ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಸಂಸತ್ತಿನ ಮೆಟ್ಟಿಲಿನಲ್ಲಿ ಜಾರಿದ ಕಾಂಗ್ರೆಸ್ ಸಂಸದ ಶಶಿ ತರೂರ್ ಸಹಾಯಕ್ಕೆ ಧಾವಿಸಿದ ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್

ಸಂಸತ್ತಿನ ಸಂಕೀರ್ಣದ ಒಳಗೆ ಮೆಟ್ಟಿಲುಗಳ ಮೇಲೆ ನಡೆದುಕೊಂಡು ಹೋಗುತ್ತಿದ್ದ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಜಾರಿ ಬಿದ್ದಿದ್ದು ತಕ್ಷಣ ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಸಹಾಯಕ್ಕೆ ಧಾವಿಸಿದ್ದಾರೆ. ಇದರ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಸಾಕಷ್ಟು ನೆಟ್ಟಿಗರ ಗಮನ ಸೆಳೆದಿದೆ.

ಸಂಗ್ರಹ ಚಿತ್ರ

ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್ (Congress MP Shashi Tharoor) ಅವರು ಬುಧವಾರ ಸಂಸತ್ತಿನ ಸಂಕೀರ್ಣದ ಒಳಗೆ ಮೆಟ್ಟಿಲುಗಳ ಮೇಲೆ ಜಾರಿ ಬೀಳುವುದರಲ್ಲಿದ್ದರು. ಅಷ್ಟರಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ (SP chief Akhilesh Yadav) ಅವರ ರಕ್ಷಣೆಗೆ ಧಾವಿಸಿದರು. ಇದರಿಂದ ಅಪಾಯವೊಂದು ತಪ್ಪಿತು. ಸಂಸತ್ತಿನಲ್ಲಿ ಕಾಂಗ್ರೆಸ್ (Congess) ಸಂಸದರ ಅಮಾನತು ವಿರುದ್ಧ ಪ್ರತಿಪಕ್ಷಗಳು ನಡೆಸಿದ ಪ್ರತಿಭಟನೆಯ ಬಳಿಕ ಉಂಟಾದ ಉದ್ವಿಗ್ನತೆ ನಡುವೆ ಈ ಘಟನೆ ನಡೆದಿದೆ. ಇದರ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಸಾಕಷ್ಟು ಮಂದಿಯ ಗಮನ ಸೆಳೆದಿದೆ.

ಸಂಸತ್ತಿನ ಸಂಕೀರ್ಣದ ಒಳಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಬುಧವಾರ ಮೆಟ್ಟಿಲುಗಳ ಮೇಲೆ ನಡೆದುಕೊಂಡು ಹೋಗುತ್ತಿದ್ದಾಗ ಜಾರಿ ಬೀಳುವುದರಲ್ಲಿದ್ದರು. ತಕ್ಷಣವೇ ಅವರ ಪಕ್ಕದಲ್ಲಿದ್ದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಮುಂದೆ ಬಂದು ಅವರಿಗೆ ಸಹಾಯ ಮಾಡಿದರು.

ರಾಜ್ಯಕ್ಕೆ ಮತ್ತೊಂದು ಹೈ ಸ್ಪೀಡ್ ರೈಲ್ವೆ ಕಾರಿಡಾರ್; ರೈಲ್ವೆ ಸಚಿವರ ಜತೆ ಎಚ್‌.ಡಿ. ಕುಮಾರಸ್ವಾಮಿ ಮಾತುಕತೆ

ವೈರಲ್ ಆಗಿರುವ ವಿಡಿಯೊದಲ್ಲಿ ತರೂರ್ ಅವರು ಮೆಟ್ಟಿಲುಗಳ ಕೆಳಗೆ ನಡೆದುಕೊಂಡು ಹೋಗುತ್ತಿದ್ದಾಗ ಅವರ ಕಾಲು ಜಾರಿದಂತಾಗುತ್ತದೆ. ಆಗ ಅಖಿಲೇಶ್ ಯಾದವ್ ಮತ್ತು ಹತ್ತಿರದಲ್ಲಿದ್ದ ಇತರ ಸಂಸದರು ಮತ್ತು ಸಿಬ್ಬಂದಿ ತಕ್ಷಣ ಅವರ ರಕ್ಷಣೆಗೆ ನಿಂತರು. ಇದರಿಂದ ತರೂರ್ ಅವರು ಸಮತೋಲನ ಪಡೆದು ನಡೆದರು.



ಬಜೆಟ್ ಅಧಿವೇಶನದಲ್ಲಿ ಎಂಟು ಸಂಸದರ ಅಮಾನತು ಕುರಿತು ವಿರೋಧ ಪಕ್ಷದ ಸದಸ್ಯರು ಜೋರಾಗಿ ಘೋಷಣೆಗಳನ್ನು ಕೂಗಿದ್ದರಿಂದ ಬುಧವಾರ ಲೋಕಸಭೆ ಅಧಿವೇಶನವನ್ನು ಕೆಲಕಾಲ ಮುಂದೂಡಲಾಯಿತು. ಈ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ವರ್ಷದ ಬಳಿಕ ಮಣಿಪುರದಲ್ಲಿ ರಚನೆಯಾಯ್ತು ಸರ್ಕಾರ; ಮುಖ್ಯಮಂತ್ರಿಯಾಗಿ ಯುನ್ಮಮ್‌ ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ

ಇದಕ್ಕೂ ಮೊದಲು ಅಮಾನತುಗೊಂಡ ವಿರೋಧ ಪಕ್ಷದ ಸಂಸದರು ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸುತ್ತಿದ್ದರು. ಇವರಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಹಿಬಿ ಈಡನ್, ಅಮರಿಂದರ್ ಸಿಂಗ್ ರಾಜಾ ವಾರಿಂಗ್, ಮಾಣಿಕ್ಕಮ್ ಟ್ಯಾಗೋರ್, ಗುರ್ಜೀತ್ ಸಿಂಗ್ ಔಜ್ಲಾ, ಪ್ರಶಾಂತ್ ಯದೋರಾವ್ ಪಡೋಲೆ, ಚಮಲಾ ಕಿರಣ್ ಕುಮಾರ್ ರೆಡ್ಡಿ, ಡೀನ್ ಕುರಿಯಾಕೋಸ್ ಮತ್ತು ಸಿಪಿಐ(ಎಂ) ಸಂಸದ ಎಸ್ ವೆಂಕಟೇಶನ್ ಇದ್ದರು.

ವಿದ್ಯಾ ಇರ್ವತ್ತೂರು

View all posts by this author