ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Viral Video: ವಾಕಿಂಗ್ ತೆರಳಿದ್ದ ಮಾಜಿ ಶಾಸಕಿ ಮೇಲೆ ಏಕಾಏಕಿಯಾಗಿ ಹರಿದ ಕಾರು- ಶಾಕಿಂಗ್‌ ವಿಡಿಯೊ ಇಲ್ಲಿದೆ

ಶಿವಸೇನೆಯ ಮಾಜಿ ಶಾಸಕಿ ನಿರ್ಮಲಾ ಗವಿತ್ ಅವರು ತಮ್ಮ ಮೊಮ್ಮಗನೊಂದಿಗೆ ಮನೆಯ ಬಳಿ ಸಂಜೆ ವಾಕಿಂಗ್ ಹೋಗುತ್ತಿದ್ದರು. ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗಲೇ ಕಾರ್ ಒಂದು ಹಿಂದಿನಿಂದ ಬಂದು ಗವಿತ್ ಅವರ ಮೇಲೆ ಹರಿದಿದೆ. ಶಾಸಕಿ ನಿರ್ಮಲಾ ಗವಿತ್ ಅವರನ್ನು ತತ್ ಕ್ಷಣವೇ ಹತ್ತಿರದ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ದಾಖಲಿಸಲಾಗಿದೆ.

ಮಾಜಿ ಶಾಸಕಿ ಮೇಲೆ ಏಕಾಏಕಿಯಾಗಿ ಹರಿದ ಕಾರು

ಶಿವಸೇನೆಯ ಮಾಜಿ ಶಾಸಕಿ ಮೇಲೆ ಏಕಾಏಕಿಯಾಗಿ ಹರಿದ ಕಾರು -

Profile
Pushpa Kumari Nov 26, 2025 4:22 PM

ಮುಂಬೈ: ರಸ್ತೆಯಲ್ಲಿ ವಾಹನ ಚಲಾಯಿಸುವಾಗ ಎಷ್ಟು ಜಾಗೃತಿ ವಹಿಸಿದರು ಅದು ಕಡಿಮೆ. ವಾಹನ ಚಾಲಕರು ರಸ್ತೆ ನಿಯಮ ಉಲ್ಲಂಘಿಸಿದಂತೆ ಅನೇಕ ಅಪಘಾತ ನಡೆಯುವ ಪ್ರಮಾಣ ಗಣನೀಯವಾಗಿ ಹೆಚ್ಚಾಗುತ್ತಿದೆ. ಅಂತೆಯೇ ಮಹಿಳೆಯೊಬ್ಬರು ತಮ್ಮ ಮೊಮ್ಮಗನ ಜೊತೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಕಾರು ಏಕಾಏಕಿ ಢಿಕ್ಕಿ ಹೊಡೆದ ಘಟನೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ನಡೆದಿದೆ. ಆ ಮಹಿಳೆ ಶಿವಸೇನೆಯ ಮಾಜಿ ಶಾಸಕಿ ನಿರ್ಮಲಾ ಗವಿತ್ ಎಂದು ತಿಳಿದುಬಂದಿದೆ.

ಕಾರು ಢಿಕ್ಕಿ ಹೊಡೆದ ರಭಸಕ್ಕೆ ಶಿವ ಸೇನೆಯ ಮಾಜಿ ಶಾಸಕಿ ನಿರ್ಮಲಾ ಗವಿತ್ (Nirmala Gavit) ತೀವ್ರವಾಗಿ ಗಾಯಗೊಂಡಿದ್ದಾರೆ. ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತ ನಡೆದ ಸ್ಥಳದಲ್ಲಿ ಅಕ್ಕಪಕ್ಕದ ಮನೆಯ ಸಿಸಿಟಿವಿಯಲ್ಲಿ ಈ ದೃಶ್ಯಗಳು ಸೆರೆಯಾಗಿವೆ. ಸದ್ಯ ನಾಸಿಕ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ. ಸದ್ಯ ನೆಟ್ಟಿಗರು ಚಾಲಕನ ಅಜಾಗರೂಕತೆ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.

ಶಿವಸೇನೆಯ ಮಾಜಿ ಶಾಸಕಿ ನಿರ್ಮಲಾ ಗವಿತ್ ಅವರು ತಮ್ಮ ಮೊಮ್ಮಗನೊಂದಿಗೆ ಮನೆಯ ಬಳಿ ಸಂಜೆ ವಾಕಿಂಗ್ ಹೋಗುತ್ತಿದ್ದರು. ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗಲೇ ಕಾರ್ ಒಂದು ಹಿಂದಿನಿಂದ ಬಂದು ಗವಿತ್ ಅವರ ಮೇಲೆ ಹರಿದಿದೆ. ಆ ಕಾರು ಸ್ವಲ್ಪ ದೂರಕ್ಕೆ ಅವರನ್ನು ಹೊತ್ತೊಯ್ದಿದೆ ಬಳಿಕ ರಸ್ತೆಬದಿಯಲ್ಲಿ ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ವೈರಲಾಗುತ್ತಿರುವ ವಿಡಿಯೊ ಇಲ್ಲಿದೆ



