿಂತಿದ್ದಾರೆ. ವೀಡಿಯೋ ವೈರಲ್ ಆಗುತ್ತಿದ್ದಂತೆ ದಾದ್ರಿ ಪೊಲೀಸ್ ಠಾಣೆ ಈ ಬಗ್ಗೆ ಪರಿಶೀಲನೆ ನಡೆಸಿದ‌ಎ. ಅಧಿಕಾರಿಗಳ ಪ್ರಕಾರ, ಘಟನೆಯು ಸುಮಾರು 10-12 ದಿನಗಳ ಹಿಂದೆ ಖಾಸಗಿ ವಿಶ್ವವಿದ್ಯಾಲಯದ ಕ್ಯಾಂಪಸ್‌ ನಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ಸಂಬಂಧಪಟ್ಟ ವಿದ್ಯಾರ್ಥಿ ವಿರುದ್ಧ ಅಗತ್ಯ ಶಿಸ್ತು ಕ್ರಮ ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ.

ಈ ಬಗ್ಗೆ ನೆಟ್ಟಿಗರು ನಾನಾ ಬಗೆಯ ಕಾಮೆಂಟ್ ಮಾಡಿದ್ದು ಬಳಕೆದಾರರೊಬ್ಬರು ಇದು ಶಿಕ್ಷಣವಲ್ಲ‌‌‌‌‌.. ಮಾನಸಿಕ ಹಿಂಸೆ ಆಡಳಿತ ಮತ್ತು ಪೊಲೀಸರು ತಕ್ಷಣ ಕ್ರಮ ತೆಗೆದು ಕೊಳ್ಳಬೇಕು ಎಂದರು. ಮತ್ತೊಬ್ಬರು ರ‍್ಯಾಗಿಂಗ್ ಅಲ್ಲ, ಇದು ಸಂಪೂರ್ಣ ಕ್ರಿಮಿನಲ್ ಹಿಂಸೆ... ಆಡಳಿತವು ವಿದ್ಯಾರ್ಥಿ ಯನ್ನು ತಕ್ಷಣವೇ ಅಮಾನತುಗೊಳಿಸಬೇಕು, ಪೊಲೀಸರು ಎಫ್‌ಐಆರ್ ದಾಖಲಿಸಬೇಕು ಎಂದು ಕಿಡಿಕಾರಿದ್ದಾರೆ.