ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿ ಬಿದ್ದ ಮಹಿಳೆ: ಸಮಯ ಪ್ರಜ್ಞೆ ಮೆರೆದು ರಕ್ಷಿಸಿದ ಆರ್‌ಪಿಎಸ್‌ಎಫ್ ಸಿಬ್ಬಂದಿ

Viral Video: ಮಹಿಳೆಯೊಬ್ಬಳು ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಪ್ರಯತ್ನಿಸಿದ ಆಘಾತಕಾರಿ ಘಟನೆಯೊಂದು ನಡೆದಿದೆ. ಕೂಡಲೆ ಸಮಯ ಪ್ರಜ್ಞೆ ಮೆರೆದ ಆರ್‌ಪಿಎಸ್‌ಎಫ್ ಸಿಬ್ಬಂದಿ ಆಕೆಯನ್ನು ರಕ್ಷಿಸಿದ್ದಾರೆ. ಉತ್ತರ ಪ್ರದೇಶದ ​ಪ್ರಯಾಗ್‌ರಾಜ್ ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್ 1ರಲ್ಲಿ ಈ ಘಟನೆ ನಡೆದಿದೆ.

ರೈಲಿನಡಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಆರ್‌ಪಿಎಸ್‌ಎಫ್ ಸಿಬ್ಬಂದಿ

ಸಾಂದರ್ಭಿಕ ಚಿತ್ರ -

Profile
Pushpa Kumari Sep 29, 2026 5:29 PM

ಲಖನೌ, ಸೆ. 29: ಮಹಿಳೆಯೊಬ್ಬಳು ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಪ್ರಯತ್ನಿಸಿದ ಆಘಾತಕಾರಿ ಘಟನೆ ನಡೆದಿದೆ. ಕೂಡಲೇ ಸಮಯ ಪ್ರಜ್ಞೆ ಮೆರೆದ ಆರ್‌ಪಿಎಸ್‌ಎಫ್ ಸಿಬ್ಬಂದಿ ಎಚ್ಚೆತ್ತು ಆಕೆಯನನು ರಕ್ಷಿಸಿದ್ದಾರೆ. ಉತ್ತರ ಪ್ರದೇಶದ ​ಪ್ರಯಾಗ್‌ರಾಜ್ ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್ 1ರಲ್ಲಿ ಈ ಘಟನೆ ನಡೆದಿದೆ. ಇದರ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ (Viral News) ಆಗುತ್ತಿದೆ.

ಚಲಿಸುವ ರೈಲಿನಿಂದ ಇಳಿಯಲು ಮಹಿಳೆ ಪ್ರಯತ್ನಿಸಿದ್ದಾಳೆ. ಆದರೆ ಸಮತೋಲನ ತಪ್ಪಿ ಪ್ಲಾಟ್‌ಫಾರ್ಮ್‌ಗೆ ಬಿದ್ದು, ನಡುವಿನ ಜಾಗದಲ್ಲಿ ಸಿಲುಕಿಕೊಂಡಿದ್ದಾಳೆ. ಪ್ರಯಾಗ್‌ರಾಜ್ ಜಂಕ್ಷನ್‌ನಲ್ಲಿ ಸಂಭವಿಸಬಹುದಾಗಿದ್ದ ಈ ಭೀಕರ ಅಪಘಾತವನ್ನು ಮೂವರು ಆರ್‌ಪಿಎಸ್‌ಎಫ್‌ ಸಿಬ್ಬಂದಿ ತಪ್ಪಿಸಿದ್ದಾರೆ.

ವಿಡಿಯೊ ನೋಡಿ:



ಚಲಿಸುವ ರೈಲಿನಿಂದ ಇಳಿಯಲು ಮಹಿಳೆ ಪ್ರಯತ್ನಿಸಿದಾಗ ಸಮತೋಲನ ತಪ್ಪಿ ಪ್ಲಾಟ್‌ಫಾರ್ಮ್‌ಗೆ ಬಿದ್ದು, ರೈಲು ಮತ್ತು ಫ್ಲಾಟ್‌ಫಾರ್ಮ್‌ ನಡುವಿನ ಜಾಗದಲ್ಲಿ ಸಿಲುಕಿಕೊಂಡಿದ್ದಳು. ಇದನ್ನು ಗಮನಿಸಿದ RPSF 2ನೇ ಬೆಟಾಲಿಯನ್‌ನ ಎಎಸ್‌ಐ ಮಹೇಶ್ ಕುಮಾರ್ ಹರಿತ್ವಾಲ್, ಕಾನ್‌ಸ್ಟೇಬಲ್‌ಗಳಾದ ಪ್ರವೇಶ್ ಕುಮಾರ್ ಮತ್ತು ಬಸಂತ್ ತಕ್ಷಣವೇ ಸ್ಪಂದಿಸಿದ್ದಾರೆ.

ತಕ್ಷಣವೇ ತುರ್ತು ಚೈನ್ ಎಳೆದು ರೈಲನ್ನು ನಿಲ್ಲಿಸಿದರು. ನಂತರ ಕೇವಲ 5 ನಿಮಿಷಗಳಲ್ಲಿ ಅಪಾಯದಲ್ಲಿದ್ದ ಮಹಿಳೆಯನ್ನು ರಕ್ಷಿಸಿದ್ದಾರೆ. ಸಿಸಿಟಿವಿ ಕ್ಯಾಮೆರಾಗಳಲ್ಲಿ ಅಪಾಯದಲ್ಲಿರುವ ಮಹಿಳೆಯನ್ನು ಆರ್‌ಪಿಎಸ್‌ಎಫ್ ಸಿಬ್ಬಂದಿ ತ್ವರಿತವಾಗಿ ಸುರಕ್ಷಿತವಾಗಿ ಹೊರತರಲು ಶ್ರಮಿಸುತ್ತಿರುವುದು ಕಂಡು ಬಂದಿದೆ.

ನೇಪಾಳ ಪ್ರವಾಹದಲ್ಲಿ ಮೃತಪಟ್ಟ ಮಹಿಳೆಯ ಚಿನ್ನದ ಓಲೆ ಕದ್ದ ಕಿಡೀಗೆಡಿಗಳು!

ಈ ಕಾರ್ಯಾಚರಣೆಯನ್ನು ರೈಲ್ವೆಯ ‘ಆಪರೇಷನ್ ಜೀವನ್ ರಕ್ಷಾ’ ಯೋಜನೆಯಡಿ ಕೈಗೊಳ್ಳಲಾಗಿದೆ. ಈ ವಿಡಿಯೊ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಪ್ರತಿಕ್ರಿಯೆ ನೀಡಿದ್ದಾರೆ. ಒಬ್ಬರು, ʼʼಸಿಬ್ಬಂದಿಯ ಸಮಯಪ್ರಜ್ಞೆ ಮೆಚ್ಚಲೇ ಬೇಕುʼʼ ಎಂದು ಕಾಮೆಂಟ್ ಮಾಡಿದ್ದಾರೆ. ​ಚಲಿಸುವ ರೈಲನ್ನು ಹತ್ತುವುದು ಅಥವಾ ಇಳಿಯುವುದು ಅತ್ಯಂತ ಅಪಾಯಕಾರಿ ಎಂಬ ಎಚ್ಚರಿಕೆ ಇದ್ದರೂ ಜನ ಯಾಕೆ ಈ ರೀತಿ ವರ್ತಿಸುತ್ತಿದ್ದಾರೆ? ಎಂದು ಅನೇಕರು ಪ್ರಶ್ನಿಸಿದ್ದಾರೆ.