ಶಾಸಕಿ ನಿರ್ಮಲಾ ಗವಿತ್ ಅವರನ್ನು ತತ್ ಕ್ಷಣವೇ ಹತ್ತಿರದ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ದಾಖಲಿಸಲಾಗಿದೆ. ಅವರೊಂದಿಗೆ ನಡೆದುಕೊಂಡು ಹೋಗುತ್ತಿದ್ದ ಅವರ ಮೊಮ್ಮಗ ಹಾಗೂ ಇನ್ನೊಂದು ಹುಡುಗಿಗೆ ಯಾವುದೇ ಗಾಯಗಳಾಗಿಲ್ಲ. ಗವಿತ್ ಅವರಿಗೆ ತೀವ್ರವಾಗಿ ಗಾಯವಾಗಿದ್ದು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಪೊಲೀಸರು ಘಟನ ಸ್ಥಳದ ಸಿಸಿಟಿವಿ ಆಧಾರದ ಮೇಲೆ ಅವರ ಕುಟುಂಬಸ್ಥರ ದೂರಿನ ಅನ್ವಯ ಪ್ರಕರಣ ದಾಖಲಿಸಿದ್ದಾರೆ.

Viral News: ಮಿಚೆಲ್ ಒಬಾಮಾ ಹೊಸ ಫೋಟೋಶೂಟ್ ವೈರಲ್

ಸಿಸಿಟಿವಿ ದೃಶ್ಯಗಳು ವೈರಲ್ ಆದ ಬೆನ್ನಲ್ಲೆ ಪೊಲೀಸರ ತನಿಖೆ ಕೂಡ ತ್ವರಿತಗೊಂಡಿದೆ. ಅಪಘಾತ ಮಾಡಿದ್ದ ಚಾಲಕ ಪತ್ತೆಯಾಗಿಲ್ಲ. ಗವಿತ್ ಅವರ ಮಗಳು ನಯನಾ ಗವಿತ್ ಅವರು ಅಪಘಾತದ ಕುರಿತು ಕೆಲವು ಸಂಶಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಚಾಲಕನು ಕಾಣೆಯಾಗಿದ್ದು ಆತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಸಿಸಿಟಿವಿ ದೃಶ್ಯಾವಳಿಯ ಆಧಾರದ ಮೇಲೆ ಗಾಡಿಯ ನಂಬರ್ ಪ್ಲೇಟ್ ಕಂಡು ಗಾಡಿಯ ಮಾಲಿಕ ವಿಳಾಸ ಪತ್ತೆ ಹಚ್ಚಲಾಗಿದೆ. ಇದನ್ನು ಗಾಡಿ ಮಾಲಿಕನೇ ಮಾಡಿದ್ದ ಅಥವಾ ಆ ವೇಳೆ ಆ ವಾಹನ ಬೇರೆ ವ್ಯಕ್ತಿ ಚಲಾಯಿಸಿರಬಹುದೆ ಎಂದು ತನಿಖೆ ಮಾಡಲಾಗುತ್ತಿದೆ‌.

ನಿರ್ಮಲಾ ಗವಿತ್ ಅವರು 2014 ರಲ್ಲಿ ಇಗತ್ಪುರಿ ವಿಧಾನಸಭಾ ಸ್ಥಾನವನ್ನು ಗೆದ್ದು ನಂತರ ಠಾಕ್ರೆ ಬಣದಿಂದ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ (Shiv Sena) ಸೇರಿದ್ದರು. ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯವಾಗಿದ್ದ ಇವರು ಗಣನೀಯ ಸಾಧನೆ ಮಾಡಿದ್ದಾರೆ. ಈ ಮೂಲಕ ಈ ವಿಡಿಯೋಗೆ ನೆಟ್ಟಿ ಗರಿಂದ ನಾನಾ ತರನಾಗಿ ಪ್ರತಿಕ್ರಿಯೆ ಕೇಳಿಬರುತ್ತಿದೆ. ಇದು ಅಪಘಾತವೋ ಅಥವಾ ಉದ್ದೇಶ ಪೂರ್ವಕ ಮಾಡಿದ್ದ ಕೊಲೆಯ ಸಂಚು ಇರಬಹುದು ಶೀಘ್ರವೇ ತನಿಖೆ ನಡೆಸುವಂತೆ ತನಿಖಾಧಿಕಾರಿ ಗಳನ್ನು ಕುಟುಂಬದವರು ಮನವಿ ಕೂಡ ಮಾಡಿದ್ದಾರೆ.