ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಬೀದಿ ನಾಯಿಗಳ ಬಗ್ಗೆ ಪರ-ವಿರೋಧ ಚರ್ಚೆ ನಡೆಯುತ್ತಿರುವ ಮಧ್ಯೆಯೇ ಬಾಲಕಿಯ ಮೇಲೆ ಶ್ವಾನ ದಾಳಿ; ಸಿಸಿ ಕ್ಯಾಮರಾದಲ್ಲಿ ಭೀಕರ ದೃಶ್ಯ ಸೆರೆ

Street dog attacks: ಯಾವುದೇ ಪ್ರಚೋದನೆಯಿಲ್ಲದೆ ಬೀದಿ ನಾಯಿಯು ಪುಟ್ಟ ಬಾಲಕಿಯ ಮೇಲೆ ದಾಳಿ ನಡೆಸಿರುವ ಆಘಾತಕಾರಿ ದೃಶ್ಯವು ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಈ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಉತ್ತರ ಪ್ರದೇಶದ ಮೊರಾದಾಬಾದ್ ಪೊಲೀಸ್ ಠಾಣೆ ಪ್ರದೇಶದ ಇಕ್ಬಾಲ್ ಗನ್ ಹೌಸ್ ಬಳಿ ಈ ಘಟನೆ ನಡೆದಿದೆ.

ಪುಟ್ಟ ಬಾಲಕಿಯ ಮೇಲೆ ಬೀದಿ ನಾಯಿ ದಾಳಿ

ಸಾಂದರ್ಭಿಕ ಚಿತ್ರ -

Priyanka P
Priyanka P Jan 8, 2026 7:15 PM

ಲಖನೌ, ಜ. 8: ಬೀದಿ ನಾಯಿಯೊಂದು ಬಾಲಕಿ ಮೇಲೆ ದಾಳಿ (street dog attacks) ಮಾಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ ಪೊಲೀಸ್ ಠಾಣೆ ಪ್ರದೇಶದ ಇಕ್ಬಾಲ್ ಗನ್ ಹೌಸ್ ಬಳಿ ನಡೆದಿದೆ. ಈ ಘಟನೆಯ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ (viral video) ಆಗಿದೆ.

ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಜನವರಿ 4ರ ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಇಬ್ಬರು ಮಹಿಳೆಯರು ಪುಟ್ಟ ಬಾಲೆಯ ಜತೆ ನಡೆದುಕೊಂಡು ಹೋಗುತ್ತಿರುವಾಗ ಬೀದಿ ನಾಯಿ ಅಪ್ರಚೋದಿತವಾಗಿ ದಾಳಿ ನಡೆಸಿದೆ. ಮೂವರ ಬಳಿ ಹಾದು ಹೋದ ಬೀದಿ ನಾಯಿ ಯಾವುದೇ ಪ್ರಚೋದನೆಯಿಲ್ಲದೆ ಇದ್ದಕ್ಕಿದ್ದಂತೆ ಮಗುವಿನ ಮೇಲೆ ಎರಗಿ ಆಕೆಯ ಕೈಯನ್ನು ಕಚ್ಚಿರುವುದು ವಿಡಿಯೊದಲ್ಲಿ ಕಂಡು ಬಂದಿದೆ.

ವಿಡಿಯೊ ವೀಕ್ಷಿಸಿ:



ನಾಯಿಯ ಹಿಡಿತದಿಂದ ಹುಡುಗಿಯನ್ನು ರಕ್ಷಿಸಲು ಇಬ್ಬರು ಮಹಿಳೆಯರು ಹೆಣಗಾಡುತ್ತಿರುವುದನ್ನು ನೋಡಬಹುದು. ಅಂತಿಮವಾಗಿ ನಾಯಿಯು ಅಲ್ಲಿಂದ ಓಡಿಹೋಗಿದೆ. ಈ ಮಧ್ಯೆ, ಆ ಪ್ರದೇಶದಲ್ಲಿ ಹಾದುಹೋಗುತ್ತಿದ್ದ ಕೆಲವು ಬೈಕರ್‌ಗಳು ಮಧ್ಯ ಪ್ರವೇಶಿಸಿ ನಾಯಿಂದ ಕಂದಮ್ಮನನ್ನು ರಕ್ಷಿಸಲು ಮುಂದಾಗಿದ್ದಾರೆ.

