Viral Video: ಶಿಕ್ಷಕಿಗೆ ಬೀಸಣಿಕೆಯಿಂದ ಗಾಳಿ ಹಾಕಿದ ವಿದ್ಯಾರ್ಥಿ: ಸರ್ಕಾರಿ ಶಾಲೆಯ ಶಿಕ್ಷಣ ಗುಣಮಟ್ಟ ಬಗ್ಗೆ ಪ್ರಶ್ನೆ ಮಾಡಿದ ನೆಟ್ಟಿಗರು!
ಮಧ್ಯಪ್ರದೇಶದ ಸರ್ಕಾರಿ ಶಾಲೆಯೊಂದರಲ್ಲಿ ಅಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಶಿಕ್ಷಕಿ ಫೋನ್‌ನಲ್ಲಿ ಮಾತನಾಡುತ್ತ ಬ್ಯುಸಿ ಇದ್ದು ವಿದ್ಯಾರ್ಥಿ ಕೈ ಬೀಸಣಿಕೆಯಿಂದ ಗಾಳಿ ಹಾಕುತ್ತಿರುವ ದೃಶ್ಯ ಕಂಡು ಬಂದಿದೆ...ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಬೇಕಾದ ಶಿಕ್ಷಕಿಯೂ ವಿದ್ಯಾರ್ಥಿಯನ್ನು ವೈಯಕ್ತಿಕ ಕೆಲಸಕ್ಕೆ ಬಳಸಿ ಕೊಂಡಿರುವುದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಶಿಕ್ಷಕಿಗೆ ಬೀಸಣಿಕೆಯಿಂದ ಗಾಳಿ ಹಾಕಿದ ವಿದ್ಯಾರ್ಥಿ -
ಮಧ್ಯಪ್ರದೇಶ,ಎ.9: ಇತ್ತೀಚೆಗೆ ಸರ್ಕಾರಿ ಶಾಲೆಯ ಶಿಕ್ಷಣದ ಗುಣಮಟ್ಟ ಬಗ್ಗೆ ಹಲವು ಆರೋಪಗಳು ಕೇಳಿಬಂದಿವೆ. ಈ ನಡುವೆ ಮಧ್ಯಪ್ರದೇಶದ ಸರ್ಕಾರಿ ಶಾಲೆಯೊಂದರಲ್ಲಿ ಅಘಾತಕಾರಿ ಘಟನೆ ಯೊಂದು ಬೆಳಕಿಗೆ ಬಂದಿದೆ. ಶಿಕ್ಷಕಿ ಫೋನ್‌ನಲ್ಲಿ ಮಾತನಾಡುತ್ತ ಬ್ಯುಸಿ ಇದ್ದು ವಿದ್ಯಾರ್ಥಿ ಕೈ ಬೀಸಣಿಕೆಯಿಂದ ಗಾಳಿ ಹಾಕುತ್ತಿರುವ ದೃಶ್ಯ ಕಂಡು (Viral News) ಬಂದಿದೆ.
ಮಧ್ಯಪ್ರದೇಶದ ರೀವಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಈ ಘಟನೆ ಕಂಡು ಬಂದಿದೆ. ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಬೇಕಾದ ಶಿಕ್ಷಕಿಯೂ ವಿದ್ಯಾರ್ಥಿಯನ್ನು ವೈಯಕ್ತಿಕ ಕೆಲಸಕ್ಕೆ ಬಳಸಿ ಕೊಂಡಿರುವುದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.
ವಿಡಿಯೋ ನೋಡಿ:
कान में ईयरफोन, मैम बातचीत में व्यस्त. बच्चा पंखा हांके पड़ा है.
— Priya singh (@priyarajputlive) April 8, 2026
ये शिक्षा व्यवस्था के नाम पर मजाक नहीं तो क्या है. वीडियो मध्य प्रदेश के रीवा जिले के एक सरकारी स्कूल का है. pic.twitter.com/8UEulkb0em
ವಿಡಿಯೊದಲ್ಲಿ ಶಿಕ್ಷಕಿ ಇಯರ್‌ಫೋನ್‌ಗಳನ್ನು ಧರಿಸಿ ಫೋನ್‌ನಲ್ಲಿ ಮಾತನಾಡುತ್ತಿರುವುದನ್ನು ಕಾಣಬಹುದು. ಅವರ ಹತ್ತಿರ ನಿಂತಿದ್ದ ಪುಟ್ಟ ವಿದ್ಯಾರ್ಥಿ ಕೈ ಬೀಸಣಿಕೆಯಿಂದ ಗಾಳಿ ಹಾಕುತ್ತಿದೆ. ವಿದ್ಯಾರ್ಥಿಯು ದಣಿದಂತೆ ಕಾಣುತ್ತಿದ್ದು ಎರಡು ಕೈಗಳನ್ನು ಬದಲಾಯಿಸುತ್ತಿದ್ದರೂ ಶಿಕ್ಷಕಿ ಇದನ್ನು ಗಮನಿಸಿಲ್ಲ. ಪ್ರಿಯಾ ಸಿಂಗ್ ಅವರು X ನಲ್ಲಿ ಹಂಚಿಕೊಂಡಿರುವ ಈ ವೀಡಿಯೊ ಮಧ್ಯಪ್ರದೇಶದ ರೇವಾ ಜಿಲ್ಲೆಯ ಸರ್ಕಾರಿ ಶಾಲೆಯದ್ದಾಗಿದ್ದು ಅನೇಕರು ಆಕ್ರೋಶ ಹೊರಹಾಕಿದ್ದಾರೆ.
Viral News: ನಾಯಿಯ ಪಾಲನೆಗೆ ತಿಂಗಳಿಗೆ 15,000 ರೂ. ಖರ್ಚು! ಬೆಂಗಳೂರಿನ ದಂಪತಿ ಶ್ವಾನ ಪ್ರೇಮ
ತಕ್ಷಣವೇ ಶಿಕ್ಷಕಿಯನ್ನು ಅಮಾನತುಗೊಳಿಸಿ ಎಂದು ಹಲವಾರು ಕಾಮೆಂಟ್‌ನಲ್ಲಿ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.ಈ ವಿಡಿಯೋ ಎಲ್ಲೆಡೆ ಹರಿದಾಡುತ್ತಿದ್ದರೂ, ಸಂಬಂಧಪಟ್ಟ ಶಿಕ್ಷಣ ಇಲಾಖೆಯ ಅಧಿಕಾರಿಗಳು ಈವರೆಗೆ ಯಾವುದೇ ಕ್ರಮ ಜರುಗಿಸಿದ ಬಗ್ಗೆ ವರದಿಯಾಗಿಲ್ಲ.ಈ ವೀಡಿಯೊ ಮತ್ತೊಮ್ಮೆ ಸರ್ಕಾರಿ ಶಾಲೆಯ ಶಿಕ್ಷಣ ಬಗ್ಗೆ ಪ್ರಶ್ನೆ ಮಾಡುವಂತೆ ಮಾಡಿದೆ.