ಮಗುವಿನ ತೂಕಕ್ಕಿಂತ ಶಾಲಾ ಬ್ಯಾಗ್ ತೂಕವೇ ಹೆಚ್ಚಾಯಿತೇ? ತಂದೆಯ ಭಾವುಕ ಪೋಸ್ಟ್ ವೈರಲ್!

ಈ ವಿಡಿಯೊವು ಇಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಕಾಟದ ಬಗ್ಗೆ, ವಿಶೇಷವಾಗಿ ರಾತ್ರಿ ವೇಳೆ ಮಕ್ಕಳು ಮತ್ತು ಪಾದಚಾರಿಗಳ ಸುರಕ್ಷತೆಯ ಬಗ್ಗೆ ನಿವಾಸಿಗಳಲ್ಲಿ ಕಳವಳವನ್ನು ಹುಟ್ಟುಹಾಕಿದೆ. ಮಗುವಿನ ಸ್ಥಿತಿಯ ಬಗ್ಗೆ ಅಥವಾ ಘಟನೆಯ ನಂತರ ಅಧಿಕಾರಿಗಳು ಏನಾದರೂ ಕ್ರಮ ಕೈಗೊಂಡಿದ್ದಾರೆಯೇ ಎಂಬುದರ ಕುರಿತು ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ.

ದೆಹಲಿಯಲ್ಲಿ ಎನ್‍ಕೌಂಟರ್

ದೆಹಲಿ ಪೊಲೀಸ್ ವಿಶೇಷ ದಳ ಗುರುವಾರ ಬೆಳಗ್ಗೆ (ಜನವರಿ 8) ಎರಡು ಪ್ರತ್ಯೇಕ ಪ್ರದೇಶಗಳಲ್ಲಿ ಪ್ರಮುಖ ಕಾರ್ಯಾಚರಣೆ ನಡೆಸಿತು. ಘಾಜಿಪುರ ಮತ್ತು ಬವಾನಾದಲ್ಲಿ ದೆಹಲಿ ಪೊಲೀಸರು ಮತ್ತು ಆರೋಪಿಗಳ ನಡುವಿನ ಎನ್‌ಕೌಂಟರ್‌ ನಡೆದು ಮೂವರನ್ನು ಬಂಧಿಸಲಾಗಿದೆ. ಘಟನೆಯಲ್ಲಿ ಇಬ್ಬರು ಆರೋಪಿಗಳಿಗೆ ಗುಂಡು ಹಾರಿಸಲಾಗಿದ್ದು, ಬವಾನಾದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬ ಪೊಲೀಸ್ ಕೂಡ ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ, ಗಾಯಗೊಂಡ ಪೊಲೀಸ್ ಅಧಿಕಾರಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ.

ದೆಹಲಿ ಪೊಲೀಸ್ ವಿಶೇಷ ದಳದ ತಂಡವೊಂದು ಬವಾನಾ ಪ್ರದೇಶದಲ್ಲಿ ಕುಖ್ಯಾತ ರಾಜೇಶ್ ಬವಾನಿಯಾ ಗ್ಯಾಂಗ್‌ನ ಸದಸ್ಯರ ಮೇಲೆ ದಾಳಿ ನಡೆಸಿತು. ಪೊಲೀಸರು ಈ ಗ್ಯಾಂಗ್ ಅನ್ನು ಬಹಳ ಸಮಯದಿಂದ ಮೇಲ್ವಿಚಾರಣೆ ಮಾಡುತ್ತಿದ್ದರು. ಕಾರ್ಯಾಚರಣೆಯ ಸಮಯದಲ್ಲಿ, ಪೊಲೀಸರು ಅಂಕಿತ್ ಮಾನ್ ಎಂಬ ಗ್ಯಾಂಗ್ ಸದಸ್ಯನನ್ನು ಎದುರಿಸಿದರು.

ಗುಂಡಿನ ಚಕಮಕಿಯಲ್ಲಿ ಅಂಕಿತ್ ಮಾನ್ ಗುಂಡು ಹಾರಿಸಿ ಗಾಯಗೊಂಡ. ಪೊಲೀಸ್ ತಂಡವು ತಕ್ಷಣ ಆತನನ್ನು ಬಂಧಿಸಿ ಆಸ್ಪತ್ರೆಗೆ ಸಾಗಿಸಿತು. ಎನ್‌ಕೌಂಟರ್‌ನಲ್ಲಿ ಪೊಲೀಸ್ ಅಧಿಕಾರಿಗೂ ಗುಂಡು ತಗುಲಿತು. ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.